ಸ್ಕೂಟರ್ ಸವಾರೆ ಮೃತ್ಯು: ಆರೋಪಿ ಲಾರಿ ಚಾಲಕನಿಗೆ ಶಿಕ್ಷೆ

ಮಂಗಳೂರು, ಜ.16: ಅಪಘಾತದಲ್ಲಿ ಸ್ಕೂಟರ್ ಸವಾರೆಯ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲಾರಿ ಚಾಲಕ ಎಂ.ಡಿ. ಸತೀಶ್ ಎಂಬಾತನಿಗೆ ಜೆಎಂಎಫ್‌ಸಿ 8ನೇ ನ್ಯಾಯಾಲಯ 1 ವರ್ಷದ ಸಾದಾ ಜೈಲು ಶಿಕ್ಷೆ ಹಾಗೂ 21 ಸಾವಿರ ರೂ. ದಂಡ ವಿಧಿಸಿದೆ.
2019ರ ನ.27ರಂದು ಮಧ್ಯಾಹ್ನ 11:50ರ ವೇಳೆಗೆ ಪ್ರಿಯಾ ವೈ. ಸುವರ್ಣ ಎಂಬಾಕೆ ಕೆಪಿಟಿಯಿಂದ ಕೊಟ್ಟಾರ ಚೌಕಿ ಕಡೆಗೆ ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಕುಂಟಿಕಾನ ಬಳಿ ಲಾರಿ ಢಿಕ್ಕಿ ಹೊಡೆದಿತ್ತು. ಇದರಿಂದ ಸ್ಕೂಟರ್ ಸವಾರೆ ಮೃತಪಟ್ಟಿದ್ದರು.
ಈ ಬಗ್ಗೆ ಅಂದಿನ ಪಶ್ಚಿಮ ಸಂಚಾರ ಠಾಣೆಯ ಪೊಲೀಸ್ ನಿರೀಕ್ಷಕ ಅಮಾನುಲ್ಲಾ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಫವಾಝ್ ಪಿ.ಎ. ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರಾದ ಗೀತಾ ರೈ ಮತ್ತು ಆರೋನ್ ಡಿಸೋಜ ವಿಟ್ಲ ವಾದಿಸಿದ್ದರು.
Next Story





