Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ...

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’

ನಾಡು-ನುಡಿ ಸೇವೆಯಲ್ಲಿ ಆಳ್ವಾಸ್ ಪಾತ್ರ ಅನನ್ಯ : ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ7 May 2025 3:49 PM IST
share
ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’

ಮಂಗಳೂರು : ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ನುಡಿಸಿರಿ ವಿರಾಸತ್‌ಗಳಲ್ಲದೆ ಇತರ ಹಲವಾರು ರಾಜ್ಯ-ರಾಷ್ಟ್ರ ಮಟ್ಟದ ಕಾರ್ಯಕ್ರಮಗಳು ಕರಾವಳಿ ಕರ್ನಾಟಕದ ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳ ಶ್ರೀಮಂತಿಕೆಯನ್ನು ಜಗದಗಲ ಪಸರಿಸಿದೆ. ನಾಡು-ನುಡಿಯ ಸೇವೆಯಲ್ಲಿ ಆಳ್ವಾಸ್ ಸಮೂಹ ಸಂಸ್ಥೆಗಳ ಪಾತ್ರ ಹಿರಿದು. ಅದು ಇತರ ಹಲವಾರು ಸಂಘ ಸಂಸ್ಥೆಗಳಿಗೆ ಮಾದರಿಯಾಗಿದೆ’ ಎಂದು ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದ್ದಾರೆ.

ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಸಂಸ್ಥೆಯ ತುಳು ಸಂಘದ ಆಶ್ರಯದಲ್ಲಿ ನಡೆದ ‘ಸಿರಿಪರ್ಬ - 2025’ ತುಳು ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತಾತ್ಮಕ ಟ್ರಸ್ಟಿ ವಿವೇಕ್ ಆಳ್ವ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ಭಾಸ್ಕರ ರೈ.ಕುಕ್ಕುವಳ್ಳಿ ಅವರು ಸಿರಿಪರ್ಬದ ಅಂಗವಾಗಿ ಏರ್ಪಡಿಸಲಾಗಿದ್ದ ‘ತುಳು ಸಾಂಸ್ಕೃತಿಕ ವೈಭವ’ ಅಂತರ್ ಕಾಲೇಜು ಸ್ಪರ್ಧೆಗೆ ಚಾಲನೆ ನೀಡಿದರು.

ಈ ಬಾರಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಸಂಸ್ಥೆಯ ವಿದ್ಯಾರ್ಥಿಗಳಾದ ಹಾರ್ದಿಕ್ ಎಚ್.ಶೆಟ್ಟಿ, ಜೆವಿತಾ ಪೆರ್ಲ್ ಕ್ರಾಸ್ಟಾ, ಪ್ರಶಸ್ತಿ ಎಂ.ಎಸ್. ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತುಳು ಚಲನಚಿತ್ರ ನಟ ಮತ್ತು ನಿರ್ದೇಶಕ ಅನೀಶ್ ಪೂಜಾರಿ ವೇಣೂರು, ಆಳ್ವಾಸ್ ಇನ್ಟ್‌ಟ್ಯೂಟ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್, ಆಳ್ವಾಸ್ ಪದವಿ ಕಾಲೇಜು ಕನ್ನಡ ಪ್ರಾಧ್ಯಾಪಕ ಡಾ.ಯೋಗೀಶ್ ಕೈರೋಡಿ, ಶಿಕ್ಷಕ - ಕಲಾವಿದ ಬಾಲಕೃಷ್ಣ ರೇಖ್ಯ ಮುಖ್ಯ ಅತಿಥಿಗಳಾಗಿದ್ದರು. ಉಪನ್ಯಾಸಕ ಹೇಮಂತ್ ಸುವರ್ಣ ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

ಆಕರ್ಷಕ ಶೋಭಾಯಾತ್ರೆ - ವಸ್ತು ಪ್ರದರ್ಶನ :

ಸಮಾರಂಭದಲ್ಲಿ ತುಳುನಾಡಿನ ಜಾನಪದ ಸಂಸ್ಕೃತಿಗೆ ಪೂರಕವಾದ ಯಕ್ಷಗಾನ, ಚೆಂಡೆ ವಾದನ, ಕಂಬಳದ ಕೋಣಗಳು, ಕುಣಿತ ಭಜನೆ, ದಫ್ ಕುಣಿತಗಳನ್ನೊಳಗೊಂಡ ವರ್ಣರಂಜಿತ ಶೋಭಾಯಾತ್ರೆ ನಡೆಯಿತು. ತುಳು ಬದುಕಿನ ಭೌತಿಕ ಸಂಸ್ಕೃತಿಯನ್ನು ಪ್ರತಿನಿಧಿಸುವ ವಿವಿಧ ಪಾರಂಪರಿಕ ವಸ್ತುಗಳು, ದಿನಬಳಕೆಯ ಸಾಮಾನು, ಕೃಷಿ ಉಪಕರಣಗಳು, ಆಭರಣ, ಹಸ್ತ ಕಲಾಕೃತಿ, ಶಿಲ್ಪ ವೈವಿಧ್ಯ ,ಭೂತಕೋಲ, ನಾಗಾರಾಧನೆ, ಸಂಗೀತ ವಾದ್ಯ, ಯಂತ್ರೋಪಕರಣಗಳು ಸೇರಿದಂತೆ ವೈವಿಧ್ಯಮಯ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಸ್ಪರ್ಧಾ ಫಲಿತಾಂಶ :

ದಿನವಿಡೀ ನಡೆದ ಸ್ಪರ್ಧೆಯಲ್ಲಿ ಜಿಎಫ್‌ಜಿಸಿ ವಾಮದಪದವು, ಮಹಾವೀರ ಕಾಲೇಜು ಮೂಡಬಿದಿರೆ, ಎಸ್‌ಡಿಎಂ ಪಿಜಿ ಸೆಂಟರ್, ಆಳ್ವಾಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು, ಶ್ರೀ ಧವಳ ಕಾಲೇಜು, ಆಳ್ವಾಸ್ ಪದವಿ ಕಾಲೇಜು ಮುಂತಾದ ತಂಡಗಳು ಭಾಗವಹಿಸಿದ್ದವು. ಪ್ರತೀ ತಂಡವೂ ತುಳುನಾಡಿನ ಪುರಾತನ ಆಚರಣೆಗಳು, ಜಾನಪದ ಚರಿತ್ರೆ, ಆರಾಧನಾ ಪರಂಪರೆ, ಹಾಡು - ಕುಣಿತಗಳನ್ನೊಳಗೊಂಡ ತುಳುನಾಡಿನ ಶ್ರೀಮಂತ ಸಂಸ್ಕೃತಿಯನ್ನು ಕಲಾತ್ಮಕವಾಗಿ ರೂಪಿಸಿ ಪ್ರಸ್ತುತಪಡಿಸಿದವು. ಶ್ರೀ ಧವಳ ಕಾಲೇಜು ಮೂಡಬಿದಿರೆ ಪ್ರಥಮ, ಆಳ್ವಾಸ್ ಪದವಿ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು.

ವಿದ್ಯಾರ್ಥಿ ನಾಯಕ ದೀಕ್ಷಿತ್ ಡಿ.ಶೆಟ್ಟಿ ಸ್ವಾಗತಿಸಿ, ನಿರೀಕ್ಷಾ ರೈ ವಂದಿಸಿದರು. ರಿಶಾಂಕ್ ತೋಡಾರ್ ಮತ್ತು ಅಜೇಯ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X