ಪುತ್ತೂರು | ಫೇಸ್ ಬುಕ್ ನಲ್ಲಿ ಕೋಮು ಪ್ರಚೋದಿತ ಸಂದೇಶ ಪ್ರಸಾರ: ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತಹ ಸಂದೇಶವನ್ನು ಹರಡಿದ ಆರೋಪದಲ್ಲಿ ವ್ಯಕ್ತಿಯೋರ್ವನ ಓರ್ವನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಕರಣ ದಾಖಲಾಗಿದೆ.
ಫೇಸ್ ಬುಕ್ ನಲ್ಲಿ ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿಯ ವಿರುದ್ದ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈತ ತನ್ನ ಫೇಸ್ಬುಕ್ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತಹ ಹಾಗೂ ಇನ್ನೊಂದು ಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಪ್ರಸಾರ ಮಾಡಿರುವುದಾಗಿ ಆರೋಪಿಸಲಾಗಿದೆ. ಈ ಫೇಸ್ ಬುಕ್ ಖಾತೆ ಹೊಂದಿರುವ ವ್ಯಕ್ತಿಯ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 67/2025, ಕಲಂ: 196(1) (a) 353(2)BNS 2023ರಂತೆ ಪ್ರಕರಣ ದಾಖಲಿಸಿಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





