Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ...

ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ: ನ್ಯಾಯಾಧೀಶ ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ28 July 2025 8:28 PM IST
share
ಖಾಯಂ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳ ತ್ವರಿತ ವಿಲೇವಾರಿ: ನ್ಯಾಯಾಧೀಶ ಜೈಶಂಕರ್

ಮಂಗಳೂರು: ನಗರದಲ್ಲಿ ಕಾರ್ಯಾಚರಿಸುತ್ತಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ವಿವಿಧ ಪ್ರಕರಣಗಳನ್ನು ಅತ್ಯಂತ ಸರಳ ಮತ್ತು ಸುಲಲಿತವಾಗಿ ಇತ್ಯರ್ಥಪಡಿಸಲಾಗುತ್ತದೆ ಎಂದು ಜನತಾ ನ್ಯಾಯಾಲಯದ ಅಧ್ಯಕ್ಷ ಹಾಗೂ ನ್ಯಾಯಾಧೀಶ ಜೈಶಂಕರ್ ತಿಳಿಸಿದರು.

ಜನತಾ ನ್ಯಾಯಾಲಯ ಕಚೇರಿಯಲ್ಲಿ ಸೋಮವಾರ ನಡೆದ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಖಾಯಂ ಜನತಾ ನ್ಯಾಯಾಲಯದಲ್ಲಿ ನ್ಯಾಯಾಧೀಶರು ಮತ್ತು ಇಬ್ಬರು ಸದಸ್ಯರಿದ್ದಾರೆ. ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಪಡಿಸಲಾಗುತ್ತಿದೆ. ಪ್ರಕರಣ ದಾಖಲು ಪ್ರಕ್ರಿಯೆ ಅತ್ಯಂತ ಸರಳವಾಗಿದ್ದು ಅತಿ ಕಡಿಮೆ ಅವಧಿಯಲ್ಲಿ ಪ್ರಕರಣವನ್ನು ಇತ್ಯರ್ಥ ಪಡಿಸಲಾಗುತ್ತಿದೆ ಎಂದು ನ್ಯಾಯಾಧೀಶ ಜೈಶಂಕರ್ ತಿಳಿಸಿದರು.

ಖಾಯಂ ಜನತಾ ನ್ಯಾಯಾಲಯವು ಪರ್ಯಾಯ ಪರಿಹಾರ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಪೂರ್ಣ ಪ್ರಮಾಣದ ನ್ಯಾಯಾಧೀಶರೇ ಸೇವೆಯಲ್ಲಿರುತ್ತಾರೆ. ಸರಳ ದಾಖಲೆ ಪ್ರಕ್ರಿಯೆ ಮತ್ತು ಅಗತ್ಯ ವಿದ್ದರೆ ಮಾತ್ರ ಸಾಕ್ಷಿ ವಿಚಾರಣೆ ನಡೆಯಲಿದೆ. ಯಾವುದೇ ನ್ಯಾಯಾಲಯ ಶುಲ್ಕ ಇರುವುದಿಲ್ಲ ಎಂದು ತಿಳಿಸಿದರು.

ಸಾರಿಗೆ ಸೇವೆ, ಅಂಚೆ, ವಿದ್ಯುತ್, ಬ್ಯಾಂಕಿಂಗ್ ಮತ್ತು ಹಣಕಾಸು ಸಂಸ್ಥೆ, ಶಿಕ್ಷಣ ಸಂಸ್ಥೆ, ರಿಯಲ್ ಎಸ್ಟೇಟ್, ವಿಮೆ, ವೈದ್ಯಕೀಯ ನಿರ್ಲಕ್ಷ್ಯತೆ ಮತ್ತಿತರ ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗುವುದು. ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳ ವಿವಿಧ ಸಾಲ ಸಂಬಂಧಿತ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳ ಬಹುದಾಗಿದೆ. ಇಲ್ಲಿನ ಆದೇಶವು ಅಂತಿಮವಾಗಿದ್ದು ಮೇಲ್ಮನವಿಗೆ ಅವಕಾಶವಿಲ್ಲ. 1 ಕೋ.ರೂ.ವರೆಗಿನ ಮೊತ್ತದ ಪ್ರಕರಣಗಳನ್ನು ಇಲ್ಲಿ ಇತ್ಯರ್ಥಗೊಳಿಸಲಾಗುತ್ತದೆ. ಅತಿ ಸಣ್ಣ ಮೊತ್ತದ ಪ್ರಕರಣಗಳನ್ನು ಕೂಡಾ ಇಲ್ಲಿ ದಾಖಲಿಸಬಹುದು ಎಂದು ನ್ಯಾಯಾಧೀಶ ಜೈಶಂಕರ್ ತಿಳಿಸಿದರು.

ಖಾಯಂ ಜನತಾ ನ್ಯಾಯಾಲಯವು ದ.ಕ. ಜಿಲ್ಲಾ ನ್ಯಾಯಾಲಯ ಸಂಕೀರ್ಣದ 6ನೇ ಮಹಡಿಯಲ್ಲಿ ಕಾರ್ಯಾಚರಿಸುತ್ತಿದೆ. ಮಂಗಳೂರು, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ವ್ಯಾಪ್ತಿಯನ್ನು ಹೊಂದಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಜೈಬುನ್ನೀಸಾ, ಖಾಯಂ ಜನತಾ ನ್ಯಾಯಾಲಯದ ಸದಸ್ಯರಾದ ಫಝಲ್ ರಹೀಂ, ಲಾವಣ್ಯ ರೈ ಹೆಗ್ಡೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X