ಉಳ್ಳಾಲ ದರ್ಗಾದಲ್ಲಿ ಸ್ಪೀಕರ್ ಯುಟಿ ಖಾದರ್ ಗೆ ಸನ್ಮಾನ

ಉಳ್ಳಾಲ: ಪವಿತ್ರ ಹಜ್ ಯಾತ್ರೆ ತೆರಳಲಿರುವ ಸ್ಪೀಕರ್ ಯುಟಿ ಖಾದರ್ ಅವರಿಗೆ ಉಳ್ಳಾಲ ಕೇಂದ್ರ ಜುಮ್ಮಾ ಮಸೀದಿ ಹಾಗೂ ದರ್ಗಾ ಸಮಿತಿ ವತಿಯಿಂದ ಶುಕ್ರವಾರ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸನ್ಮಾನಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ಪೀಕರ್ ಯುಟಿ ಖಾದರ್ ಅವರು , ಹಜ್ ಗೆ ತೆರಳಬೇಕು ಎಂಬ ಉದ್ದೇಶ ಎಲ್ಲರಲ್ಲಿ ಇರುತ್ತದೆ. ನಾನು ನನ್ನ ತಂದೆ ಶಾಸಕರಾಗಿದ್ದ ಸಂದರ್ಭದಲ್ಲಿ ಉಳ್ಳಾಲ ದರ್ಗಾಕ್ಕೆ ಬರುತ್ತಿದ್ದೆ. ನನಗೆ ಇಷ್ಟು ದೊಡ್ಡ ಹುದ್ದೆ ಸಿಗಲು ಒಂದೆಡೆ ದರ್ಗಾ ಕೂಡ ಕಾರಣ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಜ್ ಗೆ ತೆರಳಲಿರುವ ಸ್ಪೀಕರ್ ಯುಟಿ ಖಾದರ್ ಅವರ ಸಹೋದರ ಅಲೈಡ್ ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷ ಯುಟಿ ಇಫ್ತಿಕಾರ್ ಅವರನ್ನು ದರ್ಗಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕೇಂದ್ರ ಜುಮ್ಮಾ ಮಸೀದಿ ಖತೀಬ್ ಹಾಪಿಳ್ ಅಬ್ದುಲ್ ಮಜೀದ್ ಫಾಳಿಲಿ ಕಾಮಿಲ್ ಸಖಾಫಿ ದುಆ ನೆರವೇರಿಸಿದರು
ಈ ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕಾರ್ಯದರ್ಶಿ ಮುಸ್ತಫಾ ಮದನಿನಗರ, ಇಸ್ಹಾಕ್ ಮೇಲಂಗಡಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ, ಚಾರಿಟೇಬಲ್ ಟ್ರಸ್ಟ್ ಕಾರ್ಯದರ್ಶಿ ಇಮ್ತಿಯಾಝ್ ಪಿಲಾರ್, ಉಪಾಧ್ಯಕ್ಷ ಜಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.





