ದೀಪಾವಳಿ ಪ್ರಯುಕ್ತ ಹುಬ್ಬಳ್ಳಿ-ಬೆಂಗಳೂರು -ಮಂಗಳೂರು ನಡುವೆ ವಿಶೇಷ ರೈಲು

ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಾಟ ನಡೆಯಲಿದೆ.
ಅ.17ರಂದು ರೈಲು ಸಂಖ್ಯೆ 07353 ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4:00ಕ್ಕೆ ಹೊರಟು ಅದೇ ದಿನ ರಾತ್ರಿ 11:25ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು ನಿಲ್ದಾಣದಿಂದ ರಾತ್ರಿ 11:55ಕ್ಕೆ ಹೊರಟು ಮರುದಿನ ಅ.18ರಂದು ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಅ.18ರಂದು ರೈಲು ಸಂಖ್ಯೆ 07354 ಮಂಗಳೂರು ಜಂಕ್ಷನ್-ಯಶವಂತಪುರ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2:35ಕ್ಕೆ ಹೊರಟು ರಾತ್ರಿ 11:25ಕ್ಕೆ ಯಶವಂತಪುರ ಜಂಕ್ಷನ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್ ಹಾಗೂ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ನಡುವೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಕುಣಿಗಲ್, ಯಶವಂತಪುರ ಜಂಕ್ಷನ್, ತುಮಕೂರು, ಅರಸೀಕೆರೆ, ಬಿರೂರು, ದಾವಣಗೆರೆ, ಹರಿಹರ,ಶ್ರೀ ಮಹಾದೇವಪ್ಪ ಮಲ್ಲಾರ ಹಾವೇರಿ ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಅ.19ರಂದು ರೈಲು ಸಂಖ್ಯೆ 06229 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ರೈಲು ರಾತ್ರಿ 12:15ಕ್ಕೆ ಹೊರಟು ಅದೇ ದಿನ ಬೆಳಗ್ಗೆ 11:15ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಅದೇ ದಿನ ರೈಲು ಸಂಖ್ಯೆ 06230 ಮಂಗಳೂರು ಜಂಕ್ಷನ್-ಬೆಂಗಳೂರು ಕಂಟೋನ್ಮೆಂಟ್ ವಿಶೇಷ ರೈಲು ಮಂಗಳೂರು ಜಂಕ್ಷನ್ ನಿಂದ ಮಧ್ಯಾಹ್ನ 2:35ಕ್ಕೆ ಹೊರಟು ರಾತ್ರಿ 12:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್ ಹಾಗೂ ಬೆಂಗಳೂರು ಕಂಟೋನ್ಮೆಂಟ್ ನಡುವೆ ಬಂಟ್ವಾಳ, ಕಬಕ ಪುತ್ತೂರು, ಸುಬ್ರಹ್ಮಣ್ಯ ರೋಡ್, ಸಕಲೇಶಪುರ, ಹಾಸನ ಜಂಕ್ಷನ್, ಚನ್ನರಾಯಪಟ್ಟಣ, ಕುಣಿಗಲ್, ಯಶವಂತಪುರ ಜಂಕ್ಷನ್, ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ರೈಲು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಾಗಿದೆ.
ಈ ರೈಲಿನಲ್ಲಿ 4 ಜನರಲ್ ಕೋಚ್,10 ಸ್ಲೀಪರ್ ಕ್ಲಾಸ್, 2 ತೃತೀಯ ದರ್ಜೆಯ ಎಸಿ, 1 ದ್ವಿತೀಯ ದರ್ಜೆಯ ಎಸಿ, 1 ಪ್ರಥಮ ದರ್ಜೆ ಕ್ಯಾಬಿನ್ ಎಸಿ ಕೋಚುಗಳು ಇರಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.







