Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುತ್ತಿಗಾರಿನಲ್ಲಿ ಎಸ್‍ಸಿಡಿಸಿಸಿ...

ಗುತ್ತಿಗಾರಿನಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ13 Oct 2025 9:53 PM IST
share
ಗುತ್ತಿಗಾರಿನಲ್ಲಿ ಎಸ್‍ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆ ಸ್ಥಳಾಂತರ, ಎಟಿಎಂ ಉದ್ಘಾಟನೆ
ಮಹಿಳೆಯರ ಸಬಲೀಕರಣಕ್ಕೆ ಎಸ್‍ಸಿಡಿಸಿಸಿ ಬ್ಯಾಂಕಿನ ಕೊಡುಗೆ ಅನನ್ಯ : ಶಾಸಕಿ ಭಾಗೀರಥಿ ಮುರುಳ್ಯ

ಸುಳ್ಯ : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಕೇವಲ ಬ್ಯಾಂಕಿನ ಚಟುವಟಿಕೆ ಮಾತ್ರವಲ್ಲದೇ ಹಲವು ಸಂಘ-ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯವಾದದ್ದು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಅವರು ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್ ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‍ಸಿಡಿಸಿಸಿ ಬ್ಯಾಂಕಿನ ಗುತ್ತಿಗಾರು ಶಾಖೆಯನ್ನು ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಡಿಸಿಸಿ ಬ್ಯಾಂಕ್ ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತಿದೆ. ರೈತರ ಪರವಾಗಿ ನಿಂತಿರುವ ಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ, ಬ್ಯಾಂಕ್‍ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಅದರಂತೆ ಬೆಳೆಯುತ್ತಿರುವ ಗುತ್ತಿಗಾರು ಪೇಟೆಯಲ್ಲಿನ ಶಾಖೆಯಲ್ಲೂ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿರುವುದು ಗ್ರಾಹಕರಿಗೂ, ಇಲ್ಲಿನ ಪ್ರದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.

ಡಿಸಿಸಿ ಬ್ಯಾಂಕಿನ ಉಪಾದ್ಯಕ್ಷ ವಿನಯ ಕುಮಾರ್ ಸೂರಿಂಜೆ ಅಧ್ಯಕ್ಷತೆ ವಹಿಸಿದ್ದರು. ಡಿಸಿಸಿ ಬ್ಯಾಂಕಿನ ನಿರ್ದೆಶಕ ಕುಶಾಲಪ್ಪ ಗೌಡ.ಪಿ. ಶಾಖೆಯನ್ನು ಮತ್ತು ಎ.ಟಿ.ಎಂ. ಕೇಂದ್ರವನ್ನು ಉದ್ಘಾಟಿಸಿದರು. ಭದ್ರತಾ ಕೋಶವನ್ನು ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ, ವಾಹನ ಸಾಲಪತ್ರ ವಿತರಿಸಿದರು.

ಗುತ್ತಿಗಾರು ಗ್ರಾ.ಪಂ. ಅಧ್ಯಕ್ಷೆ ಸುಮಿತ್ರ ಮೂಕಮಲೆ ಠೇವಣಿ ಪತ್ರ ವಿತರಣೆ ಮಾಡಿದರು. ಗುತ್ತಿಗಾರು ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಕೀ ವಿತರಿಸಿದರು. ಡಿಸಿಸಿ ಬ್ಯಾಂಕ್ ನಿರ್ದೆಶಕ ಎಸ್.ಎನ್.ಮನ್ಮಥ ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕರಾದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಮಡಪ್ಪಾಡಿ ಸಹಕಾರಿ ಸಂಘದ ನಿರ್ದೇಶಕ ಪಿ.ಸಿ.ಜಯರಾಮ, ಮಿತ್ರದೇವ ಮಡಪ್ಪಾಡಿ, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ವಿಷ್ಣುಭಟ್ ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ಕಟ್ಟಡ ಮಾಲಕ ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕಟ್ಟಡ ಮಾಲಕ ಅನಿಲ್ ಕುಮಾರ್, ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ. ಯು, ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬೆಳ್ತಂಗಡಿ ವಲಯದ ಬ್ಯಾಂಕಿನ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಗುತ್ತಿಗಾರು ವಲಯದ ಮೇಲ್ವಿಚಾರಕರಾದ ಎಂ.ಪಿ.ಮನೋಜ್, ಸುಬ್ರಹ್ಮಣ್ಯ ಭಟ್, ಆದರ್ಶ ಬಿ., ಪ್ರದೀಪ್ ಕುಮಾರ್, ರತನ್ ಕೆ.ಎಸ್, ವಿನಯ ಕುಮಾರ್ ಪಿ., ಅವರನ್ನು ಸನ್ಮಾನಿಸಲಾಯಿತು.

ನವೋದಯ ವಲಯ ಮೇಲ್ವಿಚಾರಕ ಮತ್ತು ಪ್ರೇರಕರಾದ ಶ್ರೀಧರ ಮಾಣಿಮರ್ಧು, ದಾಮೋದರ, ಹೇಮಂತ್, ಗಂಗಾಧರ್, ಪ್ರಕಾಶ್. ಜೆ, ಸವಿತಾ ಎಸ್.ಟಿ, ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.

ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸುಳ್ಯ ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X