ಜ. 20 , 21ರಂದು ಮಂಗಳೂರಿನಲ್ಲಿ ಎಸ್‌ಡಿಪಿಐ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆ

ಮಂಗಳೂರು, ಜ.19: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ ) ಇದರ 6ನೇ ರಾಷ್ಟ್ರೀಯ ಪ್ರತಿನಿಧಿ ಮಂಡಳಿ (ಎನ್‌ಆರ್‌ಸಿ ) ಸಭೆ ಜನವರಿ 20 ಮತ್ತು 21ರಂದು ಮಂಗಳೂರಿನಲ್ಲಿ ನಡೆಯಲಿದೆ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಪ್ರತಿನಿಧಿಗಳು ಭಾಗವಹಿಸಲಿದ್ದು ಎಂದು ಮಾಹಿತಿ ನೀಡಿದರು.
ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಪಕ್ಷದ ಅತ್ಯುನ್ನತ ಪ್ರತಿನಿಧಿ ಅಂಗವಾಗಿದ್ದು, ಸಂಘಟನಾ ದಿಕ್ಕು ಮತ್ತು ಸಾಮಾಜಿಕ ದೃಷ್ಟಿಕೋನವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಈ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಹೊಸ ರಾಷ್ಟ್ರೀಯ ಕಾರ್ಯಕಾರಿ ಸಮಿತಿಗೆ ಮತ್ತು ಪದಾಧಿಕಾರಿಗಳ ಆಯ್ಕೆಗೆ ಚುನಾವಣೆಯೂ ನಡೆಯ ಲಿದೆ ಎಂದರು.
ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ನೂತನ ರಾಷ್ಟ್ರೀಯ ನಾಯಕರಿಗೆ ಜ.21ರಂದು 6:30ಕ್ಕೆ ನಗರದ ಪುರಭವನದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೂ ಮೊದಲು ಅಪರಾಹ್ನ 4:30ಕ್ಕೆ ಮಂಗಳೂರಿನ ಅಂಬೇಡ್ಕರ್ ವೃತ್ತ (ಜ್ಯೋತಿ )ದಿಂದ ಸಮಾವೇಶ ನಡೆಯಲಿರುವ ಪುರಭವನ ವರೆಗೆ ರ್ಯಾಲಿಯನ್ನು ಆಯೋಜಿಸ ಲಾಗಿದೆ ಎಂದು ಅಫ್ಸರ್ ಕೊಡ್ಲಿಪೇಟೆ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷೆ ಶಾಹಿದ ತಸ್ನೀಮ್ ,ರಾಜ್ಯ ಉಪಾಧ್ಯಕ್ಷ ಮತ್ತು ರಾಜ್ಯ ಉಪಾಧ್ಯಕ್ಷ ರಿಯಾಝ್ ಕಡಂಬು, ರಾಜ್ಯ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಉಪಸ್ಥಿತರಿದ್ದರು.







