ಅಧಿಕಾರ ಯಾರಿಗೂ ಶಾಶ್ವತ ಅಲ್ಲ: ಸತೀಶ್ ಜಾರಕಿಹೊಳಿ

ಮಂಗಳೂರು: ಯಾರಿಗೂ ಅಧಿಕಾರ ಶಾಶ್ವತ ಅಲ್ಲ. ಯಾವತ್ತಿದ್ದರೂ ಅಧಿಕಾರ ಬಿಡಬೇಕು, ಹತ್ತು ವರ್ಷದ ನಂತರವಾದರೂ ಬಿಡಬೇಕು. ಆದರೆ ಯಾವಾಗ ಅಧಿಕಾರ ಬಿಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಗಾಂಧಿ-ಗುರು ಸಂವಾದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ
ಸಿಎಂ ಸಿದ್ದರಾಮಯ್ಯ ಮತ್ತು ಕೆ.ಸಿ.ವೇಣುಗೋಪಾಲ್ ಭೇಟಿ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.
ಕೊಣಾಜೆಯಲ್ಲಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಬಂದಿದ್ದಾರಷ್ಟೇ. ಯಾವುದೇ ರಾಜಕೀಯ ಮಾತುಕತೆ ಆಗಿಲ್ಲ. ವೇಣುಗೋಪಾಲ್ ಮತ್ತು ಸಿಎಂ ಮಧ್ಯೆ ಏನು ಮಾತುಕತೆ ಆಗಿದೆ ಎಂದು ಅವರನ್ನೆ ಕೇಳಬೇಕು ಎಂದರು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಪರ ಜೈಕಾರದ ಬಗ್ಗೆ ಪ್ರಶ್ನೆಗೆ, ಜೈಕಾರದಿಂದ ಯಾವುದೇ ಪ್ರಯೋಜನ ಆಗಲ್ಲ. ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ.
ಎಲ್ಲಾ ತಿಳಿಯಾಗಿದೆ, ಉಭಯ ನಾಯಕರು ಈಗಾಗಲೇ ಮಾತುಕತೆ ನಡೆಸಿದ್ದಾರೆ ಎಂದರು.
Next Story





