Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೊಲೀಸರು ದೈಹಿಕ ಮತ್ತು ಮಾನಸಿಕ...

ಪೊಲೀಸರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸಬಾರದು: ನಜ್ಮಾ ಫಾರೂಕಿ

ವಾರ್ತಾಭಾರತಿವಾರ್ತಾಭಾರತಿ29 Sept 2024 8:31 PM IST
share
ಪೊಲೀಸರು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸಬಾರದು: ನಜ್ಮಾ ಫಾರೂಕಿ

ಮಂಗಳೂರು: ಪೊಲೀಸರು ಯಾವ ಕಾರಣಕ್ಕೂ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಪ್ರತಿದಿನ ವ್ಯಾಯಾಮಕ್ಕೆ, ಪೌಷ್ಠಿಕಾಂಶಭರಿತ ಆಹಾರ ಸೇವನೆಗೆ ಆದ್ಯತೆ ನೀಡಬೇಕು ಎಂದು ಮಂಗಳೂರು ಪೊಲೀಸ್ ಕಮಿಷನರೆಟ್‌ನ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತೆ ನಜ್ಮಾ ಫಾರೂಕಿ ಸಲಹೆ ನೀಡಿದ್ದಾರೆ.

ಆ್ಯಂಟಿ ಪೊಲ್ಯೂಶನ್ ಡ್ರೈವ್ ಫೌಂಡೇಶನ್ (ಎಪಿಡಿಎಫ್)ನ ನೇತೃತ್ವದಲ್ಲಿ ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್‌ನ ಸಹಭಾಗಿತ್ವದಲ್ಲಿ ನಗರದ ಕದ್ರಿ ಪೊಲೀಸ್ ಠಾಣೆಯಲ್ಲಿ ರವಿವಾರ ನಡೆದ ಸಂಚಾರ ಪೊಲೀಸರ ಶ್ವಾಸಕೋಶದ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವೃತ್ತಿ ಬದುಕಿನ ನಡುವೆ ಆರೋಗ್ಯಕ್ಕೂ ಗಮನ ಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ಉಂಟಾಗುವ ಸಾಧ್ಯತೆಗಳೂ ಇರುತ್ತವೆ. ಶ್ವಾಸಕೋಶದ ಆರೋಗ್ಯಕ್ಕೆ ಪೂರಕವಾಗಿ ಯೋಗದಂತಹ ಚಟುವಟಿಕೆಗಳನ್ನು ನಡೆಸಬಹುದು. ಪ್ರತಿ ದಿನ ವಾಕಿಂಗ್ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು ಎಂದು ನಜ್ಮಾ ಫಾರೂಕಿ ಹೇಳಿದರು.

ಎಜೆ ಆಸ್ಪತ್ರೆಯ ಶ್ವಾಸಕೋಶ ಚಿಕಿತ್ಸಾ ವಿಭಾಗದ ಡಾ. ಆದರ್ಶ್ ಮಾತನಾಡಿ, ಸಂಚಾರ ಪೊಲೀಸರು ಧೂಳು, ಹೊಗೆಯ ನಡುವೆ ಕೆಲಸ ಮಾಡುವ ಅನಿವಾರ್ಯತೆ ಇರುತ್ತದೆ. ಇದು ಕೂಡ ಶ್ವಾಸಕೋಶದ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಆದರೆ ಇದಕ್ಕಿಂತಲೂ ಹೆಚ್ಚಾಗಿ ಧೂಮಪಾನ ಶ್ವಾಸಕೋಶದ ಮೇಲೆ ಗಂಭೀರ ದುಷ್ಪರಿಣಾಮ ಉಂಟು ಮಾಡುತ್ತದೆ. ಅಂತಹ ಚಟವಿದ್ದರೆ ತ್ಯಜಿಸುವುದು ಒಳ್ಳೆಯದು. ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮಕ್ಕೆ ಸಮಯ ಮೀಸಲಿಡಬೇಕು. ಪೌಷ್ಠಿಕ ಆಹಾರ ಸೇವನೆ ಮಾಡಬೇಕು. ಪ್ರತೀ ವರ್ಷ ಶ್ವಾಸಕೋಶದ ತಪಾಸಣೆ ಕೂಡ ಮಾಡಿಸಿಕೊಳ್ಳಬೇಕು ಎಂದರು.

ಕದ್ರಿ ಸಂಚಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಆನಂದ್, ಎಎಸ್‌ಐ ಸುಧಾಕರ್, ಎಜೆ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್‌ನ ಆಡಳಿತಾಧಿಕಾರಿ ಡಾ. ಜಯರಾಜ್, ಎಪಿಡಿಎಫ್ ಯೋಜನಾ ಸಂಯೋಜಕಿ ಗೀತಾ ಸೂರ್ಯ, ಸಾರ್ವಜನಿಕ ಸಂಪರ್ಕಾಧಿಕಾರಿ ಭಾಸ್ಕರ ಅರಸ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X