Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬರಹಗಾರರು ಓದುಗರ ಧ್ವನಿಯಾಗಬೇಕು: ಕೊಂಕಣಿ...

ಬರಹಗಾರರು ಓದುಗರ ಧ್ವನಿಯಾಗಬೇಕು: ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ

ಕವಿ, ವಿಮರ್ಶಕ ಎಚ್‌. ಎಂ. ಪೆರ್ನಾಲ್ ಅವರ ಕವಿತಾ ಸಂಕಲನ 'ಜನೆಲ್' ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ28 Jun 2025 11:38 AM IST
share
ಬರಹಗಾರರು ಓದುಗರ ಧ್ವನಿಯಾಗಬೇಕು: ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ

ಮಂಗಳೂರು: "ಜೀವನವು ಪ್ರಕೃತಿ ಮತ್ತು ವಿಕೃತಿಯ ನಡುವಿನ ನಿರಂತರ ಸಂಘರ್ಷವಾಗಿದೆ. ಈ ಹೋರಾಟವು ಹೌದು ಮತ್ತು ಇಲ್ಲ ಎಂಬ ಆಯ್ಕೆಗಳಿಂದ ತುಂಬಿದೆ. ಪ್ರತಿಯೊಬ್ಬ ಮನುಷ್ಯನೂ ಈ ನಿರ್ಧಾರಗಳ ಮೂಲಕ ತಮ್ಮ ದಾರಿಯನ್ನು ಕಂಡುಕೊಳ್ಳುತ್ತಾನೆ. ಸಾಹಿತ್ಯದ ಪಾತ್ರವು ಈ ಗೊಂದಲದ ಮೂಲಕ ಅವರಿಗೆ ಮಾರ್ಗದರ್ಶನ ನೀಡುತ್ತದೆ" ಎಂದು ಜ್ಞಾನಪೀಠ ಪುರಸ್ಕೃತ ಕೊಂಕಣಿ ಸಾಹಿತಿ ದಾಮೋದರ ಮಾವ್ಜೊ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಎಂಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕವಿ / ವಿಮರ್ಶಕ ಎಚ್‌. ಎಂ. ಪೆರ್ನಾಲ್ ಅವರ ಕವಿತಾ ಸಂಕಲನ 'ಜನೆಲ್' ಬಿಡುಗಡೆ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

"ಇಂದಿನ ಓದುಗರು ಬದಲಾಗಿದ್ದಾರೆ. ಅವರು ಸಾಹಿತ್ಯದಲ್ಲಿ ತಮ್ಮನ್ನು ತಾವು ಹುಡುಕುತ್ತಾರೆ. ಬರಹಗಾರರು ಅವರ ಧ್ವನಿಯಾಗಬೇಕು. ಎಚ್‌ಎಂ ಪೆರ್ನಾಲ್ ಅವರ ಕವಿತೆಗಳು ಈ ಸಂಘರ್ಷವನ್ನು ಪ್ರತಿಧ್ವನಿಸುತ್ತವೆ. ಅವರ ಕವಿತೆಗಳು ಆಗಾಗ್ಗೆ ಕಗ್ಗತ್ತಲೆಯ ಛಾಯೆಯನ್ನು ಹೊಂದಿರುತ್ತವೆ, ಆದರೆ ಆ ಕಗ್ಗತ್ತಲೆಯೊಳಗೆ ಅನಿರ್ವಾದ್ಯ ಸತ್ಯವಿದೆ, ಅದನ್ನು ವಿಶಿಷ್ಟ ವ್ಯಂಗ್ಯದೊಂದಿಗೆ ಮಂಡಿಸಲಾಗಿದೆ" ಎಂದು ಮಾವ್ಜೋ ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಿಶನ್ ಕೊಂಕಣಿ ಪ್ರವರ್ತಕರಾದ ಶ್ರೀ ಮೈಕಲ್ ಡಿ’ಸೋಜಾ, ಕೊಂಕಣಿ ಸಾಹಿತ್ಯವನ್ನು ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಪೆರ್ನಾಲ್ ಅವರ ಸಮರ್ಪಣೆಯನ್ನು ಶ್ಲಾಘಿಸಿದರು. "ನಾವು ಎಂದಿಗೂ ಮರೆಯಬಾರದ ಮೂರು ವಿಷಯಗಳಿವೆ: ನಮ್ಮ ಪೋಷಕರು, ನಮ್ಮ ಮಾತೃಭಾಷೆ ಮತ್ತು ನಮ್ಮ ಮಾತೃಭೂಮಿ. ಎಚ್‌ಎಂ ಪೆರ್ನಾಲ್ ಮತ್ತು ಅವರ ಸಹವರ್ತಿಗಳು ತಮ್ಮ ಸಾಹಿತ್ಯ ಪ್ರಯತ್ನಗಳ ಮೂಲಕ ಈ ಮೌಲ್ಯಗಳನ್ನು ಎತ್ತಿಹಿಡಿದಿದ್ದಾರೆ. ವಿಶನ್ ಕೊಂಕಣಿ ಈಗಾಗಲೇ 21 ಕೊಂಕಣಿ ಬರಹಗಾರರ ಕೃತಿಗಳನ್ನು ಬಿಡುಗಡೆ ಮಾಡಿದೆ, ಮತ್ತು ಈ ಚೈತನ್ಯವು ಮುಂದುವರಿಯಬೇಕು" ಎಂದರು.

ಕೇಂದ್ರ ಸಾಹಿತ್ಯ ಅಕಾಡೆಮಿ, ಕೊಂಕಣಿ ಸಲಹಾ ಸಮಿತಿಯ ಸಂಚಾಲಕ ಕವಿ ಮೆಲ್ವಿನ್ ರೊಡ್ರಿಗಸ್, ಜನೆಲ್ ಪುಸ್ತಕವನ್ನು ಪರಿಚಯಿಸಿದರು. ಪೆರ್ನಾಲ್ ಅವರ ಕವಿತೆಗಳು ಸಾಮಾನ್ಯ ಅನುಭವಗಳನ್ನು ಗಾಢವಾದ ಸತ್ಯಗಳಾಗಿ ಪರಿವರ್ತಿಸುತ್ತದೆ. ಮೊದಲ ನೋಟಕ್ಕೆ ಕಗ್ಗತ್ತಲೆಯಂತೆ ಕಾಣಬಹುದು, ಆದರೆ ಆ ಕಗ್ಗತ್ತಲೆಯೊಳಗೆ ಅನುಕ್ತ ಸತ್ಯಗಳಿವೆ " ಎಂದು ರೊಡ್ರಿಗಸ್ ಹೇಳಿದರು.

ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ ಶೆಣೈ ಮತ್ತು ಕವಿತಾ ಟ್ರಸ್ಟ್‌ನ ಅಧ್ಯಕ್ಷ ಕಿಶೂ ಬಾರ್ಕೂರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎಚ್‌ಎಂ ಪೆರ್ನಾಲ್ ಸ್ವಾಗತಿಸಿದರು. ಕವಿ, ಚಿಂತಕ ಟೈಟಸ್ ನೊರೊನ್ಹಾ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X