ಪುತ್ತೂರು | ಫೇಸ್ ಬುಕ್ ನಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುವ ಪೋಸ್ಟ್: ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ನಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡುವಂತಹ ಸುಳ್ಳು ಸುದ್ದಿಗಳನ್ನು ಹರಡಿದ ಆರೋಪದ ಮೇಲೆ 'ಭಾರತೀಯ ಸೇನೆ' ಎಂಬ ಹೆಸರಿನ ಫೇಸ್ಬುಕ್ ಪೇಜ್ ನಿರ್ವಾಹಕನ ವಿರುದ್ಧ ಪುತ್ತೂರು ನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 70/2025 ರ ಅಡಿಯಲ್ಲಿ, ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(1)(ಎ) (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 353(2) (ಸಾರ್ವಜನಿಕ ಶಾಂತಿ ಕದಡುವ ಹೇಳಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Next Story





