ಸುಳ್ಯ: ವಿದ್ಯಾರ್ಥಿ ಆತ್ಮಹತ್ಯೆ

ಸುಳ್ಯ: ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಕೇರ್ಪಳದ ಬಾಡಿಗೆ ಮನೆಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಸುಳ್ಯದ ಕೇರ್ಪಳದ ಬಾಡಿಗೆ ಮನೆಯೊಂದರಲ್ಲಿ ತನ್ನ ಸ್ನೇಹಿತರೊಂದಿಗೆ ವಾಸವಿದ್ದ ವಿರಾಜಪೇಟೆಯ ಅಭಿಜಾರ್ಜ್ (20) ಗುರುವಾರ ಬೆಳಗ್ಗೆ ತಾನು ಮಲಗಿದ್ದ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಳ್ಯದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ 5ನೇ ಸೆಮಿಸ್ಟರ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ. ಸುಳ್ಯ ಪೊಲೀಸರು ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.
Next Story





