ಪುತ್ತೂರು| ಮನೆಗೆ ನುಗ್ಗಿ ನಗ-ನಗದು ಕಳವು ಪ್ರಕರಣ: ಸೊತ್ತು ಸಹಿತ ಆರೋಪಿ ಸೆರೆ

ಪುತ್ತೂರು: ಮನೆಗೆ ನುಗ್ಗಿ ನಗ - ನಗದು ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಸೆರೆ ಹಿಡಿದಿರುವ ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಕಳವು ನಡೆಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ದಯಾನಂದ್ ನಾಯ್ಕ ಎಂ (29) ಬಂಧತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಅ.12ರಂದು ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕಳವು ಪ್ರಕರಣ ನಡೆದಿದ್ದು, ಮನೆಗೆ ನುಗ್ಗಿ ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದು ಕಳ್ಳತನ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಪುತ್ತೂರು ತಾಲೂಕಿನ ಈಶ್ವರಮಂಗಲ ಎಂಬಲ್ಲಿ ರವಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 30.120 ಗ್ರಾಂ ಚಿನ್ನಾಭರಣ ಮತ್ತು ಪ್ರಕರಣಕ್ಕೆ ಉಪಯೋಗಿಸಿದ್ದ ಬೈಕ್ ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Next Story





