Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು: ನಿವೃತ್ತ ಶಿಕ್ಷಕ ನುಳಿಯಾಲು...

ಪುತ್ತೂರು: ನಿವೃತ್ತ ಶಿಕ್ಷಕ ನುಳಿಯಾಲು ರಘುನಾಥ ರೈ ನಿಧನ

ವಾರ್ತಾಭಾರತಿವಾರ್ತಾಭಾರತಿ29 Sept 2024 2:42 PM IST
share
ಪುತ್ತೂರು: ನಿವೃತ್ತ ಶಿಕ್ಷಕ ನುಳಿಯಾಲು ರಘುನಾಥ ರೈ ನಿಧನ

ಪುತ್ತೂರು: ನಿವೃತ್ತ ಶಿಕ್ಷಕ, ಸಾಹಿತಿ, ಯಕ್ಷಗಾನ ವೇಷಧಾರಿ ನುಳಿಯಾಲು ರಘುನಾಥ ರೈ (80) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ತಡ ರಾತ್ರಿ ನುಳಿಯಾಲು ಸ್ವಗೃಹದಲ್ಲಿ ನಿಧನರಾದರು. ಎರಡು ವಾರಗಳಿಂದ ತೀವ್ರ ಅನಾರೋಗ್ಯದಿಂದಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಪಡೆದಿದ್ದರು.

ಸುಳ್ಯಪದವು ಬಾಲಸುಬ್ರಹ್ಮಣ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 33 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು, ಬಹುಮುಖ ಪ್ರತಿಭೆಯಾಗಿದ್ದರು. ಇವರ ಸೇವೆ ಪರಿಗಣಿಸಿ 1993 ರಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ' ಪ್ರಶಸ್ತಿ, 2015 ರಲ್ಲಿ ಎನ್.ಎಸ್. ಕಿಲ್ಲೆ ಪ್ರಶಸ್ತಿ ಸೇರಿದಂತೆ ಹಲವು ಪ್ರಸಸ್ತಿ ಸನ್ಮಾನಗಳು ಲಭಿಸಿದ್ದವು.

2018 ರಲ್ಲಿ ಪುತ್ತೂರಿನಲ್ಲಿ ನಡೆದ ಕರ್ನಾಟಕ ಏಕೀಕರಣ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ, ಚೂರಿಪದವು ಶಾಲೆಯಲ್ಲಿ ನಡೆದ ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ಗಡಿನಾಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ, ನುಳಿಯಾಲು ತರವಾಡು ಟ್ರಸ್ಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಅವರು ಹಲವು ಕಡೆ ಧಾರ್ಮಿಕ ಮತ್ತು ಸಾಹಿತ್ಯ ಉಪನ್ಯಾಸಗಳನ್ನು ನೀಡುತ್ತಿದ್ದರು.

ಪುತ್ತೂರು ಶ್ರೀರಾಮಕೃಷ್ಣ ಪ್ರೌಢಶಾಲೆಯ ಆಡಳಿತ ಮಂಡಳಿ ಸದಸ್ಯರಾಗಿ, ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು. ಯಕ್ಷಗಾನ ಮತ್ತು ಕಾವ್ಯವಾಚನದಲ್ಲೂ ಹೆಸರು ಪಡೆದಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಅನೇಕ ಲೇಖನಗಳನ್ನು ಬರೆದಿದ್ದರು.

ಮೃತರು ಪತ್ನಿ, ಪುತ್ರ, ಪುತ್ರಿ ಮತ್ತು ಕುಟುಂಬಸ್ಥರನ್ಮು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಭಾನುವಾರ ಬೆಳಗ್ಗೆ ನುಳಿಯಾಲು ಸ್ವಗೃಹದ ಬಳಿ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X