ನಿವೃತ್ತ ಅಧ್ಯಾಪಕ ರಾಧಾಕೃಷ್ಣ ರಾವ್ ನಿಧನ

ಮಂಗಳೂರು: ನಗರದ ಬದ್ರಿಯಾ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಾಪಕರಾಗಿದ್ದ ರಾಧಾಕೃಷ್ಣ ರಾವ್ ಗುರುವಾರ ನಿಧನರಾದರು. ವಾಣಿಜ್ಯ ಶಾಸ್ತ್ರ ವಿಷಯ ತಜ್ಞರಾಗಿ ಶಿಕ್ಷಣ ಇಲಾಖೆಯ ವತಿಯಿಂದ ಗುರುತಿಸಿಕೊಂಡಿದ್ದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಸಂಖ್ಯೆಯ ಬಂಧು ಬಳಗ ಹಾಗು ಶಿಷ್ಯವೃಂದವನ್ನು ಅಗಲಿದ್ದಾರೆ.
Next Story





