Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೋಲು, ಕಷ್ಟಗಳನ್ನು ಸವಾಲಾಗಿ...

ಸೋಲು, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು: ಕೃಷ್ಣ ಜೆ. ಪಾಲೆಮಾರ್

ವಾರ್ತಾಭಾರತಿವಾರ್ತಾಭಾರತಿ22 Jan 2025 2:56 PM IST
share
ಸೋಲು, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು: ಕೃಷ್ಣ ಜೆ. ಪಾಲೆಮಾರ್

ಮಂಗಳೂರು, ಜ. 22: ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಊರು ಬಿಟ್ಟಿಲ್ಲ, ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸ್ವೀಕರಿಸುವ ಎದೆಗಾರಿಕೆ ನಮ್ಮಲ್ಲಿ ಇದ್ದಾಗ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅಭಿಪ್ರಾಯಿಸಿದ್ದಾರೆ.

ಬುಧವಾರ ಮಂಗಳೂರು ಪ್ರೆಸ್‌ಕ್ಲಬ್‌ನ 18ನೆ ಗೌರವ ಅತಿಥಿ ಸನ್ಮಾನ ಸ್ವೀಕರಿಸಿ ಅವರು ತಮ್ಮ ಬದುಕಿನ ಸೋಲು ಗೆಲುವಿನ ಹಾದಿಯನ್ನು ತೆರೆದಿಟ್ಟರು.

ತಾವು ಬಯಸಿದ ಅಂಕಗಳು ದೊರಕಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗುವುದನ್ನು ನಾವು ಕಾಣುತ್ತಿದ್ದೇವೆ. ಆದರೆ ಜೀವನದಲ್ಲಿ ಎದುರಾಗುವ ಕಷ್ಟಗಳನ್ನು ಆತ್ಮಸ್ಥೈರ್ಯದಿಂದ ಎದುರಿಸುವ ಮನೋಸ್ಥೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಕರೆ ನೀಡಿದ ಅವರು, ನಮ್ಮ ದುಡಿಮೆಯ ಲಾಭಾಂಶದಲ್ಲಿ ಸಮಾಜಕ್ಕೂ ದೊರಕಬೇಕೆಂಬ ನಿಟ್ಟಿನಲ್ಲಿ ಈವರೆಗೂ ವ್ಯವಹಾರ ನಡೆಸಿಕೊಂಡು ಬಂದಿರುವುದಾಗಿ ಹೇಳಿದರು.

ಶಾಲೆಗೆ ಹೋಗುತ್ತಿದ್ದ ಸಂದರ್ಭ ಮೋರ್ಗನ್ಸ್‌ಗೇಟ್‌ನ ಗೇರುಬೀಜ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ತಾನು ಮುಂದೊಂದು ದಿನ ಆ ಇಡೀ ಆಸ್ತಿಯನ್ನೇ ಖರೀದಿಸುವಷ್ಟು ಶಕ್ತನಾಗುತ್ತೇನೆಂಬ ಕನಸು ಕಂಡಿರಲಿಲ್ಲ. ಆದರೆ ದುಡಿಮೆ ಹಾಗೂ ವ್ಯವಹಾರದಲ್ಲಿ ಪ್ರಾಮಾಣಿಕತೆ ಹಾಗೂ ಬದ್ಧತೆಯನ್ನು ಮೈಗೂಡಿಸಿಕೊಂಡ ಕಾರಣ ಅದು ಇಂದು ಸಾಧ್ಯವಾಗಿದೆ ಎಂದವರು ಹೇಳಿದರು.

ಸಣ್ಣ ಪುಟ್ಟ ವ್ಯವಹಾರ ನಡೆಸುತ್ತಿದ್ದ ಸಂದರ್ಭ ರಿಯಲ್ ಎಸ್ಟೇಟ್ ಆರಂಭಿಸಿದಾಗ ಸಿ.ಎಲ್. ಡಿಸೋಜಾ ಎಂಬವರು ಗಾಡ್‌ಫಾದರ್ ಆಗಿ ಬೆಂಬಲ ನೀಡಿದ ಕಾರಣ ವ್ಯವಹಾರದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ನೆನಪಿಸಿಕೊಂಡ ಕೃಷ್ಣ ಪಾಲೆಮಾರ್, ಜಿಲ್ಲಾ ಉಸ್ತುವಾರಿ, ಬಂದರು ಇಲಾಖೆ, ಪರಿಸರ ಇಲಾಖೆಯ ಸಚಿವನಾಗಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸಿದ ತೃಪ್ತಿ ಇದೆ. ಸಚಿವನಾಗಿದ್ದ ಅವಧಿಯಲ್ಲಿ ಮೆರಿಟೈಮ್ ಬೋರ್ಡ್ ಸ್ಥಾಪನೆ ಮಾಡಿದ ತೃಪ್ತಿ, 40 ಮೈಕ್ರೋನ್‌ಗಿಂತ ಕಡಿಮೆ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ ಬಗ್ಗೆ ಹೆಮ್ಮೆ ಇದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಮ್ಮ ಕುಡ್ಲ ವಾಹಿನಿ ಸಿಇಒ ಕದ್ರಿ ನವನೀತ ಶೆಟ್ಟಿ, ತಾನು ಹಿಂದೆ ಹೇಗಿದ್ದೆ ಎಂಬುದನ್ನು ಮರೆಯದೆ, ಈಗಿರುವ ಸ್ಥಿತಿಯನ್ನು ಅರ್ಥಮಾಡಿಕೊಂಡು ಮುಂದೆ ಹೇಗೆ ಹೋಗಬೇಕು ಎಂಬುದಕ್ಕೆ ಕೃಷ್ಣ ಜೆ. ಪಾಲೆಮಾರ್ ಅವರ ಜೀವನ ಉತ್ತಮ ಉದಾಹರಣೆ. ಅವರೊಬ್ಬ ಉದ್ಯಮಿ, ರಾಜಕಾರಣಿಗಿಂತಲೂ ಮುಖ್ಯವಾಗಿ ಸಹೃದಯಿಯಾಗಿ ಗುರುತಿಸಲ್ಪಡುತ್ತಾರೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್., ಪ್ರೆಸ್‌ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹೀಂ ಅಡ್ಕಸ್ಥಳ ಉಪಸ್ಥಿತರಿದ್ದರು. ಪತ್ರಕರ್ತ ಅತ್ಮಭೂಷಣ್ ಕಾರ್ಯಕ್ರಮ ನಿರೂಪಿಸಿದರು.

ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಪಾಲೆಮಾರ್, ಸಚಿವನಾಗಿದ್ದ ಸಂದರ್ಭ ನಾನು ಸ್ವತಹ ದುಡಿಯಲು ಸಾಧ್ಯವಾಗಿರಲಿಲ್ಲ. ಸಾರ್ವಜನಿಕ ಸೇವೆಯ ನೆಲೆಯಲ್ಲಿ ಇದ್ದದ್ದನ್ನು ಕಳೆದುಕೊಳ್ಳಬೇಕಾಯಿತು. ಅದರಿಂದ ದೂರ ಆಗಿ ಇದೀಗ ಮತ್ತೆ ಸಂಪತ್ತು ಮಾಡುತ್ತಿದ್ದೇನೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X