ಪಿಲಿಕುಳದಲ್ಲಿ ಭತ್ತದ ಕೃಷಿ ಪ್ರಾತ್ಯಕ್ಷಿಕೆ ಕಾರ್ಯಕ್ರಮ

ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಕೃಷಿ ಇಲಾಖೆ ಮಂಗಳೂರು ಮತ್ತು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಬಜಪೆ ಇದರ ಸಂಯುಕ್ತ ಆಶ್ರಯದಲ್ಲಿ ಭತ್ತದ ಕೃಷಿಯ ಪ್ರಾತ್ಯಕ್ಷಿಕೆಯ ಕಾರ್ಯಕ್ರಮವು ಮಂಗಳವಾರ ಪಿಲಿಕುಳದ ಗುತ್ತುಮನೆಯ ಎದುರಿನ ಬಾಕಿಮಾರು ಗದ್ದೆಯಲ್ಲಿ ನಡೆಯಿತು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಹೊನ್ನಪ್ಪಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಯಾಂತ್ರೀಕರಣ ವಿಭಾಗದ ಪ್ರಾದೇಶಿಕ ನಿರ್ದೇಶಕ ಅಬ್ರಹಾಂ ಎಂ.ಕೆ. ಅವರು ಭತ್ತದ ಸಸಿಮಡಿಯನ್ನು ಪಿಲಿಕುಳದ ಆಯುಕ್ತ ಡಾ.ಅರುಣ್ ಕುಮಾರ್ ಶೆಟ್ಟಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಮನೋಜ್ ಮಿನೇಜಸ್, ಬ್ಯಾಂಕ್ ಆಫ್ ಬರೋಡದ ವಾಮಂಜೂರು ಶಾಖೆಯ ಮ್ಯಾನೇಜರ್ ಜಗದೀಶ್, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ವೀಣಾ, ಪಿಲಿಕುಳದ ಸಂಸ್ಕೃತಿ ಗ್ರಾಮದ ಯೋಜನಾಧಿಕಾರಿ ಡಾ.ನಿತಿನ್ ಎನ್.ಕೆ. ಮತ್ತಿತರು ಉಪಸ್ಥಿತರಿದ್ದರು.
ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿ ಗಿರೀಶ್ ಕಾರ್ಯಕ್ರಮ ನಿರೂಪಿಸಿದರು. ಯೋಜನಾಧಿಕಾರಿ ಮೋಹನ್ ಸ್ವಾಗತಿಸಿದರು. ಐತಪ್ಪಪೂಜಾರಿ ವಂದಿಸಿದರು. ಪಿಲಿಕುಳದ ಸಸ್ಯಶಾಸ್ತ್ರ ವಿಭಾಗದ ವೈಜ್ಞಾನಿಕ ಅಧಿಕಾರಿ ರಾಮಕೃಷ್ಣ ಮರಾಟಿ ಸಹಕರಿಸಿದರು.







