Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ...

ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ: ಡಿಸಿ ಮುಲ್ಲೈ ಮುಗಿಲನ್

ವಾರ್ತಾಭಾರತಿವಾರ್ತಾಭಾರತಿ13 Aug 2024 9:10 PM IST
share
ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ: ಡಿಸಿ ಮುಲ್ಲೈ ಮುಗಿಲನ್

ಮಂಗಳೂರು: ಅಡಿಕೆ ಬೆಳೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ತಿಳಿಸಿದ್ದಾರೆ.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲೆಯ ರೈತರ ಸಮಸ್ಯೆಗಳ ಬಗ್ಗೆ ರೈತ ಮುಖಂಡರೊಂದಿಗೆ ನಡೆದ ಚರ್ಚೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಡಿಕೆಗೆ ಬೆಂಬಲ ಬೆಲೆ ನೀಡಬೇಕೆಂದು ರೈತರಿಂದ ಒತ್ತಾಯ ಇದೆ. ಈ ಬಗ್ಗೆ ಪರಿಶೀಲಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು.

ಬೆಳೆಗಳ ರಕ್ಷಣೆಗೆ ರೈತರಿಗೆ ನೀಡುವ ಕೋವಿ ಪರವಾನಿಗೆಯನ್ನು ಸರಳೀಕರಣ ಮಾಡಲು ಪ್ರಯತ್ನಿಸಲಾಗುವುದು. ತಂದೆ ಮರಣದ ನಂತರ ಮಗನಿಗೆ ಕೋವಿ ಪರವಾನಿಗೆಯನ್ನು ಹಸ್ತಾಂತರಿಸುವ ಬಗ್ಗೆ ಗೊಂದಲಗಳನ್ನು ಸರಿಪಡಿಸಲಾಗುವುದು. ಕೋವಿ ಪರವಾನಿಗೆ ಅರ್ಜಿಗಳ ತ್ವರಿತ ವಿಲೇವಾರಿಗೆ ಕೆಳ ಕಚೇರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರೈತರ ಜಮೀನುಗಳ ದಾಖಲೆಗಳ ಗೊಂದಲ ತಪ್ಪಿಸಲು ಪೋಡಿ ಮುಕ್ತ ಅಭಿಯಾನ ನಡೆಸಲಾಗುತ್ತಿದ್ದು, ಇದಕ್ಕೆ ರೈತರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಮಂಗ, ನವಿಲುಗಳ ಪಾರ್ಕ್: ಮಂಗ ಮತ್ತು ನವಿಲುಗಳ ದಾಳಿಯಿಂದ ಬೆಳೆಗಳಿಗೆ ಹಾನಿಯಾಗುವುದನ್ನು ತಪ್ಪಿಸಲು ಮಂಗ ಮತ್ತು ನವಿಲುಗಳ ಪ್ರತ್ಯೇಕ ಪಾರ್ಕ್ ಮಾಡುವ ಬಗ್ಗೆ ಪರಿಶೀಲಿಸಲಾಗುವುದು.ಪ್ರಾಣಿಗಳ ಹಾವಳಿಯಿಂದ ತೆಂಗು ಅಡಿಕೆ ಹಾನಿಯಾದಲ್ಲಿ ಪರಿಹಾರವನ್ನು ನೀಡುವ ಯಾವುದೇ ಯೋಜನೆಗಳಿಲ್ಲ.ಆದರೆ ಮರಗಳು ಹಾನಿಯಾದಲ್ಲಿ ಪರಿಹಾರಗಳನ್ನು ನೀಡಲಾಗುತ್ತದೆ ಎಂದರು.

ವಿದ್ಯುತ್ ಪ್ರಸರಣ ಮಾರ್ಗವನ್ನು ಸ್ಥಾಪಿಸಲು ರೈತರ ಜಮೀನುಗಳನ್ನು ಅಗೆಯುವಂತ ಕೆಲಸವಾಗುತ್ತಿದ್ದು, ಇದರಿಂದ ರೈತರಿಗೆ ನಷ್ಟ್ಟವಾಗುತ್ತಿದೆ. ಕಾನೂನು ಬಾಹಿರವಾಗಿ ಖಾಸಗಿ ಕಂಪನಿಯವರು ಇಂಥ ಕೆಲಸವನ್ನು ನಡೆಸುತ್ತಿದ್ದಾರೆ ಎಂದು ಎಂದು ರೈತ ಮುಖಂಡರು ತಿಳಿಸಿದರು. ಜಿಲ್ಲಾಧಿಕಾರಿಯವರು ಮಾತನಾಡಿ, ವಿದ್ಯುತ್ ಪ್ರಸರಣ ಮಾರ್ಗಗಳನ್ನು ಅಗೆಯು ವುದು ಕಾನೂನು ಬಾಹಿರವಲ್ಲ. ಇದು ಸರ್ಕಾರದ ಒಂದು ಕೆಲಸವಾಗಿದೆ.ಇದರ ಬಗ್ಗೆ ಮಾಲಿಕತ್ವ ಹೊಂದಿರುವ ಕಂಪನಿಯವರನ್ನು ಕರೆದು ರೈತ ಮುಖಂಡರೊಂದಿಗೆ ಸಭೆ ನಡೆಸಲಾಗುತ್ತದೆಎಂದರು.

ಪ್ರತಿ ಮೂರು ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿರೈತ ಮುಖಂಡರೊಂದಿಗೆ ಸಭೆ ನಡೆಸಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ತುಂಬೆ ಡ್ಯಾಮ್ ಬಳಿ ಸವೆದು ಹೋಗಿರುವ ಪ್ರದೇಶಗಳಿಗೆ ಈಗಾಗಲೇ ಸರಕಾರದಿಂದ ಪರಿಹಾರ ಮಂಜೂರು ಮಾಡಿ ದರೂ, ವಿತರಿಸಿಲ್ಲ. ಸಂತ್ರಸ್ತರಿಗೆ ಈವರೆಗೆ ಪರಿಹಾರ ಮೊತ್ತ ಸಿಗದೆ ಪ್ರತಿ ದಿನ ಅಲೆಯುತ್ತಿದ್ದಾರೆ ಎಂದು ರೈತ ಮುಖಂಡರು ಜಿಲ್ಲಾಧಿಕಾರಿಗಳಿಗೆ ತಮ್ಮ ಅಳಲು ತಿಳಿಸಿದರು. ಇನ್ನುಎರಡು ದಿನಗಳಲ್ಲಿ ಪರಿಹಾರಧನ ವಿತರಿಸಲು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಡಾ.ಆನಂದ್ ಕೆ,ಅಪರ ಜಿಲ್ಲಾಧಿಕಾರಿ ಡಾ.ಜಿ ಸಂತೋಷ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಮರಿಯಪ್ಪ, ಸೈಬರ್‌ಕ್ರೈಮ್ ಡಿಎಸ್ಪಿ ಮಂಜುನಾಥ್, ಮಂಗಳೂರು ಉಪವಿಭಾಗಾಧಿಕಾರಿ ಹಷರ್ವರ್ಧನ್,ಪುತ್ತೂರು ಉಪವಿಭಾಗಾಧಿಕಾರಿ ಜುಬಿನ್ ಮಹಾಪಾತ್ರ, ಜಂಟಿ ಕೃಷಿ ನಿರ್ದೇಶಕ ಕೆಂಪೇಗೌಡ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಭಂದಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X