Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ;...

ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ; ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಕೆ: ಸದಾಶಿವ ಉಳ್ಳಾಲ್

ವಾರ್ತಾಭಾರತಿವಾರ್ತಾಭಾರತಿ29 Nov 2025 2:58 PM IST
share
ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ; ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಕೆ: ಸದಾಶಿವ ಉಳ್ಳಾಲ್

ಮಂಗಳೂರು, ನ.29: ತೀಯಾ ಸಮುದಾಯದ ಅಭಿವೃದ್ಧಿಗಾಗಿ ತೀಯಾ ಸಮುದಾಯಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡಬೇಕು ಎಂಬುದು ಸೇರಿದಂತೆ ತೀಯಾ ಸಮುದಾಯದ ವಿವಿಧ ಬೇಡಿಕೆಗಳ ಮನವಿಯನ್ನು ಡಿ.3ರಂದು ಮಂಗಳೂರು ವಿವಿಗೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಲಾಗುವುದು ಎಂದು ಭಾರತೀಯ ತೀಯಾ ಸಮಾಜ ಕೇಂದ್ರ ಸಮಿತಿ ಅಧ್ಯಕ್ಷ ಸದಾಶಿವ ಉಳ್ಳಾಲ ತಿಳಿಸಿದರು.

ವರ್ಕಳದ ಶಿವಗಿರಿ ಮಠದ ನೇತೃತ್ವದಲ್ಲಿ ಹಾಗೂ ಮಂಗಳೂರು ವಿವಿಯ ಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಸಹಯೋಗದಲ್ಲಿ ಮಹಾತ್ಮಾ ಗಾಂಧಿಜಿ ಮತ್ತು ಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಹಾಗೂ ಶ್ರೀ ನಾರಾಯಣ ಗುರುಗಳ ಮಹಾನಿರ್ವಾಣ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಡಿ. 3ರಂದು ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಮಹೋತ್ಸವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಈ ವೇಳೆ ತೀಯಾ ಸಮುದಾಯದ ಬೇಡಿಕೆಯ ಮನವಿಯನ್ನು ಮುಖ್ಯಮಂತ್ರಿ ಅವರಿಗೆ ನೀಡಲಾಗುವುದು ಎಂದು ಕುದ್ರೋಳಿ ಶ್ರೀ ಭಗವತೀಕ್ಷೇತ್ರ, ಉಳ್ಳಾಲ ಶ್ರೀ ಚೀರುಂಭ ಭಗವತೀ ಕ್ಷೇತ್ರ, ಸಸಿಹಿತ್ಲು ಶ್ರೀ ಭಗವತೀ ಕ್ಷೇತ್ರ, ಬೋಲ್ನಾಡ್ ಶ್ರೀ ಭಗವತೀ ಕ್ಷೇತ್ರಕ್ಕೆ ಒಳಪಟ್ಟ ತೀಯಾ ಸಮಾಜದ ಪ್ರಮುಖರ ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ‘ಯತಿಪೂಜೆ’ ಮತ್ತು ಸರ್ವಮತ ಸಮ್ಮೇಳನ ಆಯೋಜನೆಗೊಂಡಿದೆ. ವಿವಿಧ ಮಠಗಳಿಂದ ಆಗಮಿಸುವ ಐವತ್ತು ಮಂದಿ ಸನ್ಯಾಸಿಗಳಿಗೆ ಗೌರವ ಸಲ್ಲಿಸಲಾಗುವುದು. ಕಾರ್ಯಕ್ರಮದಲ್ಲಿ ತೀಯಾ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳು ತೀಯಾ ಸಮಾಜದಲ್ಲಿ ಜನಿಸಿದ್ದಾರೆ. ಗುರುಗಳು ನಮ್ಮ ರಾಜ್ಯಕ್ಕೆ ಪ್ರಥಮ ಬಾರಿ 1908ರಲ್ಲಿ ಭೇಟಿ ನೀಡಿದ ಸ್ಥಳವಾದ ಶ್ರೀ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಬಹಳಷ್ಟು ಇತಿಹಾಸವಿದೆ. ನಾರಾಯಣ ಗುರುಗಳಿಗೂ ನಮ್ಮ ಸಮಾಜಕ್ಕೂ ಅವಿನಾಭಾವ ಸಂಬಂಧವಿದ್ದ ಕಾರಣ ಗುರುಗಳು ಅವರ ಕಾಲ ಘಟ್ಟದಲ್ಲಿ ಮಾಡಿರುವ ಕೆಲವೊಂದು ಕಾರ್ಯಕ್ರಮಗಳನ್ನು ಮತ್ತೆ ನೆನೆಪಿಸಿಕೊಂಡು ಕಾರ್ಯಕ್ರಮ ನಡೆಯುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಮುಖರ ಅಪೇಕ್ಷೆ ಎಂದರು.

ಉಳ್ಳಾಲ ಭಗವತಿ ಕ್ಷೇತ್ರದ ಸುರೇಶ್ ಭಟ್ನಗರ, ಕುದ್ರೋಳಿ ಭಗವತಿ ಕ್ಷೇತ್ರದ ವಿಶ್ವನಾಥ ಮಂಕಿಸ್ಟ್ಯಾಂಡ್, ಪ್ರಮುಖರಾದ ದೇವದಾಸ್ ಕೊಲ್ಯ, ಪ್ರೇಮಚಂದ್ರ, ಶಶಿಕಲಾ, ಆಶಾ ಚಂದ್ರಮೋಹನ್, ಸುಷ್ಮಾ ದೀಪಕ್, ಪುರುಷ ಸಾಲಿಯಾನ್, ಸುಧೀರ್ ಜೆಪ್ಪು, ಉಮೇಶ್ ಬಿಕರ್ನಕಟ್ಟೆ, ಪ್ರಭಾಕರ ಯೆಯ್ಯಾಡಿ, ರವಿ ಕೊಡಿಯಾಲ್‌ಬೈಲ್, ರಾಘವ ಆರ್.ಉಚ್ಚಿಲ್, ರಾಜ್‌ಗೋಪಾಲ್, ಉಮೇಶ್ ಬೆಂಜನಪದವು, ದಿನೇಶ್ ಕುಂಪಲ ಉಪಸ್ಥಿತರಿದ್ದರು.

ತೀಯಾ ಸಮಾಜ ಬಾಂಧವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,25000ಕ್ಕೂ ಹೆಚ್ಚಿದ್ದು, ರಾಜ್ಯದಲ್ಲಿ 3,50,000ಕ್ಕಿಂತ ಅಧಿಕ ಜನಸಂಖ್ಯೆಯನ್ನು ಸಮಾಜ ಹೊಂದಿದೆ. ಇದುವರೆಗೆ ಯಾವುದೇ ಸರಕಾರದಿಂದ ನಮ್ಮ ಸಮಾಜಕ್ಕೆ ಶಾಸಕರ ಪ್ರದೇಶ ಅಭಿವೃದ್ಧಿ ನಿಧಿಯಿಂದ ಪ್ರಯೋಜನ ಲಭಿಸಿದ್ದು ಹೊರತುಪಡಿಸಿ ಸರಕಾರ ಪ್ರತ್ಯೇಕವಾಗಿ ಯಾವುದೇ ರೀತಿಯಲ್ಲಿ ನಮ್ಮ ಸಮಾಜವನ್ನು ಗುರುತಿಸಿಲ್ಲ. ಸಿದ್ದರಾಮಯ್ಯ ಅವರ ಸರಕಾರದ ಚಿಂತನೆಯಂತೆ ಸಣ್ಣ ಸಣ್ಣ ಸಮುದಾಯಕ್ಕೆ ನಿಗಮಗಳನ್ನು ರಚನೆ ಮಾಡಿ ಸಮುದಾಯ ಅಭಿವೃದ್ಧಿ ಮಾಡುವ ಯೋಜನೆಯಲ್ಲಿ ತೀಯಾ ಸಮುದಾಯಕ್ಕೆ ನಿಗಮ ರಚನೆ ಮಾಡಬೇಕೆಂಬ ಪ್ರಮುಖ ಮನವಿ ನೀಡಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ತೀಯಾ ಸಮಾಜ ಭವನ ನಿರ್ಮಾಣಕ್ಕೆ ಸ್ಥಳ ಒದಗಿಸಬೇಕು, ದೇವಸ್ಥಾನಗಳ ದರ್ಶನದವರಿಗೆ, ಆಚಾರಪಟ್ಟವರಿಗೆ ಕೇರಳ ಮಾದರಿಯಲ್ಲಿ ಮಾಶಾಸನ ನೀಡಬೇಕು, ತೀಯಾ ಸಮಾಜಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಬೇಕು ಎಂಬ ಮನವಿಯನ್ನೂ ಸಿಎಂ ಅವರಿಗೆ ಸಲ್ಲಿಸಲಾಗುವುದು ಎಂದು ಸದಾಶಿವ ಉಳ್ಳಾಲ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X