ಪರಸ್ಪರ ಗೌರವಿಸುವುದು ಸಂಘಟನೆಗಳ ಗುರಿಯಾಗಲಿ : ಯು.ಟಿ.ಖಾದರ್

ಮಂಗಳೂರು, ನ.25: ಸಮಾಜದಲ್ಲಿ ಪರಸ್ಪರ ಗೌರವಿಸಿ ಎಲ್ಲರನ್ನೂ ಜೊತೆಯಾಗಿ ಬೆಳೆಸುವುದು ಸಂಘಟನೆಗಳ ಗುರಿಯಾಗಲಿ. ಈ ಶಕ್ತಿ ಬಂಟ ಸಮಾಜಕ್ಕಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ಮಂಗಳವಾರ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ಶುಭ ಹಾರೈಸಿದರು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಯುಎಇ ದುಬೈ ಸಂಘದ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ , ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿದರು.
ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರು, ಪತ್ರಕರ್ತರಿಗೆ ಹಾಗೂ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಕಾರ್ಯದರ್ಶಿ ಸತೀಶ್ ಇರಾ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ್ ಶೆಟ್ಟಿ ಬಿ.ಎನ್., ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಜೇಶ್ ದಡ್ಡಂಗಡಿ, ಮಮತಾ ಶೆಟ್ಟಿ ಮತ್ತಿತರ ಸಾಧಕರಿಗೆ ಸನ್ಮಾನ ಮಾಡಲಾಯಿತು.
ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಪೃಥ್ವಿರಾಜ್ ರೈ, ಎಸಿ ಭಂಡಾರಿ, ಸುಧಾಕರ್ ಎಸ್. ಪೂಂಜಾ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ. ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.







