Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಿದ್ಧಕಟ್ಟೆ : ಅ.12 ರಂದು ಕೊಡಂಗೆಯಲ್ಲಿ...

ಸಿದ್ಧಕಟ್ಟೆ : ಅ.12 ರಂದು ಕೊಡಂಗೆಯಲ್ಲಿ ವೀರ-ವಿಕ್ರಮ ರೋಟರಿ ಕಂಬಳ

ವಾರ್ತಾಭಾರತಿವಾರ್ತಾಭಾರತಿ10 Oct 2025 2:39 PM IST
share
ಸಿದ್ಧಕಟ್ಟೆ : ಅ.12 ರಂದು ಕೊಡಂಗೆಯಲ್ಲಿ ವೀರ-ವಿಕ್ರಮ ರೋಟರಿ ಕಂಬಳ

ಬಂಟ್ವಾಳ: ಕಳೆದ ವರ್ಷ ರೋಟರಿ ಇತಿಹಾಸದಲ್ಲೇ ಪ್ರಥಮ ಬಾರಿಗೆ 'ರೋಟರಿ ಕಂಬಳ' ಕೂಟ ನಡೆಸಿ ಗಮನ ಸೆಳೆದಿದ್ದ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಈ ಬಾರಿ ಇತರ ನಾಲ್ಕು ರೋಟರಿ ಕ್ಲಬ್ ಗಳ ಸಹಭಾಗಿತ್ವದಲ್ಲಿ ಸಿದ್ಧಕಟ್ಟೆ ಕೊಡಂಗೆಯಲ್ಲಿ ವೀರ -ವಿಕ್ರಮ ಜೋಡುಕರೆಯಲ್ಲಿ ಅ.12 ರಂದು ಎರಡನೇ ವರ್ಷದ 'ರೋಟರಿ ಕಂಬಳ' ನಡೆಸಲು ಮುಂದಾಗಿದೆ ಎಂದು ಈ ಕಂಬಳ ಕೂಟದ ನೇತೃತ್ವ ವಹಿಸಿಕೊಂಡಿರುವ ಮೊಡಂಕಾಪು ರೋಟರಿ ಕ್ಲಬ್ ಸ್ಥಾಪಕಾಧ್ಯಕ್ಷ ಎಲ್ಯಾಸ್ ಸ್ಯಾಂಕ್ಟಿಸ್ ಹೇಳಿದ್ದಾರೆ.

ಬಿ.ಸಿ.ರೋಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಜೊತೆಗೆ ಬಂಟ್ವಾಳ , ಮೊಡಂಕಾಪು, ಸಿದ್ದಕಟ್ಟೆ ಫಲ್ಗುಣಿ, ಮಂಗಳೂರು ಸೆಂಟ್ರಲ್ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಅದ್ದೂರಿ ಕಂಬಳ ನಡೆಯುತ್ತಿದೆ. ಅಂದು ಬೆಳಿಗ್ಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿ ಅಧ್ಯಕ್ಷತೆಯಲ್ಲಿ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಎಂ.ಪದ್ಮರಾಜ ಬಲ್ಲಾಳ್ ಕಂಬಳ ಕರೆ ಉದ್ಘಾಟಿಸುವರು. ರೋಟರಿ ಜಿಲ್ಲಾ ಗವರ್ನರ್ ರಾಮಕೃಷ್ಣ ಪಿ.ಕೆ. ಕಂಬಳ ಕೂಟಕ್ಕೆ ಚಾಲನೆ ನೀಡುವರು ಎಂದರು. ಜಿಲ್ಲಾ ರೋಟರಿ ಮಾಜಿ ಗವರ್ನರ್ ಎನ್.ಪ್ರಕಾಶ ಕಾರಂತ್ ಸಹಿತ ವಿವಿಧ ನಾಯಕರು ಭಾಗವಹಿಸಲಿರುವರು. ಸಂಜೆ 7 ಗಂಟೆಗೆ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ ಬಹುಮಾನ ವಿತರಿಸುವರು. ಜಿಲ್ಲಾ ಕಂಬಳ ಸಮಿತಿ ಗೌರವಾಧ್ಯಕ್ಷ ರೋಹಿತ್ ಹೆಗ್ಡೆ ಎರ್ಮಾಳ್, ಶಿಸ್ತು ಸಮಿತಿ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಲೋಕೇಶ ಶೆಟ್ಟಿ ಮುಚ್ಚೂರು, ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಮತ್ತಿತರ ಗಣ್ಯರು ಭಾಗವಹಿಸುವರು.

ಈ ಕಂಬಳ ಕೂಟದಲ್ಲಿ ಸುಮಾರು 150 ಕ್ಕೂ ಮಿಕ್ಕಿ ಜೋಡಿ ಹಗ್ಗ ಕಿರಿಯ, ನೇಗಿಲು ಕಿರಿಯ ಮತ್ತು ಸಬ್ ಜ್ಯೂನಿಯರ್ ಕೋಣಗಳು ಭಾಗವಹಿಸಲಿದೆ. 1905 ರಲ್ಲಿ ಅಮೇರಿಕಾದಲ್ಲಿ ಸ್ಥಾಪನೆಗೊಂಡ ರೋಟರಿ ಕ್ಲಬ್ ಪ್ರಸಕ್ತ ಒಟ್ಟು 220 ದೇಶಗಳಲ್ಲಿ ಸುಮಾರು 35 ಸಾವಿರ ಕ್ಲಬ್ ಮತ್ತು ಸುಮಾರು 12 ಲಕ್ಷ ಸದಸ್ಯರನ್ನು ಹೊಂದಿದೆ. ಕೇವಲ ನಗರ ಪ್ರದೇಶಕ್ಕೆ ಸೀಮಿತಗೊಂಡಿದ್ದ ರೋಟರಿ ಕ್ಲಬ್ ಜನಸೇವೆ ಮತ್ತು ರೋಟರಿ ಕಂಬಳದ ಮೂಲಕ ಗ್ರಾಮೀಣ ಕೃಷಿಕರ ಬಳಿ ತೆರಳಿ ಅವರ ವಿಶ್ವಾಸ ಗಳಿಸುವುದರ ಜೊತೆಗೆ ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆ ಹಾಗೂ ಸಾವಯವ ಕೃಷಿ ಮತ್ತಿತರ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ಪ್ರಯತ್ನ ನಡೆಸುತ್ತಿದೆ ಎಂದು ಅವರು ವಿವರಿಸಿದರು.

ಲೊರೆಟ್ಟೋ ಹಿಲ್ಸ್ ಕ್ಲಬ್ಬಿನ ಅಧ್ಯಕ್ಷ ವಿಜಯ ಫೆರ್ನಾಂಡಿಸ್ ಮಾತನಾಡಿ, ಪ್ರತೀ ವರ್ಷ ಎಲ್ಲಾ ರೋಟರಿ ಕ್ಲಬ್ ತಲಾ ರೂ 20 ಲಕ್ಷಕ್ಕೂ ಮಿಕ್ಕಿ ಮೊತ್ತವನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ಆರೋಗ್ಯ ಸೇವೆಗೆ ವಿನಿಯೋಗಿಸುತ್ತಿದೆ' ಎಂದರು.

ಸುದ್ದಿಗೋಷ್ಠಿಯಲ್ಲಿ ರೋಟರಿ ಜಿಲ್ಲಾ ನಾಯಕ ನಾರಾಯಣ ಹೆಗ್ಡೆ, ಕ್ಲಬ್ಬಿನ ಮಾಜಿ ಅಧ್ಯಕ್ಷ ಸುರೇಶ ಶೆಟ್ಟಿ, ಮೊಡಂಕಾಪು ಕ್ಲಬ್ಬಿನ ಅಧ್ಯಕ್ಷೆ ಪ್ರೀಮಾ ವೈಲೆಟ್ ಫೆರ್ನಾಂಡಿಸ್, ಲೊರೆಟ್ಟೊ ಹಿಲ್ಸ್ ಕ್ಲಬ್ಬಿನ ಕಾರ್ಯದರ್ಶಿ ಮೋಹನ್ ಕೆ. ಶ್ರೀಯಾನ್ ರಾಯಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X