Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: 9/11 ಅರ್ಜಿಗಳನ್ನು ಕಾಲ...

ಮಂಗಳೂರು: 9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ಸ್ಪೀಕರ್ ಯು.ಟಿ ಖಾದರ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ2 Dec 2025 7:33 PM IST
share
ಮಂಗಳೂರು: 9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ಸ್ಪೀಕರ್ ಯು.ಟಿ ಖಾದರ್ ಸೂಚನೆ

ಮಂಗಳೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಳ್ಳಾಲ ತಾಲೂಕಿನ 9/11 ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು.

9/11 ದಾಖಲೆಗಳಿಗೆ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ದೀರ್ಘಕಾಲದಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಹಾಗೂ ಕಚೇರಿಯಿಂದ ಕಚೇರಿಗೆ ಇದಕ್ಕಾಗಿ ಅಲೆದಾಡುವ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬರುತ್ತಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಏಕನಿವೇಶನಕ್ಕೆ ಸಂಪರ್ಕ ರಸ್ತೆಯ ಬಗ್ಗೆ ಸ್ಪಷ್ಟವಾದ ತಿಳುವಳಿಕೆ ಇರಬೇಕು. ಸರಕಾರಿ ರಸ್ತೆ ಅಥವಾ ಖಾಸಗಿ ರಸ್ತೆಗಳ ಬಗ್ಗೆ ಸರಿಯಾದ ಮಾಹಿತಿಯನ್ನು ನಮೂದಿಸಬೇಕು ಎಂದು ಅವರು ಸೂಚಿಸಿದರು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ದೀಪಾ ಚೋಳನ್ ಮಾತನಾಡಿ, ಏಕನಿವೇಶನ ಅರ್ಜಿಗಳಲ್ಲಿ ರಸ್ತೆ ಬಗ್ಗೆ ಅಫಿದಾವಿತ್ ಪಡೆದು 9/11 ನೀಡುವ ಬಗ್ಗೆ ಶೀಘ್ರದಲ್ಲಿ ಸುತ್ತೋಲೆ ಹೊರಡಿಸಲಾಗುವುದು. 9/11 ಅರ್ಜಿಗಾಗಿ ಪದೇ ಪದೇ ವಿವಿಧ ಕಚೇರಿಗೆ ತೆರಳುವ ಬದಲು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಒಂದೇ ಬಾರಿ ಅನುಮೋದನೆ ನೀಡಿದ ಬಳಿಕ ಸಂಬಂಧಿಸಿದ ಗ್ರಾಮ ಪಂಚಾಯತ್‌ಗಳಿಗೆ ಕಳುಹಿಸಿಕೊಡಲಾಗುವುದು. ಇದರಿಂದ 2 ನೇ ಬಾರಿ ಮೂಡಾ ಅಥವಾ ನಗರ ಯೋಜನಾ ಸಮಿತಿಗಳಿಗೆ ಬರುವ ಅಗತ್ಯವಿರುವುದಿಲ್ಲ ಎಂದು ಅವರು ತಿಳಿಸಿದರು.

ರಸ್ತೆ ಅಗಲೀಕರಣ ಉದ್ದೇಶವಿದ್ದರೆ ಅದನ್ನು 9/11 ನಲ್ಲಿ ನಮೂದಿಸಲಾಗುವುದು. ಗುಡ್ಡಗಾಡು ಪ್ರದೇಶದಲ್ಲಿ 3.65 ಮೀ. ಅಗಲದ ರಸ್ತೆ ಅವಕಾಶವಿದ್ದು, ಇದನ್ನು ಕರಾವಳಿ ಮತ್ತು ಮಲೆನಾಡಿಗೆ ಅನ್ವಯಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಇನ್ನು ಮುಂದೆ ಪ್ರತಿ ತಿಂಗಳು ಒಂದು ತಾಲೂಕಿನಲ್ಲಿ ಅದಾಲತ್ ನಡೆಸಿ ಏಕ ನಿವೇಶನ ಮತ್ತು 9/11 ಸಾರ್ವಜನಿಕ ಅರ್ಜಿಯನ್ನು ಇತ್ಯರ್ಥ ಪಡಿಸಲಾಗುವುದು ಎಂದು ತಿಳಿಸಿದರು.

9/11 ನಿಯಮಗಳಲ್ಲಿ ಗೊಂದಲ ತಪ್ಪಿಸಲು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆಯೊಂದಿಗೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಲಾಗುವುದು. ಸ್ಥಳೀಯ ಮಟ್ಟದ ಅಧಿಕಾರಿಗಳು ತ್ವರಿತವಾಗಿ 9/11 ಹಾಗೂ ಏಕನಿವೇಶನ ಅನುಮೋದನೆ ನೀಡಲು ಒಂದು ವಾರದಲ್ಲಿ ಸುತ್ತೋಲೆ ಹೊರಡಿಸಲಾಗುವುದು ಎಂದು ದೀಪಾ ಚೋಳನ್ ಹೇಳಿದರು.

ಸ್ಥಳೀಯ ಅಧಿಕಾರಿಗಳಿಗೆ 9/11 ನಿಯಮಗಳ ಅರ್ಥೈಸುವಿಕೆಯಲ್ಲಿ ಉಂಟಾದ ಗೊಂದಲದಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದು ಕಂಡು ಬಂದಿದೆ. 94 ಸಿ ಅಡಿ ಮಂಜೂರಾದ ನಿವೇಶನಗಳಲ್ಲಿ ಮನೆ ಕಟ್ಟಲು 9/11 ದಾಖಲೆಗಳನ್ನು 15 ದಿನದೊಳಗೆ ನೀಡಲು ಆನ್‌ಲೈನ್‌ನಲ್ಲಿ ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ನಾಗರಿಕರು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಈ ಬಗ್ಗೆ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರಿಗೆ ಸೂಕ್ತ ಮಾಹಿತಿಯನ್ನು ಒದಗಿಸಬೇಕು. ಸಾರ್ವಜನಿಕರಿಗೆ ಈ ಸೌಲಭ್ಯದ ಮಾಹಿತಿ ದೊರೆಯುವಂತಾಗಬೇಕು. ವಿನಾ ಕಾರಣ ಜನಸಾಮಾನ್ಯರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು. ಅಧಿಕಾರಿಗಳು ಸಾರ್ವಜನಿಕರಿಗೆ ಅನುಕೂಲ ಆಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಬೇಕು. 9/11 ಅರ್ಜಿಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಗೊಳಿಸಬೇಕು. ಸರಕಾರದ ಮಾರ್ಗಸೂಚಿಗಳು ಸರಿ ಇದ್ದರೂ ಅದನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಲ್ಲಿ ವಿಫಲವಾಗುತ್ತಿರುವುದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಈ ರೀತಿ ಸಮಸ್ಯೆಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಯು.ಟಿ.ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಾರ್ವಜನಿಕರಿಂದ ದೂರುಗಳ ಸರಮಾಲೆ

9/11ಗೆ ಸಂಬಂಧಿಸಿ ಜನಸಾಮಾನ್ಯರು ಪಡುತ್ತಿರುವ ತೊಂದರೆಗಳ ಬಗ್ಗೆ ಸಭೆಯಲ್ಲಿ ವಿವಿಧ ರೀತಿಯ ದೂರುಗಳು ವ್ಯಕ್ತವಾದವು. ನಾಲ್ಕೈದು ದಶಕಗಳಿಂದ ಒಂದೆಡೆ ನಿವೇಶನ ಹೊಂದಿದ್ದರೂ ಮನೆ ಕಟ್ಟಲು ಹೋದಾಗ, ಏಕನಿವೇಶನ, ರಸ್ತೆಗಾಗಿ ಹಲವು ತಿಂಗಳ ಕಾಲ ಅಲೆದಾಡಿಸಲಾಗುತ್ತದೆ. ಹಿಂದೆ ಭೂ ಪರಿವರ್ತನೆ ಆಗಿ ಮನೆ ಕಟ್ಟಿದ್ದರೂ ಮತ್ತೆ ಇರುವ ಸಣ್ಣ ಪುಟ್ಟ ನಿವೇಶನದಾರರೂ ರಸ್ತೆಗಾಗಿ ಜಾಗ ಬಿಡುವುದಾದರೂ ಹೇಗೆ ಎಂಬ ಬಗ್ಗೆಯೂ ಸಭೆಯಲ್ಲಿ ಸಾರ್ವಜನಿಕರಿಂದ ಅಸಮಾಧಾನದ ಮಾತುಗಳು ವ್ಯಕ್ತವಾಯಿತು.

ಕಾರ್ಯಾಗಾರದಲ್ಲಿ ಮೂಡ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿ.ಪಂ. ಸಿಇಒ ನರ್ವಾಡೆ ವಿನಾಯಕ್ ಕಾರ್ಬಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಮೂಡಾ ವ್ಯಾಪ್ತಿಯ ಗ್ರಾ.ಪಂ. ಅಧ್ಯಕ್ಷರು, ಪಿಡಿಓ, ತಾಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಉಪಸ್ಥಿತರಿದ್ದರು.

ಭವಿಷ್ಯದ ಹಿತ ದೃಷ್ಟಿಯಿಂದ ಬಡಾವಣೆ(ಲೇಔಟ್)ಗಳಲ್ಲಿ ಆಟದ ಮೈದಾನ, ಉದ್ಯಾನವನ ಹಾಗೂ ನಾಗರಿಕ ಸೌಲಭ್ಯದ ನಿವೇಶನಗಳು ಅಗತ್ಯವಾಗಿದೆ. ಲೇಔಟ್ ಮಾಡುವವರು ಕೇವಲ ದುಡ್ಡು ಮಾಡುವುದು ಮಾತ್ರವಲ್ಲ. ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಅವೈಜ್ಞಾನಿಕ ಕಟ್ಟಡ ನಿರ್ಮಾಣದಿಂದ ಸಮಸ್ಯೆಗಳು ಹೆಚ್ಚುತ್ತಿದೆ. ನಾಗರಿಕರ ಉತ್ತಮ ಜೀವನಕ್ಕಾಗಿ ನಿಯಮಗಳನ್ನು ತರಲಾಗುತ್ತದೆ. ಆದರೆ ಇದರ ಅನುಷ್ಟಾನದಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುವುದನ್ನು ಸಹಿಸುವುದಿಲ್ಲ ಎಂದು ಯು.ಟಿ.ಖಾದರ್ ಸಭೆಯಲ್ಲಿ ಸ್ಪಷ್ಟಪಡಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X