Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನೆಲ್ಯಾಡಿ- ಕೌಕ್ರಾಡಿ ಪೇಟೆ ಉಳಿಸಿ ಹೋರಾಟ...

ನೆಲ್ಯಾಡಿ- ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ

ನೆಲ್ಯಾಡಿಯಲ್ಲಿ ಮೇಲ್ಸೆತುವೆ ನಿರ್ಮಾಣಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Nov 2023 8:38 PM IST
share
ನೆಲ್ಯಾಡಿ- ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯಿಂದ ಪ್ರತಿಭಟನೆ

ಉಪ್ಪಿನಂಗಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ನೆಲ್ಯಾಡಿ ಪೇಟೆಯಲ್ಲಿ ಫ್ಲೈಓವರ್ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ನೆಲ್ಯಾಡಿ- ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಯ ವತಿಯಿಂದ ನ.23ರಂದು ನೆಲ್ಯಾಡಿಯಲ್ಲಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾ ಸಭೆಯಲ್ಲಿ ಸೈಂಟ್ ಜಾರ್ಜ್ ವಿದ್ಯಾಸಂಸ್ಥೆಯ ಸಂಚಾಲಕ ಅಬ್ರಾಹಂ ವರ್ಗೀಸ್ ಮಾತನಾಡಿ, ರಾಷ್ಟೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ಸಂದರ್ಭ ನೆಲ್ಯಾಡಿ ಪೇಟೆಯಲ್ಲಿ ಈಗ ನಿರ್ಮಾಣ ಹಂತದಲ್ಲಿ ಎತ್ತರಿಸಲ್ಪಟ್ಟ ರಸ್ತೆಯು ಪೇಟೆಯ ಮಧ್ಯೆ ಹಾದುಹೋಗುತ್ತಿದೆ. ಇದರಿಂದಾಗಿ ನೆಲ್ಯಾಡಿ ಪೇಟೆಯು ಇಬ್ಭಾಗವಾಗಿದ್ದು, ಒಂದು ಬದಿಯವರಿಗೆ ಇನ್ನೊಂದು ಬದಿ ಕಾಣದಂತೆ, ಆ ಬದಿಯಿಂದ ಈ ಬದಿಗೆ ರಸ್ತೆ ದಾಟಲಿಕ್ಕಾಗದ ಪರಿಸ್ಥಿತಿ ಸ್ಥಿತಿ ನಿರ್ಮಾಣ ಆಗಿದೆ. ಈಗ ಇರುವ ಕಿರಿದಾದ ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರ, ವಾಹನ ನಿಲುಗಡೆ, ವಿದ್ಯಾರ್ಥಿಗಳ, ಗ್ರಾಮಸ್ಥರ ಓಡಾಟಕ್ಕೂ ಅಸಾಧ್ಯವಾಗುತ್ತಿದೆ. ಮಳೆಗಾಲದಲ್ಲಿ ಎರಡೂ ಬದಿ ನೀರು ಹರಿಯುವ ತೋಡುಗಳಾಗಿ ಸರ್ವೀಸ್ ರಸ್ತೆ ಮಾರ್ಪಡುತ್ತಿದೆ. ನೆಲ್ಯಾಡಿ ಪೇಟೆಯ ಅಸ್ತಿತ್ವ ಉಳಿಯಬೇಕಾದರೆ ಇಲ್ಲಿ ಮೇಲ್ಸೆತುವೆ ಕಾಮಗಾರಿ ನಡೆಸುವುದೇ ಅದಕ್ಕಿರುವ ಪರಿಹಾರ. ಆದ್ದರಿಂದ ಸಂಸದರು, ಅಧಿಕಾರಿಗಳು ತಕ್ಷಣ ಸ್ಪಂದಿಸಿ ಇಲ್ಲಿ ಮೇಲ್ಸೆತ್ತುವೆ ಕಾಮಗಾರಿಗೆ ಆದೇಶ ಮಾಡಬೇಕು ಎಂದರು.

ನೆಲ್ಯಾಡಿ ಜ್ಞಾನೋದಯ ಬೆಥನಿ ಪ.ಪೂ.ಕಾಲೇಜಿನ ಪ್ರಾಂಶುಪಾಲ ರೆ. ಫಾ. ವರ್ಗೀಸ್ ಕೈಪುನಡ್ಕ ಮಾತನಾಡಿ, ಇಲ್ಲಿನ ಶೈಕ್ಷಣಿಕ ಸಂಸ್ಥೆಗಳಿಗೆ ದಿನ ನಿತ್ಯ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ರಸ್ತೆ ದಾಟುವುದೇ ಸಮಸ್ಯೆಯಾಗಿದೆ. ಅಲ್ಲದೇ, ಹೆದ್ದಾರಿ ಬದಿಯ ಸರ್ವೀಸ್ ರಸ್ತೆಗಳು ತೀರಾ ಕಿರಿದಾಗಿದ್ದು, ಆದ್ದರಿಂದ ಇಲ್ಲಿ ಮೇಲ್ಸೆತುವೆ ಕಾಮಗಾರಿ ಆಗಲೇ ಬೇಕು. ಕಾಮಗಾರಿ ಹಂತದಲ್ಲೇ ಇದನ್ನು ಸರಿಪಡಿಸಬೇಕಾದ ಅನಿವಾರ್ಯತೆ ಇದ್ದು, ಪಕ್ಷ ಭೇದ ಮರೆತು ಎಲ್ಲರೂ ಒಗ್ಗಟಿನಿಂದ ನ್ಯಾಯ ಸಿಗುವವರೆಗೆ ಹೋರಾಟ ನಡೆಸಬೇಕು ಎಂದರು

ನೆಲ್ಯಾಡಿ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷ ಎ.ಕೆ. ವರ್ಗೀಸ್ ಮಾತನಾಡಿ, ಪಟ್ಟಣದಲ್ಲಿ ಸುಮಾರು 325ಕ್ಕೂ ಮಿಕ್ಕ ವರ್ತಕರು ಉದ್ಯಮ ನಡೆಸುತ್ತಿದ್ದಾರೆ. ಇಲ್ಲಿ ವಾಹನಗಳ ಪಾರ್ಕಿಂಗ್‍ಗೆ ಸ್ಥಳವಕಾಶವಿದ್ದು, ಇಲ್ಲಿ ಈಗ ನಡೆಯುತ್ತಿರುವ ಎತ್ತರಿಸಿದ ರಸ್ತೆ ಕಾಮಗಾರಿ ಮುಂದುವರಿದರೆ ಇಲ್ಲಿನ ವರ್ತಕರು ವ್ಯಾಪಾರವನ್ನು ಕಳೆದುಕೊಳ್ಳುವ ಭೀತಿ ಇದೆ. ಹೋರಾಟ ಸಮಿತಿಯು ಈಗಾಗಲೇ ಮೂರು ಹಂತದಲ್ಲಿ ಅಧಿಕಾರಿಗಳ ಸಹಿತ ಸಂಸದರೊಂದಿಗೆ ಮಾತುಕತೆ ನಡೆಸಿ ವಿವರಣೆ ನೀಡಿ ವಾಸ್ತವಾಂಶವನ್ನು ಮನವರಿಕೆ ಮಾಡಿದೆ. ಮುಂದಿನ ದಿನಗಳಲ್ಲಿ ಕೇಂದ್ರದ ಹೆದ್ದಾರಿ ಸಚಿವರನ್ನು ಸಂಪರ್ಕಿಸಿ ನ್ಯಾಯ ಒದಗಿಸುವಂತೆ ಮಾಡುತ್ತೇವೆ. ನಮ್ಮ ನ್ಯಾಯಯುತ ಬೇಡಿಕೆ ಈಡೇರದೇ ಇದ್ದಲ್ಲಿ ಹೋರಾಟ ಮುಂದುವರಿಯಲಿದೆ ಎಂದರು.

ಪ್ರತಿಭಟನಾ ಸ್ಥಳಕ್ಕೆ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರು ಆಗಮಿಸಿ, ಪ್ರತಿಭಟನಕಾರರಿಂದ ಮನವಿ ಸ್ವೀಕರಿಸಿ, ಜಿಲ್ಲಾಧಿಕಾರಿಗೆ ಕಳುಹಿಸಿಕೊಡುವ ಭರವಸೆ ನೀಡಿದರು. ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷ ರವಿಪ್ರಸಾದ್ ಗುತ್ತಿನಮನೆ, ವರ್ತಕ ಸಂಘದ ಉಪಾಧ್ಯಕ್ಷ ಗಣೇಶ್ ರಶ್ಮಿ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷ ಸಲಾಂ ಬಿಲಾಲ್, ನೆಲ್ಯಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ. ಸದಾನಂದ ಕುಂದರ್, ನೆಲ್ಯಾಡಿ ಬೆಥನಿ ಐಟಿಐ ವಿದ್ಯಾರ್ಥಿ ಅನ್ವಿತ್, ಡಿಕೆಆರ್‍ಡಿಸಿ ಸದಸ್ಯೆ ಡೈಸಿ ಜೋಯ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಸಮಿತಿಯ ಕೋಶಾಧಿಕಾರಿ ಸತೀಶ್ ಭಟ್, ಕೌಕ್ರಾಡಿ ಗ್ರಾ.ಪಂ. ಅಧ್ಯಕ್ಷ ಲೋಕೇಶ್ ಬಾಣಜಾಲು, ಯು.ಜೆ. ಜೋಸೆಫ್, ಪಿ.ಪಿ. ವರ್ಗೀಸ್, ರಫೀಕ್ ಸೀಗಲ್, ಹನೀಫ್, ಭಾಸ್ಕರಗೌಡ, ರಾಮಣ್ಣ ಗೌಡ, ನ್ಯಾಯವಾದಿ ಇಸ್ಮಾಯೀಲ್ ನೆಲ್ಯಾಡಿ, ಮೀರಾ ಸಾಹೇಬ್ ಮತ್ತಿತರರು ಉಪಸ್ಥಿತರಿದ್ದರು. ವರ್ತಕರು ಅಂಗಡಿಗಳನ್ನು ಬಂದ್ ನಡೆಸಿ, ಅಟೋ ರಿಕ್ಷಾ ಚಾಲಕರು ರಿಕ್ಷಾ ಓಡಾಟ ಸ್ಥಗಿತಗೊಳಿಸಿ ಪ್ರತಿಭಟನೆಗೆ ಬೆಂಬಲ ನೀಡಿದರು.

ಹೋರಾಟ ಸಮಿತಿ ಸದಸ್ಯ ಎಂ.ಕೆ. ಇಬ್ರಾಹೀಂ ಮನವಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಸಿ.ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಿತಿಯ ಉಪಾಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು ಸ್ವಾಗತಿಸಿ, ಸರ್ವೋತ್ತಮ ಗೌಡ ವಂದಿಸಿದರು. ಜೊತೆ ಕಾರ್ಯದರ್ಶಿಗಳಾದ ಉಷಾ ಅಂಚನ್, ಸುರೇಶ್ ಪಡಿಪಂಡ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X