Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.7ರಂದು ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

ಜು.7ರಂದು ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ3 July 2025 2:42 PM IST
share
ಜು.7ರಂದು ರಂಗ ಭಾಸ್ಕರ ಪ್ರಶಸ್ತಿ ಪ್ರದಾನ

ಮಂಗಳೂರು, ಜು.3: ಕರಾವಳಿಯ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಸಂಘಟನೆಯಾದ ರಂಗ ಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ 17ನೆ ವರ್ಷದ ವಾರ್ಷಿಕೋತ್ಸ ಜು. 7ರಂದು ನಡೆಯಲಿದ್ದು, ಸಮಾರಂಭದಲ್ಲಿ ಹಿರಿಯ ನಟ ಲಕ್ಷ್ಮಣ ಕುಮಾರ್ ಮಲ್ಲೂರು ಅವರಿಗೆ ರಂಗ ಭಾಸ್ಕರ ಪ್ರಶಸ್ತಿ ಪ್ರದಾನ ನಡೆಯಲಿದೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ವಿಶ್ವಸ್ಥ ಮಂಡಳಿ ಸದಸ್ಯ ಮೈಮ್ ರಾಮ್‌ದಾಸ್ ಮಾತನಾಡಿ, ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಎಲ್‌ಸಿಆರ್‌ಐ ಸಭಾಂಗಣದಲ್ಲಿ ಸಂಜೆ 5.30ಕ್ಕೆ ಕಾರ್ಯಕ್ರಮ ನಡೆಯಲಿದೆ ಎಂದರು.

2008ರಲ್ಲಿ ಪ್ರಾರಂಭವಾದ ರಂಗ ಸಂಗಾತಿ ಸಂಸ್ಥೆಯು ಬಹುಮುಖ ಪ್ರತಿಭೆ, ರಂಗಸಂಗಾತಿಯ ಸ್ಥಾಪಕ ಸದಸ್ಯ ದಿ. ಭಾಸ್ಕ ನೆಲ್ಲಿತೀರ್ಥ ಅವರ ನೆನಪಿನಲ್ಲಿ ರಂಗ ಭಾಸ್ಕರ ಪ್ರಶಸ್ತಿಯನ್ನು ನೀಡುತ್ತಿದೆ. ಈಗಾಗಲೇ 10 ಮಂದಿ ಸಾಧಕರಿಗೆ ರಂಗ ಭಾಸ್ಕರ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪ್ರಸಕ್ತ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಲಕ್ಷ್ಮಣ ಕುಮಾರ್ ಮಲ್ಲೂರು, 1962ರಲ್ಲಿ ಬಾಲ ನಟನಾಗಿ ರಂಗ ಪ್ರವೇಶ ಮಾಡಿ 65 ವರ್ಷಗಳಿಂದ ರಂಗ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ನಿರ್ದೇಶಕನಾಗಿಯೂ ರಂಗಭೂಮಿ ಮತ್ತು ಚಲನಚಿತ್ರಗಳಲ್ಲಿ ಸಕ್ರಿಯರಾಗಿದ್ದಾರೆ. 30ಕ್ಕೂ ಹೆಚ್ಚು ಕನ್ನಡ, ತುಳು ಸಿನೆಮಾಗಳಲ್ಲಿ ಅಭಿನಯದ ಜತೆಗೆ ಧಾರವಾಹಿ, ಕಿರುಚಿತ್ರ, ಜಾಹೀರಾತುಗಳಲ್ಲಿಯೂ ತಮ್ಮ ಅಭಿನಯ ಸಾಮರ್ಥ್ಯ ಪ್ರದರ್ಶಿಸಿದ್ದಾರೆ ಎಂದವರು ಹೇಳಿದರು.

ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಭಾಗವತ ಪಟ್ಲ ಸತೀಶ್ ಶೆಟ್ಟಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಹೆಗ್ಗೋಡಿನ ಜನಮನದಾಟ ತಂಡದಿಂದ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಮಾಯಾ ಮೃಗ ಹಾಗೂ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರವವರ ಎದೆಯ ಹಣತೆ ನಾಟಕಗಳು ಪ್ರದರ್ಶನಗೊಳ್ಳಲಿವೆ ಎಂದು ಶಶಿರಾಜ್ ಕಾವೂರು ತಿಳಿಸಿದರು.

ಗೋಷ್ಟಿಯಲ್ಲಿ ಕರುಣಾಕರ ಶೆಟ್ಟಿ, ನಾಗೇಶ್ ಶೆಟ್ಟಿ ಬಜಾಲ್, ಪ್ರಸಾದ್ ಶೆಟ್ಟಿ, ರಂಜನ್ ಬೋಳೂರು ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X