Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಣಕ್ಕೆ ಬೇಡಿಕೆ ಇಟ್ಟು ಸಂಘಪರಿವಾರ...

ಹಣಕ್ಕೆ ಬೇಡಿಕೆ ಇಟ್ಟು ಸಂಘಪರಿವಾರ ಕಾರ್ಯಕರ್ತರಿಂದ ಕೃಷಿಕನ ಮೇಲೆ ದಾಳಿ: ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ2 Jan 2026 12:26 PM IST
share
ಹಣಕ್ಕೆ ಬೇಡಿಕೆ ಇಟ್ಟು ಸಂಘಪರಿವಾರ ಕಾರ್ಯಕರ್ತರಿಂದ ಕೃಷಿಕನ ಮೇಲೆ ದಾಳಿ: ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲು

ಮುಲ್ಕಿ: ಕೃಷಿಕರೊಬ್ಬರಿಂದ ಸಂಘಪರಿವಾರದ ಕಾರ್ಯಕರ್ತರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಹಣ ಕೊಡದೇ ಇದ್ದಾಗ ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ತಾಳಿಪಾಡಿ ಅಂಗಾರಗುಡ್ಡೆಯಲ್ಲಿ ಬುಧವಾರ ಸಂಜೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮುಲ್ಕಿ ಕೆಳಗಿನಮನೆ ಶಂಸು ಸಾಹೇಬ್ ಎಂಬವರ ಮನೆಗೆ ಅಕ್ರಮ ಪ್ರವೇಶ ಮಾಡಿದ ಸಂಘಪರಿವಾರದ ಕಾರ್ಯಕರ್ತರು ಹಣ ಸುಲಿಗೆ ಮಾಡುವ ಉದ್ದೇಶದಿಂದ ಕೈಯಿಂದ ಹಲ್ಲೆ‌ಗೈದು, ಕಬ್ಬಿಣದ ರಾಡ್ ನಿಂದ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಒಡ್ಡಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

ಆರೋಪಿಗಳನ್ನು ಶ್ಯಾಮಸುಂದರ್ ಶೆಟ್ಟಿ, ಅಕ್ಷಯ ಪೂಜಾರಿ, ಸುವಿನ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ‌.

ಮುಲ್ಕಿ ಕೆಳಗಿನಮನೆ ಶಂಸು ಸಾಹೇಬ್ ಅವರು ತಮ್ಮ ಜಾನುವಾರುಗಳನ್ನು ನೆರೆ ಮನೆಯ ಜಗ್ಗು ಶೆಟ್ಟಿರವರಿಗೆ ಸಂಬಂಧಿಸಿದ ಕೊಟ್ಟಿಗೆಯಲ್ಲಿ ಸಾಕುತ್ತಿದ್ದರು. ಇದರಲ್ಲಿ ಕೆಲವು ಕಂಬಳದ ಕೋಣಗಳಿದ್ದು, ಮುಲ್ಕಿ ಪಡುಪಣಂಬೂರು ಅರಸು ಕಂಬಳದಲ್ಲಿ ಭಾಗವಹಿಸಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದವು.

ಗುರುವಾರ 11 ಗಂಟೆಗೆ ಕಾರಿನಲ್ಲಿ ಬಂದ ಆರೋಪಿಗಳು ಕೊಟ್ಟಿಗೆಯಲ್ಲಿರುವ ಜಾನುವಾರುಗಳ ಪೋಟೋ ಮತ್ತು ವಿಡಿಯೋ ತೆಗೆದು ಅಲ್ಲಿಂದ ಹೋಗಿದ್ದರು. ಬಳಿಕ ಸಂಜೆ ಸಹಾಬುದ್ದೀನ್ ಹಾಗೂ ಅವರ ತಂದೆ ಸಂಶುದ್ದೀನ್ ಅವರು ಕಂಬಳದ ಕೋಣಗಳಿಗೆ ಎಣ್ಣೆಯಿಂದ ಮಾಲೀಶ್ ಮಾಡುತ್ತಿದ್ದ ಸಮಯ ಶ್ಯಾಮ್ ಸುಂದರ್ ಶೆಟ್ಟಿ ಮತ್ತು ಅಕ್ಷಯ ಪೂಜಾರಿ ಹಾಗೂ ಸುವೀನ್ ಎಂಬವರು ಕಾರಿನಲ್ಲಿ ಬಂದು ಕಬ್ಬಿಣದ ರಾಡ್ ಹಿಡಿದುಕೊಂಡು ಜಾನುವಾರು ಸಾಕುವ ಕೊಟ್ಟಿಗೆಯ ಬಳಿಯ ಮನೆಯ ಎದುರು ಅಕ್ರಮ ಪ್ರವೇಶ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಕಂಬಳದ ಕೋಣಗಳ ಬಗ್ಗೆ ವಿಚಾರಿಸಿ ನಂತರ 50 ಸಾವಿರ ಹಣವನ್ನು ಕೊಡುವಂತೆ ಬೇಡಿಕೆ ಇಟ್ಟಿದ್ದಾರೆ‌.

ಅದಕ್ಕೆ ಸಹಾಬುದ್ದೀನ್ ಅವರು ಯಾಕೆ ನಿಮಗೆ ಹಣ ಕೊಡಬೇಕು ಎಂದು ಕೇಳಿದಾಗ ಮಾತಿಗೆ ಮಾತು ಬೆಳೆದು ಬೈಯಲು ಪ್ರಾರಂಭಿಸಿದಾಗ ಜಗಳವಾಗಿದ್ದು, ಆರೋಪಿ ಶ್ಯಾಮ್ ಸುಂದರ್ ಶೆಟ್ಟಿ ಸಂತ್ರಸ್ತರ ತಲೆಗೆ ಕೈಯಿಂದ ಹೊಡೆದು ಕೋಣಗಳನ್ನು ಕಡಿಯಲು ತಂದಿದ್ದೀಯಾ ಎಂದು ಅವಾಚ್ಯವಾಗಿ ಬೈದಿದ್ದಾನೆ. ಈ ವೇಳೆ ಮತ್ತೋರ್ವ‌ ಆರೋಪಿ ಅಕ್ಷಯ ಪೂಜಾರಿ ಕೈಯಿಂದ ಎದೆಗೆ ಗುದ್ದಿ ಹಣಕ್ಕಾಗಿ ಬೇಡಿಕೆ ಇಟ್ಟರು. ಇದರಿಂದ‌ ವಿಚಲಿತರಾದ ಸಹಾಬುದ್ದೀನ್ ಮೊಬೈಲ್ ನಲ್ಲಿ ವಿಡಿಯೋ ಮಾಡಲು ಆರಂಭಿಸಿದಾಗ ಆರೋಪಿ ಸುವೀನ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಕಬ್ಬಿಣದ ರಾಡ್ ನಿಂದ ಸಹಾಬುದ್ದೀನ್ ಅವರ ತಲೆಗೆ ಬೀಸಿದ್ದು, ಅವರು ತಪ್ಪಿಸಿಕೊಂಡಿದ್ದಾರೆ.

ಆರೋಪಿ ಶ್ಯಾಮ್ ಸುಂದರ್ ಶೆಟ್ಟಿ ಶಂಸು ಸಾಹೇಬ್ ಅವರ ಮೇಲೆ ಹಲ್ಲೆಗೆ ಯತ್ನಿಸಿದಾಗ ತಂದೆಯನ್ನು ರಕ್ಷಿಸುವ ಸಲುವಾಗಿ ಸಹಾಬುದ್ದೀನ್ ಅವರು ಆರೋಪಿಗಳನ್ನು ತಳ್ಳಿದ್ದಾರೆ‌. ಈ ವೇಳೆ ಸ್ಥಳೀಯರು ಬಂದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿರುತ್ತಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹಣ ಸುಲಿಗೆ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಸಾಕುತ್ತಿರುವ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಅಡ್ಡಗಟ್ಟಿ ಕೈಯಿಂದ ಹಲ್ಲೆ ಮಾಡಿ, ರಾಡ್ ನಿಂದ ಬೀಸಿ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿರುವ ಆರೋಪಿಗಳ ವಿರುದ್ಧ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತ ಕಲಂ 329,126(2), 308(4), 115(2) 351(3),3(5)ರಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ‌ ಕ್ರಮ‌ಕೈಗೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X