Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸ್ಥಗಿತಗೊಂಡಿರುವ ನರ್ಮ್ ಬಸ್...

ಮಂಗಳೂರು: ಸ್ಥಗಿತಗೊಂಡಿರುವ ನರ್ಮ್ ಬಸ್ ಸರ್ವಿಸ್ ಪುನರಾರಂಭಿಸಲು ಆಗ್ರಹಿಸಿ ಧರಣಿ

ವಾರ್ತಾಭಾರತಿವಾರ್ತಾಭಾರತಿ30 Jun 2023 3:06 PM IST
share
ಮಂಗಳೂರು: ಸ್ಥಗಿತಗೊಂಡಿರುವ ನರ್ಮ್ ಬಸ್ ಸರ್ವಿಸ್ ಪುನರಾರಂಭಿಸಲು ಆಗ್ರಹಿಸಿ ಧರಣಿ

ಮಂಗಳೂರು, ಜೂ.30: ಸ್ಥಗಿತಗೊಂಡ ಸರಕಾರಿ ನರ್ಮ್ ಬಸ್ ಗಳನ್ನು ಪುನರಾರಂಭಿಸಲು ಒತ್ತಾಯಿಸಿ, ಜಿಲ್ಲೆಯ ವಿವಿಧ ಭಾಗಗಳಿಗೆ ಸರಕಾರಿ ಬಸ್ ಗಳನ್ನು ಒದಗಿಸಲು ಆಗ್ರಹಿಸಿ ಹಾಗೂ ಮಂಗಳೂರು-ಮೂಡುಬಿದಿರೆ-ಕಾರ್ಕಳ ಮತ್ತು ಮಂಗಳೂರು-ಉಡುಪಿ ನಡುವೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಒತ್ತಾಯಿಸಿ ನಗರದಲ್ಲಿಂದು ಜನವಾದಿ ಮಹಿಳಾ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು.

ನಗರದ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ. ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಓಡಾಡುತ್ತಿದ್ದ ಸರಕಾರಿ ಕೆಎಸ್ಸಾರ್ಟಿಸಿ ಬಸ್ ಗಳು ಕೊರೋನ ಕಾಲದ ನಂತರ ತನ್ನ ಸಂಚಾರವನ್ನು ಸ್ಥಗಿತಗೊಳಿಸಿದ ಕಾರಣ ಸೇವೆಯಲ್ಲಿ ಬಹಳಷ್ಟು ವ್ಯತ್ಯಯ ಕಂಡು ಪ್ರಯಾಣಿಕರು ಬಹಳಷ್ಟು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಮಾತ್ರವಲ್ಲ, ಈಗ ಮಹಿಳೆಯರು ಸರಕಾರದ ಶಕ್ತಿ ಯೋಜನೆಯ ಸೌಲಭ್ಯದಿಂದಲೂ ವಂಚಿತರಾಗುತ್ತಿದ್ದಾರೆ ಎಂದರು.

ನರ್ಮ್ ಯೋಜನೆಯಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 68ರಷ್ಟು ಸರಕಾರಿ ಕೆಎಸ್ಸಾರ್ಟಿಸಿ ನಗರ ಸಾರಿಗೆ ಬಸ್ಸುಗಳು ಸಂಚಾರ ಸೇವೆ ಒದಗಿಸಲು ಮಂಜೂರಾಗಿದ್ದವು. ಆದರೆ ಮಂಜೂರಾದ 68 ಬಸ್ಸುಗಳಲ್ಲಿ 18 ಬಸ್ಸು ನಗರದ ಸ್ಟೇಟ್ ಬ್ಯಾಂಕ್ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಉಳಿದ ಬಸ್ಸು ನಗರದ ಹೊರಭಾಗದಿಂದ ಸೇವೆ ಸಲ್ಲಿಸಲು ಸಾರಿಗೆ ಪ್ರಾಧಿಕಾರ ಒಪ್ಪಿಗೆ ನೀಡಿತ್ತು. ಆ ಸಂದರ್ಭ ಖಾಸಗೀ ಬಸ್ ಮಾಲಕರು ಹೈಕೋರ್ಟ್ ಮೆಟ್ಟಿಲೇರಿ ತಡೆ ಹೇರಿದ್ದರು. ಮುಂದೆ ನರ್ಮ್ ಸಾರಿಗೆ ಸೇವೆಗೆ ಸಂಬಂಧಿಸಿದ ಹೈಕೋರ್ಟ್ ದೂರನ್ನು ಜಿಲ್ಲಾಧಿಕಾರಿ ಹಂತದಲ್ಲಿ ಇತ್ಯರ್ಥಪಡಿಸಲು ನಿರ್ದೇಶನ ನೀಡಿತ್ತು ಎಂದು ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಹಿರಿಯ ನಾಯಕಿ ಪದ್ಮಾವತಿ ಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ಭರಾಟೆಯ ನಡುವೆ ಸರಕಾರಿ ಬಸ್ಸುಗಳು ಮೂಲೆ ಗುಂಪಾಗತೊಡಗಿದೆ. ಜೂನ್ 11ರಿಂದ ಸರಕಾರ ಫೋಷಿಸಿದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೇವೆಯು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯರಿಗೂ ಸಿಗುವಂತಾಗಬೇಕು. ಸದ್ಯ ಜಿಲ್ಲೆಯಲ್ಲಿ ಬೀಡಿ ಉದ್ದಿಮೆ ನೆಲಕಚ್ಚಿದ ನಂತರ ಈಗ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಸಣ್ಣಪುಟ್ಟ ಅಂಗಡಿಮುಂಗಟ್ಟುಗಳಲ್ಲಿ, ಬಟ್ಟೆಯಂಗಡಿಗಳಲ್ಲಿ, ಆಸ್ಪತ್ರೆ, ಕಾಲೇಜುಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುತ್ತಿದ್ದು, ಅಂತಹ ಮಹಿಳೆಯರಿಗೆ ಸರಕಾರದ ಈ ಯೋಜನೆಯು ಭಾರೀ ಅನುಕೂಲಕರವಾಗಲಿದೆ ಎಂದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಭಾರತಿ ಬೋಳಾರ ಮಾತನಾಡಿ, ದ.ಕ. ಜಿಲ್ಲಾದ್ಯಂತ ಸ್ಥಗಿತಗೊಂಡಿರುವ ಸರಕಾರಿ ನಗರ ಸಾರಿಗೆ ನರ್ಮ್ ಬಸ್ ಗಳು ತನ್ನ ಸಂಚಾರ ಸೇವೆಯನ್ನು ಈ ಕೂಡಲೇ ಮುಂದುವರಿಸಲು ಕ್ರಮ ಕೈಗೊಳ್ಳಬೇಕೆಂದು ಮತ್ತು ಜನರ ಬೇಡಿಕೆಯ ಅನುಗುಣವಾಗಿ ಮಂಜೂರಾಗದೆ ಬಾಕಿ ಇರುವ ಪ್ರದೇಶಗಳಿಗೂ ಶೀಘ್ರವೇ ಬಸ್ ಸಂಚಾರ ಸೇವೆ ಒದಗಿಸಬೇಕು. ಇಲ್ಲದಿದ್ದಲ್ಲಿ ಜಿಲ್ಲಾದ್ಯಂತ ಪ್ರಬಲ ಜನಾಂದೋಲನ ನಡೆಸಲು ಜನವಾದಿ ಮಹಿಳಾ ಸಂಘಟನೆ ಸಜ್ಜಾಗಿದೆ ಎಂದರು.

ಬೀಡಿ ಕಾರ್ಮಿಕರ ಸಂಘಟನೆಯ ಜಿಲ್ಲಾಧ್ಯಕ್ಷ ವಸಂತ ಆಚಾರಿ ಮಾತನಾಡಿ, ಹೋರಾಟಕ್ಕೆ ಬೆಂಬಲ ಘೋಷಿಸಿದರು.

ಧರಣಿಯಲ್ಲಿ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ನಾಯಕರಾದ ವಿಲಾಸಿನಿ ತೊಕ್ಕೊಟ್ಟು, ಜಯಲಕ್ಷ್ಮೀ, ಪ್ರಮೀಳಾ ಶಕ್ತಿನಗರ, ಭವ್ಯಾ, ರಶ್ಮಿ, ಲೀಲಾ ಜೆ., ದೀಕ್ಷಿತಾ ಜಲ್ಲಿಗುಡ್ಡ, ಪ್ರಮೀಳಾ ದೇವಾಡಿಗ, ಸಿಐಟಿಯು ಜಿಲ್ಲಾ ನಾಯಕರಾದ ಸುನೀಲ್ ಕುಮಾರ್ ಬಜಾಲ್, ಯೋಗೀಶ್ ಜಪ್ಪಿನಮೊಗರು, ಸುಂದರ ಕುಂಪಲ, ನಾರಾಯಣ ತಲಪಾಡಿ, ದಯಾನಂದ ಶೆಟ್ಟಿ ಮುಂತಾದವರು ಭಾಗವಹಿಸಿದ್ದರು.











share
ವಾರ್ತಾಭಾರತಿ
ವಾರ್ತಾಭಾರತಿ
Next Story
X