Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೆ. 7,8,9: ಉದ್ಯೋಗದ ಹಕ್ಕಿಗಾಗಿ...

ಸೆ. 7,8,9: ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐನಿಂದ ಜಿಲ್ಲಾದ್ಯಂತ ಯುವಜನ ಜಾಥಾ

ವಾರ್ತಾಭಾರತಿವಾರ್ತಾಭಾರತಿ8 Aug 2025 2:32 PM IST
share
ಸೆ. 7,8,9:  ಉದ್ಯೋಗದ ಹಕ್ಕಿಗಾಗಿ ಡಿವೈಎಫ್ಐನಿಂದ ಜಿಲ್ಲಾದ್ಯಂತ ಯುವಜನ ಜಾಥಾ
ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಪ್ರೋ ನರೇಂದ್ರ ನಾಯಕ್ ಆಯ್ಕೆ

ತುಳುನಾಡ ಅಭಿವೃದ್ಧಿಡ್ ತುಳುವಪ್ಪೆ ಜೋಕ್ಲೆಗ್ ಮಲ್ಲ ಪಾಲ್ ಎಂಬ ಘೋಷಣೆಯಡಿ ಉದ್ಯೋಗ ಸೃಷ್ಟಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಹಾಗೂ ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರಲು ಆಗ್ರಹಿಸಿ ಸೆಪ್ಟೆಂಬರ್‌ ತಿಂಗಳ 7,8,9 ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯುವಜನರ ಜಾಥಾವನ್ನು ಸಂಘಟಿಸಲು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನಿರ್ಧರಿಸಿದೆ. ಈ ಜಾಥಾ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಿನ್ನೆ ದಿನಾಂಕ 7-8-2025 ರಂದು ನಗರದ ವಿಕಾಸ ಕಚೇರಿಯಲ್ಲಿ ಸ್ವಾಗತ ಸಮಿತಿ ರಚನಾ ಸಭೆಯನ್ನು ನಡೆಸಿದೆ.

ಸಭೆಯನ್ನು ಉದ್ದೇಶಿಸಿ ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡುತ್ತಾ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹತಾಶ ನಿರುದ್ಯೋಗಿಗಳ ದಂಡೇ ಕಂಡು ಬರುತ್ತಿದೆ. ಪ್ರತೀ ವರುಷ ಸುಮಾರು ಒಂದು ಲಕ್ಷದಷ್ಪು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಗಿಸಿ ಸರ್ಟಿಫೀಕೇಟ್ ಪಡೆದು ಹೊರಬರುತ್ತಿದ್ದರೂ ಅವರ ಶಿಕ್ಷಣಕ್ಕೆ ಪೂರಕವಾದ ಉದ್ಯೋಗಗಳನ್ನು ಸೃಷ್ಟಿಸುವಲ್ಲಿ ಸರಕಾರಗಳು ವಿಫಲವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳು ಕಾರ್ಯಾಚರಿಸುತ್ತಿದ್ದರೂ ಅವುಗಳು ಉದ್ಯೋಗ ಸೃಷ್ಟಿಸುವಲ್ಲಿ ಹಿಂದೆ ಬಿದ್ದಿವೆ. ಅಲ್ಲದೆ ಸ್ಥಳೀಯ ಯುವಜನರಿಗೆ ಆದ್ಯತೆ ನೀಡದೆ ಹೊರಗಿಡಲಾಗುತ್ತಿದೆ. ಇನ್ನು ರೈಲ್ವೆ, ಬ್ಯಾಂಕು, ಎಮ್.ಆರ್.ಪಿ.ಎಲ್ ನಂತಹ ಕ್ಷೇತ್ರಗಳಲ್ಲಿ ಇರುವ ಚಿನ್ನದಂತಹ ಖಾಯಂ ಉದ್ಯೋಗಗಳು ಹೊರರಾಜ್ಯದವರಿಗಷ್ಟೇ ಮೀಸಲಾಗಿದೆ. ಈ ಹಿಂದೆ ಕೇಂದ್ರ ಸರಕಾರ ಪ್ರತೀ ವರುಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ಈವರೆಗೂ ಈಡೇರಿಲ್ಲ ಬದಲಾಗಿ ಇಂಟರ್ ಶಿಫನ್ನೂ ಉದ್ಯೋಗ ಎಂದು ಬಿಂಬಿಸಿ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭಮಾಡಿ ಕೊಡಲಾಗುತ್ತಿದೆ. ರಾಜ್ಯ ಸರಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2.70ಲಕ್ಷ ಸರಕಾರಿ ಹುದ್ದೆ ಖಾಲಿ ಬಿದ್ದಿದ್ದರೂ ಈವರೆಗೂ ಭರ್ತಿಗೊಳಿಸುವ ನಿರ್ಧಾರಕ್ಕೆ ಬಂದಿಲ್ಲ. ಇತ್ತಿಚೇಗೆ ಖಾಸಗೀ ರಂಗದ ಉದ್ದಿಮೆಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ಒದಗಿಸುವ 'ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024" ಯನ್ನು ಜಾರಿಮಾಡಲು ಹೊರಟ ಸಂದರ್ಭದಲ್ಲಿ ಕಾರ್ಪೊರೇಟ್ ಕಂಪೆನಿ ಧಣಿಗಳ ವಿರೋಧಕ್ಕೆ ಮಣಿದು ಈ ಯೋಜನೆಯನ್ನೇ ಕೈಬಿಟ್ಟಿರುವ ನಡೆಯಿಂದ ಸರಕಾರಕ್ಕೆ ರಾಜ್ಯದ ಯುವಜನರಿಗೆ ಉದ್ಯೋಗ ಸೃಷ್ಟಿಸುವಲ್ಲಿ ಎಷ್ಟು ಆಸಕ್ತಿಯನ್ನು ಹೊಂದಿದೆ ಎಂಬುದಕ್ಕೆ ಇದೊಂದು ತಾಜಾ ಉದಾಹರಣೆ. ಈ ಹಿನ್ನಲೆಯಲ್ಲಿ ಡಿವೈಎಫ್ಐ ಉದ್ಯೋಗ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಬೇಕು ಎಂಬ ಆಶಯದಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯಾಗಬೇಕು. ಸ್ಥಳೀಯ ಯುವಜನರಿಗೆ ಉದ್ಯೋಗದಲ್ಲಿ ದೊಡ್ಡ ಪಾಲು ಸಿಗಬೇಕು ಎಂಬ ಪ್ರಧಾನ ಬೇಡಿಕೆಯನ್ನು ಮುಂದಿಟ್ಟು ಯುವಜನರ ಬೃಹತ್ ಆಂದೋಲನವನ್ನು ಕೈಗೆತ್ತಿಕೊಂಡಿದೆ ಎಂದರು.

ವೇದಿಕೆಯಲ್ಲಿ ವಿಚಾರವಾದಿ ಪ್ರೋ ನರೇಂದ್ರ ನಾಯಕ್, ದಲಿತ ಸಂಘರ್ಷ ಸಮಿತಿಯ ಹಿರಿಯ ನೇತಾರ ಎಂ.ದೇವದಾಸ್, ಡಿವೈಎಫ್ಐ ಜಿಲ್ಲಾ ಮುಖಂಡರಾದ ನಿತಿನ್ ಕುತ್ತಾರ್, ತಯ್ಯೂಬ್ ಬೆಂಗರೆ, ನವೀನ್ ಕೊಂಚಾಡಿ ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಡಿವೈಎಫ್ಐ ಜಿಲ್ಲಾ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ವಹಿಸಿದ್ದರು.

ಸಭೆಯಲ್ಲಿ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ, ಕಾರ್ಮಿಕ ಮುಖಂಡರಾದ ಸುನೀಲ್ ಕುಮಾರ್ ಬಜಾಲ್, ವಸಂತ ಆಚಾರಿ, ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೊಟ್ಟು, ಸದಾಶಿವದಾಸ್, ಯೋಗೀಶ್ ಜಪ್ಪಿನಮೊಗರು, ವಾಸುದೇವ ಉಚ್ಚಿಲ, ಡಾ ಕೃಷ್ಣಪ್ಪಕೊಂಚಾಡಿ, ಡಾ ಜೀವನ್ ರಾಜ್, ಆದಿವಾಸಿ ಸಂಘಟನೆಯ ಕರಿಯ ಕೆ, ಲಕ್ಷ್ಮಣ್ ವಾಮಂಜೂರು, ಶ್ಯಾಮ್ ಸುಂದರ್, ಮೈಕಲ್ ಡಿಸೋಜ, ಮದರ್ ತೆರೆಸಾ ವಿಚಾರ ವೇದಿಕೆಯ ಡೋಲ್ಫಿ ಡಿಸೋಜ, ಜನವಾದಿ ಮಹಿಳಾ ಸಂಘಟನೆಯ ಪ್ರಮಿಳಾ ಶಕ್ತಿನಗರ, ಪ್ರಮೀಳಾ ದೇವಾಡಿಗ, ಪ್ರಮೋದಿನಿ, ಯೋಗಿತಾ, ಸುನಂದಾ ಕೊಂಚಾಡಿ, ರೈತ ಸಂಘದ ಕೃಷ್ಣಪ್ಪ ಸಾಲ್ಯಾನ್, ವಿದ್ಯಾರ್ಥಿ ಸಂಘಟನೆಯ ವಿನುಶ ರಮಣ, ಬ್ಯಾಂಕ್ ನೌಕರರ ಸಂಘಟನೆಯ ಪುರುಷೋತ್ತಮ, ಬಿ.ಎನ್ ದೇವಾಡಿಗ, ನಾಗೇಶ್, ಡಿವೈಎಫ್ಐ ನ ರಜಾಕ್ ಮುಡಿಪು, ಅಶ್ರಫ್ ಹರೇಕಳ, ಮಾದುರಿ ಬೋಳಾರ, ಸನೀಲ್ ತೇವುಲ, ಜಗದೀಶ್ ಬಜಾಲ್ , ಚರಣ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

ಈ ವೇಳೆ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಪ್ರೋ ನರೇಂದ್ರ ನಾಯಕ್, ಕಾರ್ಯಾದ್ಯಕ್ಷರಾಗಿ ಮಂಜುಳಾ ನಾಯಕ್, ಅಧ್ಯಕ್ಷರಾಗಿ ಬಿ.ಕೆ ಇಮ್ತಿಯಾಜ್, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ್ ಬಜಾಲ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನೋಜ್ ವಾಮಂಜೂರು, ಕೋಶಾಧಿಕಾರಿಯಾಗಿ ರಿಜ್ವಾನ್ ಹರೇಕಳ ಅವರನ್ನು ಆಯ್ಕೆ ಮಾಡಲಾಯಿತು 150ಕ್ಕೂ ಮಿಕ್ಕಿ ಸದಸ್ಯರ ಸಮಿತಿಯನ್ನು ರಚಿಸಲಾಯಿತು.

ಸಭೆಯಲ್ಲಿ ಡಿವೈಎಫ್ಐ ಜಿಲ್ಲಾ ಕೋಶಾಧಿಕಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X