ಎಸ್‌ಡಿಪಿಐ ಪ್ರತಿಭಟನಾ ಸಭೆ: ಪೊಲೀಸರಿಂದ ಸ್ವಯಂಪ್ರೇರಿತ ದೂರು

ಮಂಗಳೂರು, ಡಿ.21: ಮಂಗಳೂರಿನಲ್ಲಿ ಡಿ.19ರಂದು ನಡೆದ ಎಸ್‌ಡಿಪಿಐ ಪ್ರತಿಭಟನಾ ಸಭೆಯ ವಿಡಿಯೊ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದು, ಪ್ರತಿಭಟನೆಯ ವಿಡಿಯೊ ತುಣುಕುಗಳನ್ನು ಪರಿಶೀಲಿಸಿದಾಗ ಹಲವು ಸುಳ್ಳು ಮಾಹಿತಿಗಳನ್ನು ಹಾಗೂ ನ್ಯಾಯಾಲಯಗಳ ಕೆಲವು ತೀರ್ಪುಗಳ ಆಯ್ದ ಭಾಗವನ್ನು ಮಾತ್ರ ಸಾರ್ವಜನಿಕರಿಗೆ ತಿಳಿಸಿ, ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸಲಾಗಿದೆ ಎಂಬ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರು ಸ್ವಯಂಪ್ರೇರಿತ ದೂರರ್ಜಿಯನ್ನು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
Next Story





