ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ಸ್ಟ್ಯಾನಿ ಜಿ.ತಾವ್ರೋ ಅಧಿಕಾರ ಸ್ವೀಕಾರ

ಮಂಗಳೂರು, ನ.25 : ದ.ಕ.ಜಿಲ್ಲಾ ಕಾಂಗ್ರೆಸ್ ಶಿಕ್ಷಕರ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಸ್ಟ್ಯಾನಿ ಜಿ.ತಾವ್ರೋ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರು, ಶಿಕ್ಷಕರ ಬೇಡಿಕೆಗಳಿಗೆ ಕಾಂಗ್ರೆಸ್ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ. ಸಚಿವರಾದ ಮಧುಬಂಗಾರಪ್ಪ, ಡಾ.ಎಂ.ಸಿ.ಸುಧಾಕರ್ ಅವರು ಶಿಕ್ಷಣ ಕ್ಷೇತ್ರದಲ್ಲಿ ಹಲವು ಸಧಾರಣೆಗಳನ್ನು ಜಾರಿಗೆ ತಂದಿದ್ದಾರೆ. ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ತಳ ಮಟ್ಟದಿಂದ ಸಂಪರ್ಕ ಹೊಂದಿರುವ ನಿವೃತ್ತ ಶಿಕ್ಷಕರನ್ನು ಗುರುತಿಸಿ ಸದ್ಬಳಕೆ ಮಾಡಿಕೊಂಡು ಪಕ್ಷ ಸಂಘಟನೆ ತೊಡಗಿಸಿಕೊಳ್ಳಬೇಕು. ಆ ಮೂಲಕ ಶಿಕ್ಷಕರ ಪರವಾಗಿ ಕೆಲಸ ನಿರ್ವಹಿಸಬೇಕು ಎಂದು ಹೇಳಿದರು.
ವಿಧಾನ ಪರಿಷತ್ ಶಾಸಕ ಐವನ್ ಡಿ ಸೋಜ ಮಾತನಾಡಿ, ಸ್ಟ್ಯಾನಿ ಅವರು ಶಿಕ್ಷಕರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದು, ಶಿಕ್ಷರ ಧ್ವನಿಯಾಗಿ ಕೆಲಸ ಮಾಡಿದ್ದಾರೆ. ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಸರಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭ ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಎಂ.ಎಸ್.ಮುಹಮ್ಮದ್, ಜಿಲ್ಲಾ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಎಸ್.ಅಪ್ಪಿ, ನೀರಜ್ ಚಂದ್ರಪಾಲ್, ಶಬೀರ್ ಸಿದ್ದಕಟ್ಟೆ, ವಿಕಾಸ್ ಶೆಟ್ಟಿ, ಸಬಿತಾ ಮಿಸ್ಕಿತ್ ಮತ್ತಿತರರು ಉಪಸ್ಥಿತರಿದ್ದರು. ಉದಯ ಶಂಕರ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.







