ಬಿ.ಸಿ.ರೋಡ್| ಗಾಂಜಾ ವಶ: ಆರೋಪಿ ಸೆರೆ

ಬಂಟ್ವಾಳ: ಬಂಟ್ವಾಳ ವಲಯ ವ್ಯಾಪ್ತಿಯ ಬಿ.ಸಿ.ರೋಡ್ ಬಳಿಯ ರೈಲ್ವೆ ಹಳಿ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಸಂತೋಷ್ ಸೋಂಕರ್ (28) ಎಂಬಾತನನ್ನು ಅಬಕಾರಿ ಸಿಬ್ಬಂದಿ ವರ್ಗ ಬಂಧಿಸಿದೆ.
ಆರೋಪಿ 1,173 ಪ್ಲಾಸ್ಟಿಕ್ ಸಾಚೆಟ್‌ಗಳಲ್ಲಿ ತುಂಬಿಸಿಟ್ಟಿದ್ದ 6.590 ಕೆ.ಜಿ ಗಾಂಜಾವನ್ನು ವಶಪಡಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮಂಗಳೂರು ವಿಭಾಗದ ಅಬಕಾರಿ ಜಂಟಿ ಆಯುಕ್ತರ ನಿರ್ದೇಶನದಂತೆ, ಅಬಕಾರಿ ಉಪ ಆಯುಕ್ತರ ಮತ್ತು ಬಂಟ್ವಾಳ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ಮಾರ್ಗದರ್ಶನದಂತೆ ಬಂಟ್ವಾಳ ವಲಯದ ಅಬಕಾರಿ ನಿರೀಕ್ಷಕ ಲಕ್ಷ್ಮಣ್ ಶಿವಣಗಿ ಹಾಗೂ ಅಬಕಾರಿ ಸಿಬ್ಬಂದಿಗಳಾದ ಪ್ರಕಾಶ್, ಬಸವರಾಜ, ಶ್ರೀನಿವಾಸ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Next Story





