ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ; ʼಎಲ್ಲೋ ಅಲರ್ಟ್’ ಘೋಷಣೆ
![ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ; ʼಎಲ್ಲೋ ಅಲರ್ಟ್’ ಘೋಷಣೆ ಕರಾವಳಿಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆ; ʼಎಲ್ಲೋ ಅಲರ್ಟ್’ ಘೋಷಣೆ](https://www.varthabharati.in/h-upload/2024/05/15/1266682-monsoonvb44.webp)
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಗಳಿದ್ದು, ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ 3 ದಿನಗಳ ಕಾಲ “ಎಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯ ಹಲವೆಡೆ ಮಂಗಳವಾರ ಧಾರಾಕಾರ ಮಳೆಯಾಗಿದ್ದು, ಮಣಿಪಾಲ, ಮಲ್ಪೆ ಭಾಗದಲ್ಲಿ ಗುಡುಗು ಸಹಿತ ಕೆಲಕಾಲ ಉತ್ತಮ ಮಳೆಯಾಗಿದೆ.
Next Story