Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ತನಿಖೆ...

ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ತನಿಖೆ ವಿಚಾರ; ಸೋಮವಾರ ಗೃಹ ಸಚಿವರಿಂದ ಸದನದಲ್ಲಿ ಉತ್ತರ: ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ15 Aug 2025 12:42 PM IST
share
ಧರ್ಮಸ್ಥಳ ಗ್ರಾಮದಲ್ಲಿ ಎಸ್‌ಐಟಿ ತನಿಖೆ ವಿಚಾರ; ಸೋಮವಾರ ಗೃಹ ಸಚಿವರಿಂದ ಸದನದಲ್ಲಿ ಉತ್ತರ: ದಿನೇಶ್ ಗುಂಡೂರಾವ್

ಮಂಗಳೂರು, ಆ. 15: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹಗಳನ್ನು ಹೂತುಹಾಕಲಿದೆ ಎಂಬ ದೂರುದಾನ ಆರೋಪಕ್ಕೆ ಸಂಬಂಧಿಸಿ ಎಸ್‌ಐಟಿ ಪಾರದರ್ಶಕವಾಗಿ, ನಿಷ್ಪಕ್ಷಪಾತವಾಗಿ ಯಾವುದೇ ಒತ್ತಡಕ್ಕೆ ಮಣಿಯದೆ ನಿಜಾಂಶವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ತನಿಖೆಯ ಕುರಿತಂತೆ ಸೋಮವಾರ ಗೃಹ ಸಚಿವರು ಸದನದಲ್ಲಿ ಉತ್ತರ ನೀಡಲಿದ್ದಾರೆ. ಆ ಸಂದರ್ಭ ಎಲ್ಲಾ ವಿಚಾರ ಹೊರಬರಲಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ನೆಹರೂ ಮೈದಾನದಲ್ಲಿ ಶುಕ್ರವಾರ 79ನೆ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ಸದನದಲ್ಲಿ ತನಿಖೆ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಮುಖ್ಯಂತ್ರಿ ಸಿದ್ಧರಾಮಯ್ಯ ಅವರೂ ಹೇಳಿಕೆ ನೀಡಬಹುದು. ಇದರಲ್ಲಿ ಮುಚ್ಚಿ ಹಾಕುವಂತದ್ದು ಏನೂ ಇಲ್ಲ. ದರ್ಶನ್, ಪ್ರಜ್ವಲ್ ರೇವಣ್ಣ ಪ್ರಕರಣಗಳೇ ಇರಲಿ, ನಿಜಾಂಶ ಹೊರಬೇಕು. ತಪ್ಪಾಗಿದ್ದರೆ ಶಿಕ್ಷೆಯಾಗಬೇಕು. ಅಮಾಯಕರಿಗೆ ತೊಂದರೆ ಆಗಬಾರದು. ಆಪಾದನೆಗೆ ತಕ್ಕುದಾಗಿ ತನಿಖೆ ನಡೆಯುತ್ತಿದೆ ಎಂದವರು ಹೇಳಿದರು.

ರಾಷ್ಟ್ರೀಯ ವಾಹಿನಿಗೆ ಸಂದರ್ಶನ ನೀಡುವ ಮೂಲಕ ದೂರುದಾರ ತನ್ನ ಗುರುತು ಪತ್ತೆಗೆ ಕಾರಣವಾಗುತ್ತಿದ್ದಾನೆ ಎಂಬ ಸುದ್ದಿಗಾರರ ಪ್ರಶ್ನೆಗೆ, ದೂರುದಾರ ಏನು ಹೇಳಿಕೆ ನೀಡಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಕಾನೂನು ಪ್ರಕಾರ ಯಾವ ಕ್ರಮ ಆಗಬೇಕು ಎಂಬ ಬಗ್ಗೆ ಪೊಲೀಸ್ ಇಲಾಖೆ ಕ್ರಮ ವಹಿಸಲಿದೆ. ಈ ವಿಚಾರ ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಯಿತು. ಆಪಾದನೆ, ಹೇಳಿಕೆ ಮತ್ತು ಅದಕ್ಕೆ ಮಾಧ್ಯಮದಲ್ಲೂ ಅದಕ್ಕೆ ಪ್ರಚಾರ ದೊರಕಿದ್ದು, ಆ ಆರೋಪಳೆಲ್ಲವೂ ಗಂಭೀರವಾದ ಆರೋಪ. ಹಾಗಾಗಿ ಇದೀಗ ಉತ್ತಮ ಅಧಿಕಾರಿಗಳ ತನಿಖೆಯಿಂದ ಯಾರಿಗೂ ಅನುಮಾನ ಇರದು. ಈಗ ಯಾರು ಏನೇ ಮಾತನಾಡಿದರೂ, ಜನರ ಮುಂದಿಡುವ ಸತ್ಯಾಂಶ ಮುಖ್ಯವಾಗುತ್ತದೆ ಎಂದು ಸಚಿವರು ಹೇಳಿದರು.

ಯಾರ್ಯಾರೋ ಏನೇನೋ ಹೇಳಿಕೆ ನೀಡುವುದಕ್ಕೆ ನಾವು ಪ್ರತಿಕ್ರಿಯೆ ನೀಡಲು ಆಗದು. ನಿಜಾಂಶ ಏನಿದೆ,ಸಾಕ್ಷ್ಯ ಏನಿದೆ ಅದರ ಪ್ರಕಾರ ಸರಕಾರ ಹಾಗೂ ಪೊಲೀಸ್ ಇಲಾಖೆ ನಡೆದುಕೊಳ್ಳಲಿದೆ.

ಯಾವುದೇ ಷಡ್ಯಂತ್ರ ಇರಬಹುದು ಎಂಬ ಆರೋಪವನ್ನೂ ಅಲ್ಲಗಳೆಯಲಾಗದು. ತನಿಖೆ ಮೂಲಕವೇ ಅದು ಹೊರಬರಬೇಕಿದೆ. ನನ್ನದು ಸೇರಿದಂತೆ ವೈಯಕ್ತಿಕವಾಗಿ ಎಲ್ಲರದ್ದೂ ಭಿನ್ನ ಅಭಿಪ್ರಾಯ ಇರಬಹುದು. ಆದರೆ ಅದು ಸಾಬೀತುಗೊಳ್ಳಬೇಕಾದರೆ, ತನಿಖೆ ಮೂಲಕವೇ ಗೊತ್ತಾಗುವುದು. ಹಾಗಾಗಿ ಎಲ್ಲಾ ವಿಚಾರದಲ್ಲೂ ತನಿಖೆ ಆಗಲಿದೆ.

ಉತ್ಖನನ ಇನ್ನು ಎಲ್ಲಿಯವರೆಗೆ ನಡೆಯಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ, ಅದು ಎಸ್‌ಐಟಿ ನಿರ್ಧರಿಸಲಿದೆ. ಕಾಡು ಪ್ರದೇಶದಲ್ಲಿ ಮಳೆ ನಡುವೆ ಅಗೆಯುವುದು ಸುಲಭದ ಕೆಲಸವಲ್ಲ. ಪೊಲೀಸರು ಜವಾಬ್ಧಾರಿತವಾಗಿ ನಡೆದುಕೊಂಡಿದ್ದಾರೆ. ಅವರಿಗೂ ತೊಂದರೆಯಾಗಿದೆ. ಅದರೂ ಅವರು ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪೊಲೀಸ್‌ನವರಿಗೆ ಯಾವುದೇ ಹಸ್ತಕ್ಷೇಪವಿಲ್ಲದೆ ಮುಕ್ತ ಅವಕಾಶ ನೀಡಲಾಗಿದೆ. ಉತ್ಖನನ ಮುಂದುವರಿಯಲಿದೇ, ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಗೃಹ ಸಚಿವರು ಸೋಮವಾರ ಸದನದಲ್ಲಿ ತಿಳಿಸಲಿದ್ದಾರೆ ಎಂದರು.

ನಾನು ಅನೇಕ ಸಂಘಟನೆಗಳು, ಅದರಲ್ಲಿ ಎಡ ಸಂಘಟನೆಗಳು ಸೇರಿ ಒತ್ತಡ ಹಾಕಿದ್ದರು ಎಂದಿರುವುದು. ಹಾಗಾಗಿ ಎಸ್‌ಐಟಿ ತನಿಖೆಗೆ ಆದೇಶಿಸಲಾಯಿತು. ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರೂ ಎಸ್‌ಐಟಿ ತನಿಖೆಯಾದರೆ ಒಳ್ಳೆಯದು ಎಂದಿದ್ದರು. ನ್ಯಾಯಾಧೀಶ ಗೋಪಾಲಗೌಡರೂ ಹೇಳಿಕೆ ನೀಡಿದ್ದರು. ನಾನು ದ.ಕ. ಜಿಲ್ಲಾ ಪೊಲೀಸರೇ ತನಿಖೆ ಮಾಡುತ್ತಾರೆ, ಎಸ್‌ಐಟಿ ಅಗತ್ಯ ಇಲ್ಲ ಎಂದು ಹೇಳಿದ್ದೆ. ಆದರೆ ಎಸ್‌ಐಟಿ ಮಾಡಿದ್ದೇ ಒಳ್ಳೆಯದಾಯಿತು. ಇಲ್ಲವಾದರೆ ಸ್ಥಳೀಯ ಪೊಲೀಸರು ಸರಿಯಾಗಿ ಮಾಡಿಲ್ಲ ಎಂಬ ಗೂಬೆ ಕೂರಿಸುವ ಕೆಲಸ ಆಗುತ್ತಿತ್ತು. ಉತ್ತಮ ಅಧಿಕಾರಿಗಳ ಮೂಲಕ ಒತ್ತಡವಿಲ್ಲದೆ ತನಿಖೆ ನಡೆಯುತ್ತಿದೆ.

ಬಿಜೆಪಿಯವರಿಗೆ ರಾಜಕೀಯ ಲಾಭ ನೋಡುವವರು. ಅವರಿಗೆ ಇಂತಹದ್ದೇ ವಿಷಯಗಳು ಬೇಕು. ಮೊದಲು 10 ದಿನ ಏನೂ ಮಾತನಾಡಿಲ್ಲ. ಈಗ ವಿಷಯಗಳು ಹೊರ ಬರುತ್ತಿರುವಾಗ ಅದನ್ನು ತಮ್ಮ ರಾಜಕೀಯ ಲಾಭಕ್ಕೆ ಹೇಗೆ ಉಪಯೋಗಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ನಮಗೆ ಅದು ಬೇಕಾಗಿಲ್ಲ. ನಮಗೆ ಸತ್ಯಾಂಶ ಹೊರಬರಬೇಕು. ಬಿಜೆಪಿಯವರದ್ದು ಇದು ಹಳೆಯ ಚಾಳಿ. ಧಾರ್ಮಿಕ ವಿಚಾರವನ್ನು ಉಪಯೋಗಿಸಿಕೊಳ್ಳುವುವುದೇ ಅವರ ಚಾಳಿ.

ಬಿಜೆಪಿ ಮತ್ತು ಸಂಘ ಪರಿವಾರ ಅಪಪ್ರಚಾರದಲ್ಲೇ ನಂಬಿಕೆ ಇರಿಸಿದವರು ಎಂದರು.

ಎಸ್‌ಐಟಿಗೆ ಬೇರೆ ಬೇರೆ ದೂರುಗಳು ದಾಖಲಾಗುತ್ತಿದ್ದು, ಅದರ ತನಿಖೆಯನ್ನು ನಡೆಸಲಿದೆಯೇ ಎಂಬ ಪ್ರಶ್ನೆಗೆ, ದೂರು ಯಾರೂ ಕೊಡಬಹುದು. ತನಿಖೆ ನಡೆಸುವ ಬಗ್ಗೆ ಎಸ್‌ಐಟಿ ನಿರ್ಧರಿಸಲಿದೆ. ದೇಶದಲ್ಲಿ ಇಷ್ಟು ದೊಡ್ಡ ಸುದ್ದಿ ಆದಾಗ ಒಳ್ಳೆಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ರಾಜ್ಯ ಸರಕಾರ ಮುಂದಾಗಿದೆ. ಅಪಪ್ರಚಾರ ಮಾಡುವವರಿಗೆ ಸಣ್ಣ ವಿಷಯ ಸಾಕು. ಸತ್ಯವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಧರ್ಮಸ್ಥಳ ಪುಣ್ಯಕ್ಷೇತ್ರದ ಹೆಸರು ಕೆಡುತ್ತಿದೆ ಎಂಬ ವಿಚಾರಕ್ಕೂ ತನಿಖೆಗೂ ಸಂಬಂಧವೇ ಇಲ್ಲ. ಮಂಜುನಾಥ ಸ್ವಾಮಿ ಕ್ಷೇತ್ರದ ಪಾವಿತ್ರ್ಯತೆ ಹಾಳಾಗಿಲ್ಲ. ಕ್ಷೇತ್ರದಲ್ಲಿ ಅಗೆದಿಲ್ಲ. ಕಾಡಿನಲ್ಲಿ ಅಗೆದಿರುವುದು. ಬಿಜೆಪಿಯವರು ಅನಗತ್ಯವಾಗಿ ತಿರುಚಿ ಉದ್ದೇಶಪೂರ್ವಕವಾಗಿ ಹೆಸರು ಹಾಳು ಮಾಡುತ್ತಿದ್ದಾರೆ. ನಿಜಾಂಶ ಹೊರಬಂದರೆ ಸಾಕು. ದೇವರ ಭಕ್ತರು ಯಾರೂ ಅಷ್ಟು ಸುಲಭವಾಗಿ ಕ್ಷೇತ್ರದ ಮೇಲಿನ ನಂಬಿಕೆ ಕಳೆದುಕೊಳ್ಳುವುದಿಲ್ಲ. ಅದಕ್ಕಾಗಿ ಈ ರೀತಿಯಾಗಿ ಪ್ರತಿಬಿಂಬಿಸುವ ಅಗತ್ಯವಿಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಸಚಿವ ದಿನೇಶ್ ಗುಂಡೂರಾವ್ ಈ ಪ್ರತಿಕ್ರಿಯೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X