Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲಾಜಿಸ್ಟಿಕ್ಸ್ ಪಾರ್ಕ್‌ಗಳ ಮೂಲಕ ಸರಕು...

ಲಾಜಿಸ್ಟಿಕ್ಸ್ ಪಾರ್ಕ್‌ಗಳ ಮೂಲಕ ಸರಕು ಸಾಗಾಣೆ ಕಾರಿಕಾಡ್‌ಗೆ ಆದ್ಯತೆ : ಡಾ.ಎಸ್.ಸೆಲ್ವಕುಮಾರ್

ಸಿಐಐ ಮಂಗಳೂರು ವತಿಯಿಂದ ವಿಶೇಷ ಶೃಂಗಸಭೆ

ವಾರ್ತಾಭಾರತಿವಾರ್ತಾಭಾರತಿ24 July 2025 9:05 PM IST
share
ಲಾಜಿಸ್ಟಿಕ್ಸ್ ಪಾರ್ಕ್‌ಗಳ ಮೂಲಕ ಸರಕು ಸಾಗಾಣೆ ಕಾರಿಕಾಡ್‌ಗೆ ಆದ್ಯತೆ : ಡಾ.ಎಸ್.ಸೆಲ್ವಕುಮಾರ್

ಮಂಗಳೂರು: ರಾಜ್ಯ ಸರಕಾರದ ಮಹತ್ವದ ಕೈಗಾರಿಕಾ ನೀತಿ 2025-2030ರಲ್ಲಿ ಕೈಗಾರಿಕೆಗಳಿಗೆ ಅನುಕೂಲ ಕಲ್ಪಿಸಲು ವಿಶ್ವ ದರ್ಜೆಯ ಮೂಲಭೂತ ವ್ಯವಸ್ಥೆಗಳುಳ್ಳ ಬಹುಮಾದರಿಯ ಲಾಜಿಸ್ಟಿಕ್ಸ್ ಪಾರ್ಕ್‌ಗಳ ನಿರ್ಮಾಣದ ಮೂಲಕ ಸರಕು ಸಾಗಾಣೆ ಕಾರಿಕಾಡ್‌ಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್ ತಿಳಿಸಿದ್ದಾರೆ.

ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್ ಎಂಬ ವಿಷಯದಲ್ಲಿ ಸಿಐಐ ಮಂಗಳೂರು ವತಿಯಿಂದ ಗುರುವಾರ ನಗರದಲ್ಲಿ ನಡೆದ ವಿಶೇಷ ಶೃಂಗಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬೆಂಗಳೂರು ಜೊತೆಗೆ ಟಯರ್ 2 ಹಾಗೂ ಟಯರ್ 3 ನಗರಗಳ ಅಭಿವೃದ್ದಿಗೆ ಒತ್ತು ನೀಡಲಾಗುವುದು. ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಡಿ ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ, ಕಲಬುರ್ಗಿ ನಗರಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು.

ಈ ಯೋಜನೆಯನ್ನು ಸಮರ್ಪಕ ಹಾಗೂ ಸುವ್ಯವಸ್ಥಿತವಾಗಿ ಡಾ.ಎಸ್.ಸೆಲ್ವಕುಮಾರ್ ಹೇಳಿದರು.

ಕಾರ್ಮಿಕ ಕಾನೂನಿನಲ್ಲಿ ಸುಧಾರಣೆ ತರಲಾಗಿದೆ. ಕೈಗಾರಿಕಾ ಸ್ಥಾಪನೆಗೆ ವಿವಿಧ ಇಲಾಖೆಗಳ ಅನು ಮೋದನೆ ಪ್ರಕ್ರಿಯೆಯನ್ನು ಸರಳೀಕೃತ ಮಾಡಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಇನ್ನಷ್ಟು ಸುಧಾರಣೆ ಆಗಬೇಕಾಗಿದೆ. ಈ ಬಗ್ಗೆ ವಿಶೇಷ ಗಮನಹರಿಸಲಾಗುವುದು. ತಲಾ ಆದಾಯದಲ್ಲಿ ದೇಶ ದಲ್ಲಿಯೇ ಕರ್ನಾಟಕ ನಂ.1 ಸ್ಥಾನದಲ್ಲಿದೆ. ಹೂಡಿಕೆ ಹಾಗೂ ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಇನ್ನಷ್ಟು ಸುಧಾರಣೆಗೆ ಎಐ ಬಳಕೆಗೆ ಗಮನಹರಿಸಲಾಗುವುದು ಎಂದರು.

ಕೈಗಾರಿಕೆಗಳ ಬೆಳವಣಿಗೆಗೆ ಕರಾವಳಿ ಭಾಗದಲ್ಲಿ ಒಳ್ಳೆಯ ಅವಕಾಶವಿದೆ. ಈ ನಿಟ್ಟಿನಲ್ಲಿ ಪೂರಕ ಕ್ರಮಗಳು ಸರಕಾರೇತರವಾಗಿ ಖಾಸಗಿ ನೆಲೆಯಿಂದಲೂ ಆಗಬೇಕಿದೆ. ೫ ಸ್ಟಾರ್ ಹೊಟೇಲ್, ಅಂತಾರಾಷ್ಟ್ರೀಯ ಸ್ವರೂಪದ ಸಭಾಂಗಣ, ರೆಸಾರ್ಟ್‌ನಂತಹ ಕೆಲವು ಅವಕಾಶಗಳು ಹಲವು ಹೂಡಿಕೆದಾರರಿಗೆ ಅಗತ್ಯವಿದೆ. ಇದನ್ನು ಖಾಸಗಿ ನೆಲೆಯಿಂದ ಮಾಡಲು ಆದ್ಯತೆ ನೀಡಬೇಕಿದೆ. 900 ಎಕರೆ ಜಾಗ ನಗರಕ್ಕೆ ಹೊಂದಿಕೊಂಡಂತೆ ಲಭ್ಯವಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹೇಳಿದರು.

ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ. ವೆಂಕಟರಮಣ ಅಕ್ಕರಾಜು ಮಾತನಾಡಿ ದ.ಕ. ಮತ್ತು ಉಡುಪಿ ಜಿಲ್ಲೆಯು ರಾಜ್ಯದ ಒಟ್ಟು ಜಿಡಿಪಿಯ ಪೈಕಿ 1.2 ಲಕ್ಷ ಕೋ.ರೂ.ಗಳ ಕೊಡುಗೆಯನ್ನು ನೀಡುತ್ತಿದೆ. ಮಂಗಳೂರಿನವರ ತಲಾ ಆದಾಯವು 4.92 ಲಕ್ಷ ರೂ. ಇದೆ. ಆದರೂ ಕರಾವಳಿ ಭಾಗದ ಅಭಿವೃದ್ದಿ ಬಗ್ಗೆ ಚರ್ಚೆ, ಅವಲೋಕನ ನಡೆಯುತ್ತದೆಯೇ ವಿನಃ ಫಲಿತಾಂಶ ಸಿಗುತ್ತಿಲ್ಲ. ರಾಜ್ಯದ ವಿವಿಧ ಭಾಗಗಳನ್ನು ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಶಿರಾಡಿ, ಸಂಪಾಜೆ ಮಳೆಗಾಲದ ಸಮಯದಲ್ಲಿ ಸಂಪರ್ಕವನ್ನೇ ಕಡಿದುಕೊಳ್ಳುವ ಪರಿಸ್ಥಿತಿಗೆ ಬಂದಿದೆ. ರಾಜ್ಯದ ವಿವಿಧ ಭಾಗದಲ್ಲಿ ರೈತರು ಬೆಳೆದ ಆಹಾರ, ತರಕಾರಿಯನ್ನು ಸಾಗಾಟ ಮಾಡಲು ಸಾಧ್ಯವಾಗುತ್ತಿಲ್ಲ. ಈ ಸಂದರ್ಭ ರೈಲು ಸಂಪರ್ಕವೂ ಆಗುತ್ತಿಲ್ಲ. ವಿಮಾನ ಟಿಕೆಟ್ ದರ 10 ಸಾವಿರ ರೂ.ಗೆ ಏರಿಕೆಯಾಗುತ್ತದೆ ಎಂದು ಹೇಳಿದರು.

ನವಮಂಗಳೂರು ಬಂದರು ಕಳೆದ 5 ವರ್ಷದಲ್ಲಿ 36 ಮೆಟ್ರಿಕ್ ಟನ್‌ನಿಂದ 46 ಮೆಟ್ರಿಕ್ ಟನ್ ಕಾರ್ಗೊ ನಿರ್ವಹಿಸಿದೆ. ಶಿರಾಡಿ- ಸಂಪಾಜೆ ಹೆದ್ದಾರಿ ವ್ಯವಸ್ಥೆ ಉತ್ತಮವಾದರೆ 60 ಮೆಟ್ರಿಕ್ ಟನ್ ನಿರ್ವಹಣೆ ಮಾಡಲು ಸಾಧ್ಯವಿದೆ. ಇದರಿಂದ ಸಾವಿರಾರು ಜನರಿಗೆ ಉದ್ಯೋಗ ಅವಕಾಶ ಲಭಿಸುತ್ತದೆ ಎಂದರು.

ವಿಶೇಷ ಸಂವಾದದಲ್ಲಿ ವೇವ್ಯೆಸ್ ಸೊಲ್ಯುಷನ್ ಸಿಇಒ ಸುಯೋಗ್ ಶೆಟ್ಟಿ, ವಿಪ್ರೊ ರಿಸರ್ಚ್‌ನ ಪ್ರಮುಖರಾದ ಜಿ.ಸುಂದರ್‌ರಾಮಣ್, ರೊಬೋಸಾಪ್ಟ್‌ನ ರೋಹಿತ್ ಭಟ್ ಮಾತನಾಡಿದರು.

ದ.ಕ. ಜಿಪಂ ಸಿಇಒ ನರ್ವಾಡೆ ವಿನಾಯಕ್ ಕರ್ಬಾರಿ, ಸಿಐಐ ಪ್ರಮುಖರಾದ ಅಭಿನವ್ ಬನ್ಸಾಲ್, ಪವನ್ ಕುಮಾರ್ ಸಿಂಗ್, ಸೊಲೊಮೆನ್ ಪುಷ್ಪರಾಜ್ ಉಪಸ್ಥಿತರಿದ್ದರು. ಸಿಐಐ ಮಂಗಳೂರು ಅಧ್ಯಕ್ಷ ನಟರಾಜ್ ಹೆಗ್ಡೆ ಸ್ವಾಗತಿಸಿದರು.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X