Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಕ್ಷಿಣ ಕನ್ನಡದ ಸರಕಾರಿ ಶಾಲೆಗಳಿಗೆ...

ದಕ್ಷಿಣ ಕನ್ನಡದ ಸರಕಾರಿ ಶಾಲೆಗಳಿಗೆ ಇಸ್ರೇಲ್‌ನಿಂದ ಸ್ಮಾರ್ಟ್ ಬೋರ್ಡ್‌ಗಳ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ15 Jan 2026 8:27 PM IST
share
ದಕ್ಷಿಣ ಕನ್ನಡದ ಸರಕಾರಿ ಶಾಲೆಗಳಿಗೆ ಇಸ್ರೇಲ್‌ನಿಂದ ಸ್ಮಾರ್ಟ್ ಬೋರ್ಡ್‌ಗಳ ಕೊಡುಗೆ

ಮಂಗಳೂರು, ಜ.15: ಇಸ್ರೇಲ್ ಸರ್ಕಾರದ ‘ಮಾಶಾವ್’ (ಅಖಏಅ್ಖ) ಕಾರ್ಯಕ್ರಮದಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಯ್ದ ಶಾಲೆಗಳನ್ನು ಗುರುತಿಸಿ ಅವುಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ವಿತರಿಸಲಾಗುತ್ತದೆ.

ಅನಂತಾಡಿಯ ದ.ಕ.ಜಿ.ಪಂ. ಶಾಲೆಯಲ್ಲಿ ಗುರುವಾರ ಜರುಗಿದ ವಿಶೇಷ ಕಾರ್ಯಕ್ರಮದಲ್ಲಿ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಸ್ಮಾರ್ಟ್ ಬೋರ್ಡ್‌ಗಳನ್ನು ಲೋಕಾರ್ಪಣೆ ಮಾಡಿದರು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರ ವಿಶೇಷ ಆಸಕ್ತಿ ಹಾಗೂ ಸತತ ಪ್ರಯತ್ನದ ಫಲವಾಗಿ ಇಸ್ರೇಲ್ ಸರಕಾರದ ಈ ಸೌಲಭ್ಯ ದೊರೆಯುವಂತಾಗಿದೆ.

ಸಂಸದರಾಗಿ ಅಧಿಕಾರ ಸ್ವೀಕರಿಸಿದ ಆರಂಭಿಕ ದಿನಗಳಲ್ಲೇ ಬ್ರಿಜೇಶ್ ಚೌಟ ಅವರು ಇಸ್ರೇಲ್ ರಾಯಭಾರಿ ಕಚೇರಿಯೊಂದಿಗೆ ನಿರಂತರ ಸಂಪರ್ಕ ಸಾಧಿಸಿದ್ದರು. ಕೃಷಿ ಹಾಗೂ ಶಿಕ್ಷಣದಲ್ಲಿ ವಿಶ್ವ ಮಟ್ಟದ ತಂತ್ರಜ್ಞಾನ ಹೊಂದಿರುವ ಇಸ್ರೇಲ್‌ನ ಸಹಕಾರವನ್ನು ಜಿಲ್ಲೆಗೆ ತರುವ ಅವರ ಪ್ರಯತ್ನದ ಮೊದಲ ಭಾಗವಾಗಿ ಈ ಯೋಜನೆ ಅನುಷ್ಠಾನಗೊಂಡಿದೆ.

ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಬಳಿಕ ಬಳಿಕ ಮಾತನಾಡಿದ ಇಸ್ರೇಲ್ ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರು ದಕ್ಷಿಣ ಕನ್ನಡ ಜಿಲ್ಲೆಯೊಂದಿಗೆ ಕೈಜೋಡಿಸುತ್ತಿರುವುದು ಸಂತಸದ ವಿಷಯ. ಈ ಸ್ಮಾರ್ಟ್ ಬೋರ್ಡ್‌ಗಳ ಮೂಲಕ ಡಿಜಿಟಲ್ ಶಿಕ್ಷಣಕ್ಕೆ ಹೊಸ ವೇಗ ಸಿಗಲಿದೆ. ವ್ಯಾಪಾರ ಹಾಗೂ ಸಾಂಸ್ಕೃತಿಕವಾಗಿಯೂ ಇಸ್ರೇಲ್ ಮತ್ತು ದಕ್ಷಿಣ ಕನ್ನಡದ ನಡುವಿನ ಸಂಬಂಧ ಮುಂದಿನ ದಿನಗಳಲ್ಲಿ ಇನ್ನಷ್ಟು ವೃದ್ಧಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆ ಬಳಿಕ ಮಾತನಾಡಿದ ಸಂಸದ ಚೌಟ, ಭಾರತ ಮತ್ತು ಇಸ್ರೇಲ್ ರಾಷ್ಟ್ರಗಳ ನಡುವೆ ಸುದೀರ್ಘವಾದ ಸ್ನೇಹ ಸಂಬಂಧವಿದೆ. ವಿಶೇಷವಾಗಿ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ನಾವು ಉತ್ತಮ ಸಹಯೋಗ ಹೊಂದಿದ್ದೇವೆ. ನಾನು ಸಂಸದನಾಗಿ ಅಧಿಕಾರ ವಹಿಸಿಕೊಂಡ ಆರಂಭದ ದಿನಗಳಲ್ಲೇ ನಮ್ಮ ಜಿಲ್ಲೆಯ ಅಭಿವೃದ್ಧಿಗಾಗಿ ಈ ಜಾಗತಿಕ ಸಹಯೋಗವನ್ನು ಸ್ಥಳೀಯ ಮಟ್ಟಕ್ಕೆ ತರಬೇಕು ಎಂಬ ಗುರಿ ಹೊಂದಿದ್ದೆ. ಕೃಷಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಇಸ್ರೇಲ್‌ನ ಅತ್ಯಾಧುನಿಕ ತಂತ್ರಜ್ಞಾನವನ್ನು ನಮ್ಮ ಜಿಲ್ಲೆಗೆ ಪರಿಚಯಿಸುವ ನಿಟ್ಟಿನಲ್ಲಿ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಅದರ ಮೊದಲ ಹೆಜ್ಜೆಯಾಗಿ ಇಂದು ಇಸ್ರೇಲ್ ಸರ್ಕಾರದ ಕಾರ್ಯಕ್ರಮದ ಮೂಲಕ ಜಿಲ್ಲೆಯ ನಾಲ್ಕು ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಹಸ್ತಾಂತರಿಸಿದ್ದೇವೆ. ಶಿಕ್ಷಣದಲ್ಲಿ ತಂತ್ರಜ್ಞಾನದ ಅಳವಡಿಕೆಯು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಜಾಗತಿಕ ಮಟ್ಟಕ್ಕೆ ಏರಿಸಲಿದೆ ಎಂದು ಹೇಳಿದರು.

ಈ ಮಹತ್ವದ ಸಹಕಾರಕ್ಕಾಗಿ ಭಾರತದ ಇಸ್ರೇಲ್ ರಾಯಭಾರಿ ರೆವೆನ್ ಅಜರ್ ಮತ್ತು ಕಾನ್ಸುಲ್ ಜನರಲ್ ಓರ್ಲಿ ವೈಟ್ಜ್‌ಮನ್ ಅವರಿಗೆ ಜಿಲ್ಲೆಯ ಸಮಸ್ತ ಜನರ ಪರವಾಗಿ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ವ್ಯಾಪಾರ-ವಹಿವಾಟು, ಕೃಷಿ ಕ್ಷೇತ್ರ ಸೇರಿದಂತೆ ಇಸ್ರೇಲ್ ಮಾದರಿಯ ನೂತನ ತಂತ್ರಜ್ಞಾನ ಗಳನ್ನು ಜಿಲ್ಲೆಗೆ ತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನ ಮುಂದುವರಿಯಲಿದೆ ಎಂದರು.

ಈ ಯೋಜನೆಯಡಿ ಒಟ್ಟು ನಾಲ್ಕು ಶಾಲೆಗಳಿಗೆ ತಲಾ 3.5 ಲಕ್ಷ ರೂ. ಅನುದಾನದಲ್ಲಿ ಸ್ಮಾರ್ಟ್ ಬೋರ್ಡ್ ನೀಡಲಾ ಗುತ್ತಿದೆ. ಅನಂತಾಡಿ ಬಂಟ್ರಿಂಜದ ದ.ಕ.ಜಿ.ಪಂ. ಪ್ರಾಥಮಿಕ ಶಾಲೆ, ವಿಟ್ಲದ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಯ ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ಶಿಕ್ಷಣ ಸಂಸ್ಥೆಗಳು, ಮಣ್ಣಗುಡ್ಡೆಯ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್‌ಗಳನ್ನು ಒದಗಿಸಲಾಗಿದೆ.

ಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ , ಅನಂತಾಡಿಯ ದ.ಕ.ಜಿ.ಪಂ. ಶಾಲೆ ಮುಖ್ಯೋಪಾಧ್ಯಾಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.











Tags

Smart boarddonatedIsraelgovernmentschools
share
ವಾರ್ತಾಭಾರತಿ
ವಾರ್ತಾಭಾರತಿ
Next Story
X