Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ.7-9: ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ...

ಸೆ.7-9: ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ ದ.ಕ ಜಿಲ್ಲಾದ್ಯಂತ ಯುವಜನ ಜಾಥಾ

ವಾರ್ತಾಭಾರತಿವಾರ್ತಾಭಾರತಿ2 Sept 2025 8:56 PM IST
share
ಸೆ.7-9: ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ ದ.ಕ ಜಿಲ್ಲಾದ್ಯಂತ ಯುವಜನ ಜಾಥಾ

ಮಂಗಳೂರು, ಸೆ.2: ಉದ್ಯೋಗ ಸೃಷ್ಟಿಸಿ ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(ಡಿವೈಎಫ್‌ಐ) ದ. ಕ.ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೆ.7ರಿಂದ 9 ರವರೆಗೆ ದ.ಕ ಜಿಲ್ಲಾದ್ಯಂತ ಯುವಜನ ಜಾಥಾ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ಡಿವೈಎಫ್‌ಐ ದ.ಕ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಸೆ. 7ರಂದು ಬೆಳಗ್ಗೆ 9:30ಕ್ಕೆ ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ ಜಾಥಾಕ್ಕೆ ಚಾಲನೆ ದೊರೆಯಲಿದೆ. ಅನಂತರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜಾಥಾ ಸಂಚರಿಸಲಿದೆ. ಸೆ.9ರಂದು ಸಂಜೆ 4ಕ್ಕೆ ಮಂಗಳೂರಿನಲ್ಲಿ ಸಮಾರೋಪ ನಡೆಯಲಿದ್ದು, ಸಾರ್ವಜನಿಕ ಸಭೆಯ ಮುನ್ನ ಡಾ ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್ ವರೆಗೆ ಯುವಜನರ ಬೃಹತ್ ಮೆರವಣೆಗೆ ನಡೆಯಲಿರು ವುದು ಎಂದು ವಿವರಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ರಂಗಕರ್ಮಿ ಸತೀಶ್ ಶೆಟ್ಟಿ ಹಿರಿಯಡ್ಕ, ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಲವಿತ್ರ ವಸ್ತದ್ ಭಾವಹಿಸಲಿದ್ದಾರೆ ಎಂದರು.

ಪ್ರತೀ ಕುಟುಂಬದಲ್ಲೂ ಕನಿಷ್ಠ ಒಬ್ಬ ನಿರುದ್ಯೋಗಿ ಇದ್ದಾನೆ ಎನ್ನುವಷ್ಟು ಮಟ್ಟಿಗೆ ನಿರುದ್ಯೋಗ ಸಮಸ್ಯೆ ಬೆಳೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲೆಡೆ ಹತಾಶ ನಿರುದ್ಯೋಗಿಗಳ ದಂಡೇ ಕಂಡು ಬರುತ್ತಿದೆ. ಇಲ್ಲಿರುವ ನೂರಾರೂ ಶಿಕ್ಷಣ ಸಂಸ್ಥೆಗಳಲ್ಲಿ ಲಕ್ಷಗಟ್ಟಲೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಹೊಂದಿ ಸರ್ಟಿಫಿಕೇಟ್ ಪಡೆದು ಹೊರಬರುತ್ತಿದ್ದರೂ ಅವರಿಗೆ ಅರ್ಹವಾದ ಶೇ. 5ರಷ್ಟು ಉದ್ಯೋಗಗಳು ಅವಿಭಜಿತ ದ.ಕ ಜಿಲ್ಲೆಯಲ್ಲಿ ಸೃಷ್ಡಿಯಾಗುತ್ತಿಲ್ಲ. ಇಲ್ಲಿನ ವೃತ್ತಿಪರ ಶಿಕ್ಷಣ ಸಂಸ್ಥೆಗಳು ದುಬಾರಿ ದರ ಪಡೆದು ನಿರುದ್ಯೋಗಿಗಳನ್ನು ಸೃಷ್ಟಿಸುವ ಕಾರ್ಖಾನೆಗಳಾಗುತ್ತಿವೆ ಎಂದು ಹೇಳಿದರು.

ಕೇಂದ್ರ ಸರಕಾರ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯ ಭರವಸೆಯನ್ನು ಈಡೇರಿಸದೆ ಇರುವ ಉದ್ಯೋಗ ಗಳನ್ನು ಕಳೆದುಕೊಳ್ಳುವಂತಹ ತಪ್ಪಾದ ನೀತಿಗಳನ್ನು ಜಾರಿಗೊಳಿಸಿ ಇರುವ ಉದ್ಯೋಗಾವಕಾಶಗಳನ್ನು ನಾಶಪಡಿ ಸುತ್ತಿವೆ. ಕರ್ನಾಟಕದ ಸರಕಾರಿ ಇಲಾಖೆಗಳಲ್ಲಿ ಎರಡುವರೆ ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಭರ್ತಿ ಯಾಗದೆ ಖಾಲಿ ಬಿದ್ದಿವೆ ಎಂದು ವಿವರಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಬೃಹತ್ ಕೈಗಾರಿಕೆಗಳು ಕಾರ್ಯಾಚರಿಸುತ್ತಿದ್ದರೂ ಉದ್ಯೋಗ ಸೃಷ್ಟಿಸುವಲ್ಲಿ ಅವುಗಳು ಹಿಂದೆ ಬಿದ್ದಿವೆ. ಇರುವ ಉದ್ಯೋಗಾವಕಾಶಗಳಲ್ಲಿ ಸ್ಥಳೀಯರಿಗೆ ಅವಕಾಶ ನಿರಾಕರಿಸಲಾಗುತ್ತಿದೆ. ಗುತ್ತಿಗೆ, ಹೊರ ಗುತ್ತಿಗೆ ಪದ್ಧತಿಗಳೆಂಬ ಅರೆ ಸಂಬಳದ, ಉದ್ಯೋಗ ಭದ್ರತೆ ಇಲ್ಲದ ಆಧುನಿಕ ಜೀತ ಪದ್ಧತಿಗಳು ಜಿಲ್ಲೆಯ ಉದ್ಯಮಗಳಲ್ಲಿ ವಿಜೃಂಭಿಸುತ್ತಿವೆ. ಕರಾವಳಿಯ ಮತ್ಸ್ಯೋದ್ಯಮ, ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ರಬ್ಬರ್ ಕೃಷಿಗಳಿಂದ ಉದ್ಯೋಗ ಸೃಷ್ಟಿಯಾಗುವ ಉದ್ಯಮಗಳನ್ನು ಸ್ಥಾಪಿಸುವ ವ್ಯಾಪಕ ಅವಕಾಶಗಳು ಇದ್ದರೂ ಆ ನಿಟ್ಟಿನಲ್ಲಿ ನಮ್ಮ ಜನಪ್ರತಿನಿಧಿಗಳು, ಸರಕಾರ ಆಲೋಚನೆಯನ್ನೇ ಮಾಡಿಲ್ಲ ಎಂದು ದೂರಿದರು.

ಸಮುದ್ರ, ನದಿಗಳು, ಅರಣ್ಯ ಹೀಗೆ ವಿಪುಲ ಅವಕಾಶಗಳನ್ನು ಬಳಸಿ ಉದ್ಯೋಗ ಸೃಷ್ಟಿಯ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗಿಲ್ಲ. ಅಲ್ಲದೆ ಓಬಿರಾಯನ ಕಾಲದಲ್ಲಿ ಮಂಜೂರಾದ ಸರಕಾರಿ ಹುದ್ದೆಗಳು ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲೀ ಬಿದ್ದಿದ್ದರೂ ಅವುಗಳನ್ನೂ ಭರ್ತಿಗೆ ಸರಕಾರ ಕ್ರಮಕೈಗೊಳ್ಳುತ್ತಿಲ್ಲ ಎಂದು ಹೇಳಿದರು.

ಮಂಗಳೂರು ನಗರ ಹಾಗೂ ಆಸುಪಾಸಿನಲ್ಲಿ ಹಲವು ಉದ್ಯಮಗಳು, ವ್ಯಾಪಾರೀ ಸಂಸ್ಥೆಗಳು, ಬೃಹತ್ ಆಸ್ಪತ್ರೆ ಗಳು, ಶಿಕ್ಷಣ ಸಂಸ್ಥೆಗಳು, ಮಾಲ್ ಗಳು ಇವೆ. ಬಂದರು, ವಿಮಾನ ನಿಲ್ದಾಣ ಸಹಿತ ಸಾರ್ವಜನಿಕ ವಲಯದ ಹಲವು ದೊಡ್ಡ ಕೈಗಾರಿಕೆಗಳು ಇಲ್ಲಿವೆ. ಸಾಕಷ್ಟು ವಿಶಾಲವಾದ ಬೈಕಂಪಾಡಿ, ಯೆಯ್ಯಾಡಿ, ಗಂಜಿಮಠ, ಮುಡಿಪು ಕೈಗಾರಿಕಾ ವಲಯವೂ ಇದೆ. ಇಷ್ಟೆಲ್ಲಾ ಇದ್ದರೂ ಸ್ಥಳೀಯ ಯುವಜನರಿಗೆ ಉತ್ತಮ ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ, ಒದಗಿಸುವಲ್ಲಿ ಅವು ಸೋತಿವೆ ಎಂದು ಹೇಳಿದರು.

ಬ್ಯಾಂಕುಗಳು, ರೈಲ್ವೆಗಳಲ್ಲಿ ಖಾಯಂ ಉದ್ಯೋಗಗಳು ಹೊರ ರಾಜ್ಯದವರಿಗಷ್ಟೆ ಮೀಸಲಾಗಿದೆ. ಇತ್ತೀಚೆಗೆ ಎಮ್‌ಆರ್‌ಪಿಎಲ್, ಎಸ್‌ಇಝಡ್‌ನ ಉದ್ಯೋಗಗಳ ನೇಮಕಾತಿಯಲ್ಲಿ ಸ್ಥಳೀಯ ಯುವಜನರನ್ನು ಹೊರಗಿಡುವುದು, ವಿಮಾನ ನಿಲ್ದಾಣ ಅದಾನಿ ಗುಂಪಿನ ವಶವಾದ ಬಳಿಕ ಗುತ್ತಿಗೆ ನೌಕರರಾದ ಸ್ಥಳೀಯರನ್ನು ಹೊರಗಟ್ಟಲಾಗುತ್ತದೆ ಎಂದು ಬಿ.ಕೆ ಇಮ್ತಿಯಾಝ್ ನುಡಿದರು.

*ತುಳುವಪ್ಪೆ ಜೋಕ್ಲೆಗ್ ಮಲ್ಲ ಪಾಲ್ : ಆವಿಭಜಿತ ದ.ಕ. ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಎಲ್ಲಾ ಅವಕಾಶಗಳು ಇದ್ದರೂ ಸರಕಾರಗಳ ತಪ್ಪಾದ ನೀತಿಯಿಂದ ನಿರುದ್ಯೋಗಿಗಳ ಕೇಂದ್ರವಾಗಿ ಗುರುತಿಸಲ್ಪಡುತ್ತಿದೆ ಎಂದು ಡಿವೈಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ್ ಬಜಾಲ್ ತಿಳಿಸಿದರು.

ದುಬಾರಿಯಾಗಿರುವ ಉತ್ತಮ ಶಿಕ್ಷಣ ಪಡೆದರೂ ನಿರುದ್ಯೋಗಿಗಳಾಗಿ, ಅರೆ ಉದ್ಯೋಗಿಗಳಾಗಿ, ನಿಕೃಷ್ಟ ವೇತನ ಮಾತ್ರ ಪಡೆದು, ಉದ್ಯೋಗ ಭದ್ರತೆ ಇಲ್ಲದೆ ಯುವಜನರು ಅಸಹಾಯಕರಾಗುತ್ತಿದ್ದಾರೆ.ಯುವಜನರ ಪಾಲಿಗೆ ಕರಾಳವಾದ ನಿರುದ್ಯೋಗದ ಈ ಭೀಕರ ಸಮಸ್ಯೆಗೆ ಎದುರಾಗಿ ಡಿವೈಎಫ್‌ಐ ದ.ಕ ಜಿಲ್ಲಾ ಸಮಿತಿ ಯುವಜನರ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆ ಎಂದು ಸಂತೋಷ್ ಬಜಾಲ್ ಹೇಳಿದರು.

ತುಳುನಾಡ್‌ದ ಅಭಿವೃದ್ದಿಡ್ ತುಳುವಪ್ಪೆ ಜೋಕ್ಲೆಗ್ ಮಲ್ಲ ಪಾಲ್ ಎಂಬ ಘೋಷಣೆಯಡಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು, ಸರೋಜಿನಿ ಮಹಿಷಿ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಲು ಸೇರಿದಂತೆ ಪ್ರತೀ ತಾಲೂಕುಗಳಲ್ಲಿ ಕೈಗಾರಿಕಾ ವಲಯಗಳನ್ನು ಸ್ಥಾಪಿಸುವ, ಜಿಲ್ಲೆಯ ವಿವಿಧ ಸರಕಾರಿ ಇಲಾಖೆಗಳಲ್ಲಿ ಖಾಲಿ ಬಿದ್ದಿರುವ ಹುದ್ದೆಗಳ ಭರ್ತಿ, ಗುತ್ತಿಗೆ ಉದ್ಯೋಗಗಳನ್ನು ಕಡಿಮೆಗೊಳಿಸಿ ಖಾಯಂ ನೌಕರರ ನೇಮಕ ಮಾಡಿಕೊ ಳ್ಳಲು ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಯುವಜನರ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಸಮಾರೋಪ ಸಮಾರಂಭದಲ್ಲಿ ಭಾಷಣಗಾರರಾಗಿ ಡಿವೈಎಫ್‌ಐ ಕೇಂದ್ರ ಸಮಿತಿ ಸದಸ್ಯ ಹಾಗೂ ಕೇರಳದ ಶಾಸಕ ಎಂ. ವಿಜಿನ್, ಮುಖ್ಯ ಅತಿಥಿಗಳಾಗಿ ಡಿವೈಎಫ್‌ಐ ಕರ್ನಾಟಕ ರಾಜ್ಯ ಕಾರ್ಯದರ್ಶಿ ಬಸವರಾಜ್ ಪೂಜಾರ್, ಪ್ರೊ.ಫಣಿರಾಜ್ ಭಾಗವಹಿಸಲಿದ್ದಾರೆ. ಸಾವಿರಕ್ಕೂ ಅಧಿಕ ಯುವಜನರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿವೈಎಫ್‌ಐ ಜಿಲ್ಲಾ ಕೋಶಾಧಿಕಾರಿ ಮನೋಜ್ ವಾಮಂಜೂರು, ಜಿಲ್ಲಾ ಪದಾಧಿಕಾರಿಗಳಾದ ರಿಜ್ವಾನ್ ಹರೇಕಳ, ಜಗದೀಶ್ ಬಜಾಲ್ , ತಯ್ಯೂಬ್ ಬೆಂಗ್ರೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X