Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ- ನೆಕ್ಕಿಲಾಡಿಯಲ್ಲಿ ಸರಣಿ...

ಉಪ್ಪಿನಂಗಡಿ- ನೆಕ್ಕಿಲಾಡಿಯಲ್ಲಿ ಸರಣಿ ಕಳ್ಳತನ

ವಾರ್ತಾಭಾರತಿವಾರ್ತಾಭಾರತಿ4 Nov 2023 10:39 PM IST
share
ಉಪ್ಪಿನಂಗಡಿ- ನೆಕ್ಕಿಲಾಡಿಯಲ್ಲಿ ಸರಣಿ ಕಳ್ಳತನ

ಉಪ್ಪಿನಂಗಡಿ: 34 ನೇ ನೆಕ್ಕಿಲಾಡಿ ಹಾಗೂ ಉಪ್ಪಿನಂಗಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬದಿಯ 6 ಅಂಗಡಿಗಳಿಂದ ಕಳವುಗೈದ ಪ್ರಕರಣ ನ.4ರಂದು ಬೆಳಗ್ಗೆ ಬೆಳಕಿಗೆ ಬಂದಿದ್ದು, ರೈನ್‍ಕೋಟ್ ಧರಿಸಿದ ಕಳ್ಳನೋರ್ವ ಈ ಕೃತ್ಯವನ್ನು ಎಸಗಿರುವುದು ಸಿಸಿ ಟಿವಿ ದೃಶ್ಯಾವಳಿಯಲ್ಲಿ ದೃಢಪಟ್ಟಿದೆ.

34 ನೇ ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಪಂಪಿನ ಕಚೇರಿಗೆ ನುಗ್ಗಿದ ಕಳ್ಳ ಅಲ್ಲಿಂದ ನಗದು ಹಣವನ್ನು ದೋಚಿದ್ದಾನೆ. ಅಂತೆಯೇ ನೆಕ್ಕಿಲಾಡಿಯ ಬೊಳ್ಳಾರ್ ಎಂಬಲ್ಲಿರುವ ವೃಂದಾ ವೈಭವ್ ಗ್ಯಾಸ್ ಫಿಲ್ಲಿಂಗ್ ಸೆಂಟರ್ ಗೆ ನುಗ್ಗಿ ಗಾಜಿನ ಬಾಗಿಲನ್ನು ಮುರಿದು ಸೊತ್ತು ಹಾನಿಗೊಳಿಸಿದ್ದಾನೆ. ಒಡೆದ ಗಾಜಿನ ಬಾಗಿಲಿನ ಮೌಲ್ಯವೇ ಸುಮಾರು ಎರಡು ಲಕ್ಷದಷ್ಟು ಆಗಬಹುದು ಎಂದು ಅಂದಾಜಿಸಲಾಗಿದೆ. ಅಲ್ಲಿ ದೇವರ ಮಂಟಪದಲ್ಲಿನ ಬೆಳ್ಳಿ ಚೆಂಬು ಹಾಗೂ ಕ್ಯಾಶ್ ಡ್ರಾಯರ್ ನಲ್ಲಿದ್ದ ನಗದನ್ನು ದೋಚಿದ್ದಾನೆ. ಅಲ್ಲೇ ಪಕ್ಕದಲ್ಲಿದ್ದ ಗೂಡಂಗಡಿಗೆ ನುಗ್ಗಿ ಅಲ್ಲಿಂದ ಸಿಗರೇಟ್ ಪ್ಯಾಕೇಟ್‍ಗಳನ್ನು ಕದ್ದೊಯ್ದಿರುತ್ತಾನೆ.

ಉಪ್ಪಿನಂಗಡಿಯ ಗಾಂಧೀ ಪಾರ್ಕ್ ಬಳಿಯ ಜಗದೀಶ್ ನಾಯಕ್ ಎಂಬವರ ಟೈಲ್ಸ್ ಅಂಗಡಿಗೆ ನುಗ್ಗಿ 20 ಸಾವಿರ ನಗದು ಹಣವನ್ನು ದೋಚಿದ್ದಾನೆ ಹಾಗೂ ಅಲ್ಲೇ ಪಕ್ಕದ ಗುಜಿರಿ ಅಂಗಡಿಗೆ ನುಗ್ಗಿದ ಕಳ್ಳ ಅಂಗಡಿಯೊಳಗಿದ್ದ ತಾಮ್ರದ ಬೆಲೆ ಬಾಳುವ ಸೊತ್ತುಗಳನ್ನು ಕದ್ದೊಯ್ದಿದ್ದಾನೆ. ಅದರ ಸನಿಹದಲ್ಲಿರುವ ಹೋಟೇಲಿಗೂ ನುಗ್ಗಿ ಅಲ್ಲಿಂದಲೂ ನಗದು ಹಣವನ್ನು ದೋಚಿರುತ್ತಾನೆ.

ಎರಡು ಗ್ರಾಮಗಳಲ್ಲಿ ತಲಾ 3 ಅಂಗಡಿಗಳನ್ನು ಕೇಂದ್ರೀಕರಿಸಿ ಕಳ್ಳತನ ಮಾಡಿರುವ ಕಳ್ಳ ನಸುಕಿನ ವೇಳೆ 3 ಗಂಟೆಯಿಂದ 5 ಗಂಟೆಯ ಮಧ್ಯೆ ಈ ಎಲ್ಲಾ ಆರು ಅಂಗಡಿಗಳಲ್ಲಿ ಕಳ್ಳತನವನ್ನು ಮಾಡಿದ್ದಾನೆ. ಈತ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಅಂಗಡಿಗಳನ್ನೇ ಟಾರ್ಗೆಟ್ ಮಾಡಿದ್ದು, ಮೊದಲು ಉಪ್ಪಿನಂಗಡಿಯಲ್ಲಿ ಕಳವು ಮಾಡಿ ಬಳಿಕ ದ್ವಿ ಚಕ್ರ ವಾಹನದಲ್ಲಿ ನೆಕ್ಕಿಲಾಡಿಯತ್ತ ಸಾಗಿರುವುದು ದೃಢಪಟ್ಟಿದೆ.

ಘಟನೆಗೆ ಸಂಬಂಧಿಸಿ ಅಂಗಡಿ ಮಾಲಕರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು, ಅಂಗಡಿ ಮಾಲಕರ ವಿನಂತಿಯ ಮೇರೆಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X