Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶ-ವಿದೇಶಿ ಪ್ರವಾಸಿಗರ ಆಕರ್ಷಣೆ:...

ದೇಶ-ವಿದೇಶಿ ಪ್ರವಾಸಿಗರ ಆಕರ್ಷಣೆ: ಮಂಗಳೂರಿನಲ್ಲಿ ‘ಮ್ಯಾಂಗಳೂರ್ ಐ’ ಯೋಜನೆಗೆ ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ24 Jun 2024 3:30 PM IST
share
ದೇಶ-ವಿದೇಶಿ ಪ್ರವಾಸಿಗರ ಆಕರ್ಷಣೆ: ಮಂಗಳೂರಿನಲ್ಲಿ ‘ಮ್ಯಾಂಗಳೂರ್ ಐ’ ಯೋಜನೆಗೆ ಸಿದ್ಧತೆ

ಮಂಗಳೂರು: ದೇಶ-ವಿದೇಶದ ಪ್ರವಾಸಿಗರನ್ನು ಮಂಗಳೂರಿಗೆ ಆಕರ್ಷಿಸುವ ಸಲುವಾಗಿ ‘ಮ್ಯಾಂಗಳೂರ್ ಐ’ ಯೋಜನೆಯೊಂದರ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಈಗಾಗಲೆ ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಮತ್ತು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಹಾಗಾಗಿ ಈ ಯೋಜನೆ ಕಾರ್ಯಗತಗೊಂಡರೆ ಮಂಗಳೂರಿನ ಆಕರ್ಷಣೆ ಹೆಚ್ಚಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ದುಬೈಯ ದುಬೈ ಫ್ರೇಮ್, ಪ್ಯಾರಿಸ್‌ನ ಐಫೆಲ್ ಟವರ್ ಮಾದರಿಯಲ್ಲೇ ಮಂಗಳೂರಿನಲ್ಲೂ ‘ಮ್ಯಾಂಗಳೂರ್ ಐ’ ನಿರ್ಮಿಸಬೇಕು ಎಂಬ ಕನಸು ನನಸಾಗಲು ಯೋಜನೆ ರೂಪಿಸಲಾಗುತ್ತಿದೆ.

ವರ್ಷಂಪ್ರತಿ ಮಂಗಳೂರು ನಗರ ಸಹಿತ ಜಿಲ್ಲೆಗೆ ಲಕ್ಷಾಂತರ ಪ್ರವಾಸಿಗರು ದೇಶ- ವಿದೇಶದಿಂದ ಆಗಮಿಸುತ್ತಿರುವುದು ಗಮನಾರ್ಹ. ಇದಕ್ಕೆ ದ.ಕ. ಜಿಲ್ಲೆಯ ಕರಾವಳಿ ತೀರವು ಬೀಚ್, ಗ್ರಾಮಾಂತರ ಭಾಗವು ಪಶ್ಚಿಮ ಘಟ್ಟದ ಪ್ರಾಕೃತಿಕ ಸೊಬಗಿನೊಂದಿಗೆ ಧಾರ್ಮಿಕ, ಸಾಂಸ್ಕೃತಿಕ, ಜಾನಪದ ವೈವಿಧ್ಯತೆಯ ಪ್ರವಾಸಿ ತಾಣವಾಗಿ ಗುರುತಿಸಲ್ಪಟ್ಟಿರುವುದೇ ಕಾರಣವಾಗಿದೆ.

ಆದರೆ ಹೀಗೆ ಬಂದು ಹೋಗುವ ಪ್ರವಾಸಿಗರನ್ನು ಕೆಲವು ದಿನದ ಮಟ್ಟಿಗಾದರೂ ಮಂಗಳೂರಿನಲ್ಲೇ ತಂಗುವಂತೆ ಮಾಡುವ ಪ್ರಮುಖ ಪ್ರವಾಸಿ ತಾಣಗಳ ಕೊರತೆ ಇದೆ. ಇದಕ್ಕೆ ಪೂರಕವಾಗಿ ‘ಮ್ಯಾಂಗಳೂರು ಐ’ ಎಂಬ ಹೆಸರಿನ ಹೊಸ ಯೋಜನೆಗೆ ಸಿದ್ಧತೆ ನಡೆಸಲಾಗುತ್ತಿದೆ.

ನಗರದ ಕದ್ರಿ ಸಮೀಪದ ಕೆಪಿಟಿ ಬಳಿಯಿರುವ ಸ್ಕೇಟಿಂಗ್ ಗ್ರೌಂಡ್ ಬಳಿ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ‘ಮ್ಯಾಂಗಳೂರ್ ಐ’ ಯೋಜನೆ ರೂಪಿಸಲು ಉದ್ದೇಶಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ, ಬೀಚ್ ಹಾಗೂ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಸ್ಥಳ ಇದಾಗಿದ್ದು, ಈ ಬಗ್ಗೆ ಡಿಪಿಆರ್ ತಯಾರಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ಗೆ ಸ್ಪೀಕರ್ ಯು.ಟಿ.ಖಾದರ್ ನಿರ್ದೇಶನ ನೀಡಿದ್ದಾರೆ.

ದ.ಕ.ಜಿಲ್ಲೆಯು ಪ್ರವಾಸಿ ಕೇಂದ್ರವಾಗಿದೆ. ಇಲ್ಲಿಗೆ ದಿನನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗೆ ಬರುವವರು ಒಂದೆರೆಡು ದಿನದ ವೀಕ್ಷಣೆ ಮಾಡಿ ಬೇರೆ ಬೇರೆ ಕಡೆ ತೆರಳುತ್ತಾರೆ. ದೇಶ-ವಿದೇಶದ ಪ್ರವಾಸಿಗರನ್ನು ಕೆಲವು ದಿನದ ಮಟ್ಟಿಗೆ ಮಂಗಳೂರಿನಲ್ಲೇ ವಾಸ್ತವ್ಯ ಹೂಡುವಂತೆ ಮಾಡುವುದು ‘ಮ್ಯಾಂಗಳೂರು ಐ’ ಯೊಜನೆಯ ಉದ್ದೇಶವಾಗಿದೆ. ಜಿಲ್ಲೆಯ ಇತರ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸಲು ಇದು ಪೂರಕವಾಗಿದೆ.

- ಯು.ಟಿ.ಖಾದರ್, ಸ್ಪೀಕರ್, ರಾಜ್ಯ ವಿಧಾನಸಭೆ

ಮ್ಯಾಂಗಳೂರು ಐ ಯೋಜನೆಗೆ ಸಂಬಂಧಿ ಸಿದಂತೆ ಉನ್ನತ ಮಟ್ಟದ ಅಧಿಕಾರಿಗಳ ಜತೆ ಬೆಂಗಳೂರಿನಲ್ಲಿ ಮಾತುಕತೆ ನಡೆಸಲಾಗಿದೆ. ಅಅಲ್ಲದೆ ಡಿಪಿಆರ್ ತಯಾರಿಸುವಂತೆ ನಿರ್ದೇಶನವೂ ಬಂದಿದ್ದು, ಅದರಂತೆ ಸಿದ್ಧತೆ ನಡೆಸಲಾಗುತ್ತಿದೆ.

-ಮುಲ್ಲೈ ಮುಗಿಲನ್, ದ.ಕ.ಜಿಲ್ಲಾಧಿಕಾರಿ

‘ಮ್ಯಾಂಗಳೂರು ಐ’ನಲ್ಲಿ ಏನಿರಲಿದೆ?

►ನಗರ ವೀಕ್ಷಣೆ, ಕಡಲಿನ ಸೌಂದರ್ಯ ವೀಕ್ಷಣೆಗೆ ‘ವ್ಯೆ ಪಾಯಿಂಟ್’ ರಚನೆ

►ಲೈಟ್‌ಹೌಸ್ ಮಾದರಿಯ ಅತೀ ಎತ್ತರದ ಕಟ್ಟಡ

►ಸ್ವಿಮ್ಮಿಂಗ್ ಪೂಲ್‌ನೊಂದಿಗೆ ಐಷಾರಾಮಿ ರೆಸ್ಟೋರೆಂಟ್

►ಶಾಪಿಂಗ್ ಸೆಂಟರ್, ಇನ್‌ಡೋರ್ ಗೇಮ್ಸ್

►ಮಕ್ಕಳ ಆಟಕ್ಕಾಗಿ ಅಮ್ಯೂಸ್‌ಮೆಂಟ್ ಪಾರ್ಕ್

►ತಳಮಹಡಿಯಲ್ಲಿ ಕನ್ವೆನ್ಶನ್ ಸೆಂಟರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X