ಹಳೆಯಂಗಡಿಯ ಸಾಗ್ ರಸ್ತೆಯಲ್ಲಿ ಹರಿಯುತ್ತಿರುವ ಕೊಳಚೆ ನೀರು: ಸಮಸ್ಯೆ ಬಗೆಹರಿಸಲು ಪಿಡಿಒಗೆ ವಿಮ್ ಮನವಿ

ಮಂಗಳೂರು: ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಅವರನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿಯ ನಿಯೋಗ ಭೇಟಿಯಾಗಿ ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಗ್ ಎಂಬಲ್ಲಿ ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಕಾರಣದಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಸಾರ್ವಜನಿಕರು ನಡೆದಾಡುವ ಪ್ರದೇಶದಲ್ಲಿ ದಟ್ಟವಾಗಿ ಹುಲ್ಲುಗಳು ಬೆಳೆದಿದ್ದು, ಚರಂಡಿಯಲ್ಲಿ ಕೊಳಚೆ ನೀರು ಸರಾಗವಾಗಿ ಹರಿಯದೆ ರಸ್ತೆಯಲ್ಲಿಯೇ ಹರಿಯುತ್ತಿದೆ. ಇದರಿಂದಾಗಿ ಇಲ್ಲಿ ಗಬ್ಬು ವಾಸನೆ ಬರುತ್ತಿದ್ದು ಸಾರ್ವಜನಿಕರು ಮೂಗು ಮುಚ್ಚಿ ನಡೆಯುವ ಪರಿಸ್ಥಿತಿ ಬಂದೊದಗಿದೆ. ಸೊಳ್ಳೆಗಳು ಉತ್ಪತ್ತಿಯಾಗಿ ಸಾರ್ವಜನಿಕರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ನಡೆದಾಡಲು ತುಂಬಾ ತೊಂದರೆಯಾಗುತ್ತಿದ್ದು, ಆರೋಗ್ಯದ ಮೇಲೂ ದುಷ್ಪರಿಣಾಮಗಳು ಬೀರುತ್ತಿದೆ ಎಂದು ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಸಮಿತಿ ನಿಯೋಗವು ಹಳೆಯಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದೆ
ಈ ಸಂದರ್ಭದಲ್ಲಿ ವಿಮ್ ಮಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಅಝ್ವೀನ ಅಕ್ರಮ್ ಕಾಟಿಪಳ್ಳ, ಸಮಿತಿ ಸದಸ್ಯೆ ಮಿನಾಝ್ ಮುಲ್ಕಿ ಹಾಗೂ ಗುತ್ತಕಾಡು ಬ್ರಾಂಚ್ ಸಮಿತಿ ಅಧ್ಯಕ್ಷೆ ನೂರ್ ಜಹಾನ್ ಗುತ್ತಕಾಡು ಉಪಸ್ಥಿತರಿದ್ದರು.