Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸಮನ್ವಯ ಶಿಕ್ಷಕ ಪ್ರಶಸ್ತಿಗೆ...

ಮಂಗಳೂರು: ಸಮನ್ವಯ ಶಿಕ್ಷಕ ಪ್ರಶಸ್ತಿಗೆ ಮೆಲ್ಕಾರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ6 Nov 2025 9:54 PM IST
share
ಮಂಗಳೂರು: ಸಮನ್ವಯ ಶಿಕ್ಷಕ ಪ್ರಶಸ್ತಿಗೆ ಮೆಲ್ಕಾರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಆಯ್ಕೆ

ಮಂಗಳೂರು: ಸಮನ್ವಯ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಇದರ ವತಿಯಿಂದ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಕ್ರಿಯಾಶೀಲ ಶಿಕ್ಷಕರಿಗೆ ಕೊಡ ಮಾಡುವ‌ ಮೂರನೇ ಆವೃತ್ತಿಯ ಸಮನ್ವಯ ಶಿಕ್ಷಕ ಪ್ರಶಸ್ತಿ - 2025ಗೆ ಮೆಲ್ಕಾರ್ ಮಹಿಳಾ ಕಾಲೇಜಿನ ಪ್ರಾಂಶುಪಾಲ ಅಬ್ದುಲ್ ಮಜೀದ್ ಎಸ್ ಆಯ್ಕೆಯಾಗಿದ್ದಾರೆ ಎಂದು ಸಂಘದ ಜಿಲ್ಲಾಧ್ಯಕ್ಷ ಅಕ್ಬರ್ ಅಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೇರಿಮಾರ್ ನಿವಾಸಿಯಾದ ಇವರು ದಿವಂಗತ ಕೆ.ಮೊಹಮ್ಮದ್ ಮತ್ತು ನಫೀಸಾ ದಂಪತಿಗಳ ಪುತ್ರ. ಎಂ.ಎ ಇತಿಹಾಸ ಮತ್ತು ಎಂ. ಕಾಂ ಪದವೀಧರರಾಗಿರುವ ಇವರು ಸುಮಾರು 18 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿದ್ದಾರೆ. ಕಳೆದ 16 ವರ್ಷಗಳಿಂದ ಬಂಟ್ವಾಳ ತಾಲೂಕಿನ ಮಾರ್ನಬೈಲಿನ ಮೆಲ್ಕಾರ್ ಮಹಿಳಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಇವರು ಪ್ರಸ್ತುತ ಪದವಿಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ವಿದ್ಯಾರ್ಥಿ ಜೀವನದಲ್ಲೇ ಸಾಹಿತ್ಯದ ಬಗ್ಗೆ ಒಲವಿದ್ದ ಇವರು ಅನೇಕ ಕವನಗಳನ್ನು ರಚಿಸಿದ್ದು ತಮ್ಮ ಸಹೋದ್ಯೋಗಿಯ ಸಹಕಾರದಲ್ಲಿ ಅಮ್ಮ ಪ್ರಕಾಶನವನ್ನು ಆರಂಭಿಸಿ ಈ ಮೂಲಕ ಮೂರು ಕವನ ಸಂಕಲನಗಳನ್ನು ಹೊರತಂದಿದ್ದಾರೆ.

ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗಾಗಿ ವಿವಿಧ ಸಂಘಸಂಸ್ಥೆಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ವ್ಯಕ್ತಿತ್ವ ಬೆಳವಣಿಗೆಗೆ ಪೂರಕ ವೇದಿಕೆ ಕಲ್ಪಿಸುತ್ತಾ ಬಂದಿದ್ದಾರೆ. ಎನ್ ಎಸ್ ಎಸ್, ಇಕೋ ಕ್ಲಬ್ , ಸಾಹಿತ್ಯ ಸಂಘ, ಮತದಾರರ ಸಾಕ್ಷರತಾ ಕ್ಲಬ್, ಕ್ರೀಡಾ ಸಂಘಗಳ ಮೂಲಕ ತಮ್ಮ ಸಂಸ್ಥೆಯಲ್ಲಿ ನಿರಂತರ ಪಠ್ಯ- ಸಹಪಠ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿರುತ್ತಾರೆ.

ವಿದ್ಯಾರ್ಥಿಗಳ ಬೆಳವಣಿಗೆಗೆ ನೀಡಿದ ಪ್ರೋತ್ಸಾಹವನ್ನು ಪರಿಗಣಿಸಿ ಅಬ್ದುಲ್ ಮಜೀದ್ ಅವರನ್ನು ಸಮನ್ವಯ ಶಿಕ್ಷಕ ಪ್ರಶಸ್ತಿ- 2025 ಕ್ಕೆ ಆಯ್ಕೆ ಮಾಡಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ನ.11 ರಂದು ಮಂಗಳೂರಿನ ಕಂಕನಾಡಿಯ ಜಮೀಯ್ಯತುಲ್ ಫಲಾಹ್ ಸಭಾಂಗಣದಲ್ಲಿ ನಡೆಯುವ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಅಕ್ಬರ್ ಅಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X