ಕರ್ಣಾಟಕ ಬ್ಯಾಂಕ್‍ನ ನಿವೃತ್ತ ಉದ್ಯೋಗಿ ಬಾವಿಗೆ ಹಾರಿ ಆತ್ಮಹತ್ಯೆ

ವಿಟ್ಲ: ಕರ್ನಾಟಕ ಬ್ಯಾಂಕ್‍ನ ನಿವೃತ್ತ ಉದ್ಯೋಗಿಯೊಬ್ಬರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಅಡ್ಡದ ಬೀದಿಯಲ್ಲಿ ನಡೆದಿದೆ.
ವಿಟ್ಲ ಕಸಬಾ ಗ್ರಾಮದ ಅಡ್ಡದ ಬೀದಿ ನಿವಾಸಿ ರಸಿಕ ರತ್ನ ಗೋಪಾಲಕೃಷ್ಣ ಜೋಶಿಯವರ ಪುತ್ರ ರವಿ ಜೋಶಿ (68) ಆತ್ಮಹತ್ಯೆಗೆ ಶರಣಾದವರು. ಇವರು ಯಕ್ಷಗಾನ ಕಲಾವಿದರಾಗಿದ್ದರು. ಕರ್ನಾಟಕ ಬ್ಯಾಂಕ್‍ನ ನಿವೃತ್ತ ಉದ್ಯೋಗಿ ಯಾಗಿದ್ದರು. ಮೂರು ವರ್ಷಗಳ ಹಿಂದೆ ಜೋಶಿಯವರ ಹಿರಿಯ ಪುತ್ರಿ ಅನಾರೋಗ್ಯದಿಂದ ಮೃತಪಟ್ಟಿದ್ದರು. ಇದಾದ ಬಳಿಕ ಅವರು ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಈ ಕೃತ್ಯ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಸ್ಥಳಕ್ಕೆ ವಿಟ್ಲ ಎಸೈ ರತನ್‍ಕುಮಾರ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





