Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈಡಿ ದಾಳಿಯಿಂದ ರಾಜ್ಯ ಸರಕಾರದ ನಿಜ ಬಣ್ಣ...

ಈಡಿ ದಾಳಿಯಿಂದ ರಾಜ್ಯ ಸರಕಾರದ ನಿಜ ಬಣ್ಣ ಬಯಲು: ಸಂಸದ ಕ್ಯಾ. ಬ್ರಿಜೇಶ್ ಚೌಟ

ವಾರ್ತಾಭಾರತಿವಾರ್ತಾಭಾರತಿ20 Oct 2024 12:17 AM IST
share
ಈಡಿ ದಾಳಿಯಿಂದ ರಾಜ್ಯ ಸರಕಾರದ ನಿಜ ಬಣ್ಣ ಬಯಲು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮೈಸೂರಿನ ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ(ಈಡಿ) ನಡೆಸಿರುವ ದಾಳಿಯಿಂದ ಕಾಂಗ್ರೆಸ್ ನೇತೃತ್ವದ ರಾಜ್ಯದ ಭ್ರಷ್ಟ ಸರ್ಕಾರದ ನಿಜ ಬಣ್ಣ ಬಯಲಾಗಿದ್ದು, ಈ ಮುಖ್ಯ ಮಂತ್ರಿ ಸಿದ್ದರಾಮಯ್ಯನವರ ಸರಕಾರವನ್ನು ಕಟಕಟೆಗೆ ತಂದು ನಿಲ್ಲಿಸುವ ಕಾಲ ಹತ್ತಿರವಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಹಲವೆಡೆ ಈಡಿ ನಡೆಸಿರುವ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ಈ ಮುಡಾ ನಿವೇಶನ ಹಂಚಿಕೆ ಭೂಹಗರಣ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ರಾಜ್ಯ ಸರಕಾರದ ಅಧೀನದಲ್ಲಿರುವ ಯಾವುದೇ ತನಿಖಾ ಸಂಸ್ಥೆಯು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ. ಆ ಮೂಲಕ ತನ್ನ ಉತ್ತರದಾಯಿತ್ವವನ್ನು ಮರೆಮಾಚಿ ರಾಜ್ಯದ ಜನತೆಯನ್ನು ಹೇಗೆ ದಾರಿ ತಪ್ಪಿಸುತ್ತಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಇದೀಗ ಈ ಪ್ರಕರಣದಲ್ಲಿ ಈ.ಡಿ. ಎಂಟ್ರಿಯಾಗಿರುವ ಕಾರಣ ಸತ್ಯಾಂಶ ಶೀಘ್ರ ಹೊರಬರಲಿದೆ ಎಂದು ಹೇಳಿದ್ದಾರೆ.

ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ, ಎಫ್‌ಐಆರ್ ದಾಖಲಾದ ಬಳಿಕ ನೈತಿಕತೆಯ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಬೇಕಾಗಿದ್ದ ಸಿಎಂ ಸಿದ್ದರಾಮಯ್ಯನವರು ಕುರ್ಚಿ ಉಳಿಸಿಕೊಳ್ಳಲು ಇಷ್ಟು ದಿನ ತಮ್ಮ ವಿರುದ್ಧದ ಎಲ್ಲ ಗಂಭೀರ ಆರೋಪಗಳಿಂದ ನುಣುಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ ಎಮದು ಚೌಟ ಆರೋಪಿಸಿದ್ದಾರೆ.

ಕಾಂಗ್ರೆಸ್ ಪ್ರತಿ ಸಲ ಯಾವುದೇ ತನಿಖೆ ಅಥವಾ ದಾಳಿ ನಡೆದಾಗ ಅದನ್ನು ರಾಜಕೀಯ ಪ್ರೇರಿತ ಎಂಬುದಾಗಿ ಹೇಳಿ ಸತ್ಯ ಮರೆಮಾಚುವುದು ಒಂದು ಚಾಳಿಯಾಗಿದೆ. ಎಲ್ಲ ಹಗರಣಗಳಲ್ಲಿಯೂ ಕಾಂಗ್ರೆಸ್ ಪಕ್ಷವು ಇದೇ ರೀತಿಯ ತಂತ್ರಗಾರಿಕೆ ಮಾಡಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.

ಮುಡಾದಲ್ಲಿ ನಡೆದಿರುವ ಬರೋಬ್ಬರಿ 5000 ಕೋಟಿ ರೂ. ಅವ್ಯವಹಾರ ಸಣ್ಣ ವಿಚಾರವಲ್ಲ. ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಉಚಿತ ಗ್ಯಾರಂಟಿ ಕೊಡುಗೆಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದ್ದು, ಇದನ್ನು ವಸೂಲಿ ಮಾಡಿದರೆ ರಾಜ್ಯದ ಪಾಲಿಗೆ ಎಲ್ಲ ಸಮಸ್ಯೆಗಳಿಗೂ ಪರಿಹಾರವಾಗಬಹುದು. ಕರ್ನಾಟಕವನ್ನು ಲೂಟಿ ಮಾಡಿರುವ ತಪ್ಪಿತಸ್ಥರನ್ನು ಕಟಕಟೆಗೆ ತಂದು ನಿಲ್ಲಿಸುವವರೆಗೆ ಬಿಜೆಪಿ ಹೋರಾಟ ನಿಲ್ಲುವುದಿಲ್ಲ ಎಂದು ಸಂಸದರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X