Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಹಾಸ್ ಶೆಟ್ಟಿ ಹತ್ಯೆ | ಬಂದ್ ನೆಪದಲ್ಲಿ...

ಸುಹಾಸ್ ಶೆಟ್ಟಿ ಹತ್ಯೆ | ಬಂದ್ ನೆಪದಲ್ಲಿ ಕೋಮುಹಿಂಸೆಗೆ ಯತ್ನ ಖಂಡನೀಯ: ಸಿಪಿಎಂ

"ಅಹಿತಕರ ಘಟನೆಗಳಿಗೆ ಬಂದ್ ಗೆ ಕರೆ ನೀಡಿರುವವರನ್ನು ಹೊಣೆಯಾಗಿಸಿ ಮೊಕದ್ದಮೆ ಹೂಡಬೇಕು"

ವಾರ್ತಾಭಾರತಿವಾರ್ತಾಭಾರತಿ2 May 2025 4:13 PM IST
share
ಸುಹಾಸ್ ಶೆಟ್ಟಿ ಹತ್ಯೆ | ಬಂದ್ ನೆಪದಲ್ಲಿ ಕೋಮುಹಿಂಸೆಗೆ ಯತ್ನ ಖಂಡನೀಯ: ಸಿಪಿಎಂ

ಮಂಗಳೂರು: ಫಾಝಿಲ್ ಕೊಲೆ ಪ್ರಕರಣ ಹಾಗೂ ವಿವಿಧ ಕ್ರಿಮಿನಲ್ ಪ್ರಕರಣಗಳ ಆರೋಪಿ, ಸಂಘ ಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಬರ್ಬರ ಹತ್ಯೆ ಕೃತ್ಯ ಹಾಗೂ ಆ ನೆಪದಲ್ಲಿ ಸಂಘ ಪರಿವಾರ ಬಂದ್ ಗೆ ಕರೆ ನೀಡಿ ಇರಿತ, ಕಲ್ಲು ತೂರಾಟದ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಿರುವುದು, ಇವೆರಡೂ ಖಂಡನೀಯ. ಜಿಲ್ಲೆಯ ಜನತೆ ಧರ್ಮದ ಮುಖವಾಡದ ರಾಜಕೀಯ ಪ್ರೇರಿತ ಪ್ರಚೋದನೆಗಳಿಗೆ ಬಲಿಯಾಗದೆ ಶಾಂತಿ ಕಾಪಾಡಬೇಕು ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿ ಮನವಿ ಮಾಡಿದೆ.

ಕಳೆದ ಒಂದೆರಡು ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ಸೌಹಾರ್ದ ಕದಡುವ ಹಲವು ಘಟನೆಗಳು ವ್ಯವಸ್ಥಿತವಾಗಿ ನಡೆದಿವೆ. ಜಿಲ್ಲಾಡಳಿತದ ವೈಫಲ್ಯ, ಸೋಮಾರಿತನವೂ ಸೇರಿಕೊಂಡು ಅದೀಗ ಸ್ಫೋಟಕ ಸ್ಥಿತಿಗೆ ತಲುಪಿದೆ. ದಕ್ಷಿಣ ಕನ್ನಡ ಜಿಲ್ಲೆ ಪ್ರತೀಕಾರದ ಹೆಸರಿನ ಮತೀಯ ಕೊಲೆಗಳಿಗೆ ದಶಕದಿಂದ ಕುಖ್ಯಾತಗೊಂಡಿದೆ. ಸುಹಾಸ್ ಶೆಟ್ಟಿ ಹತ್ಯೆ ಆ ಸರಣಿಗೆ ಹೊಸ ಸೇರ್ಪಡೆ. ಹತ್ತಾರು ಸಂಖ್ಯೆಯಲ್ಲಿ ನಡೆದಿರುವ ಇಂತಹ ಸರಣಿ ಕೊಲೆಗಳು ದ.ಕ. ಜಿಲ್ಲೆಯ ರಾಜಕೀಯ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳನ್ನು ಜರ್ಜರಿತಗೊಳಿಸಿವೆ. ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ, ಕುತ್ತಾರ್ ಕೊರಗಜ್ಜನ ಕ್ಷೇತ್ರದಲ್ಲಿ ದ್ವೇಷ ಭಾಷಣದ ಸಂದರ್ಭದಲ್ಲಿ ಜಿಲ್ಲಾಡಳಿತ ಸರಿಯಾದ ಕಾನೂನು ಕ್ರಮಗಳನ್ನು ಕೈಗೊಂಡಿದ್ದರೆ ಪರಿಸ್ಥಿತಿ ಹತೋಟಿ ಮೀರುತ್ತಿರಲಿಲ್ಲ. ಆ ಸಂದರ್ಭ ಉಸ್ತುವಾರಿ ಸಚಿವರು ಸೇರಿದಂತೆ ಸರಕಾರದ ಆಯಕಟ್ಟಿನ ಜಾಗದಲ್ಲಿ ಇದ್ದವರೆ ಕಾನೂನಾತ್ಮಕ ಕ್ರಮಗಳಿಗೆ ಹಿಂದೇಟು ಹಾಕಿದ್ದು ಮುಂದಕ್ಕೆ ಹಲವು ಅಹಿತಕರ ಬೆಳವಣಿಗೆಗಳಿಗೆ ದಾರಿಯಾಯ್ತು. ಅದೀಗ ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ, ಸುಹಾಸ್ ಶೆಟ್ಟಿಯ ಹತ್ಯೆಯ ಘಟನೆಗಳವರೆಗೂ ದಾರಿ ಮಾಡಿಕೊಟ್ಟಿತು ಎಂದು ಸಿಪಿಎಂ ಆಪಾದಿಸಿದೆ.

ಸುಹಾಸ್ ಕೊಲೆ ಪ್ರಕರಣವನ್ನು ಎಲ್ಲಾ ಆಯಾಮಗಳಿಂದಲೂ ತನಿಖೆ ನಡೆಸಿ ಅದರ ಹಿಂದಿನ ಹುನ್ನಾರಗಳನ್ನು ಬಯಲಿಗೆಳೆಯಬೇಕಿದೆ. ಕೊಲೆ ನಡೆದ ರೀತಿ ನಾಗರಿಕರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಕ್ರಿಮಿನಲ್ ಗಳಿಗೆ ಕಾನೂನಿನ ಭಯವೇ ಇಲ್ಲ ಎಂಬುದನ್ನು ಎತ್ತಿ ತೋರಿಸಿದೆ. ಅದೇ ಸಂದರ್ಭ, ಈ ಕೊಲೆ ಪ್ರಕರಣವನ್ನು ಮುಂದಿಟ್ಟು ಸಂಘಪರಿವಾರ, ಬಿಜೆಪಿ ಶಾಸಕರುಗಳು ಕೋಮು ಸಂಘರ್ಷಕ್ಕೆ ಪ್ರಚೋದಿಸುತ್ತಿರುವುದು, ಬಲವಂತದ ಬಂದ್ ಆಚರಿಸಿರುವುದು, ಬಂದ್ ಸಂದರ್ಭ ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಹಲವರ ಮೇಲೆ ಕೊಲೆ ಯತ್ನ ನಡೆದಿರುವುದು ಜನತೆಯಲ್ಲಿ ಭೀತಿ ಉಂಟು ಮಾಡಿದೆ. ದಿಢೀರ್ ಬಂದ್, ಹಿಂಸೆಗಳು ಸಂಘಪರಿವಾರ ಜಿಲ್ಲೆಯಲ್ಲಿ ಕೋಮು ಸಂಘರ್ಷ ಉಂಟು ಮಾಡಲು ವ್ಯವಸ್ಥಿತ ಯತ್ನ ನಡೆಸುತ್ತಿರುವ ಅನುಮಾನ ಮೂಡಿಸುತ್ತಿದೆ. ಸುಹಾಸ್ ಕೊಲೆಯ ತರುವಾಯದ ಇರಿತ, ಕೊಲೆಯತ್ನ, ಕಲ್ಲು ತೂರಾಟದ ಘಟನೆಗಳನ್ನೂ ಸರಿಯಾದ ತನಿಖೆಗೆ ಒಳಪಡಿಸಬೇಕು, ಬಂದ್ ಗೆ ಕರೆ ನೀಡಿರುವವರನ್ನು ಈ ಘಟನೆಗಳಿಗೆ ಹೊಣೆಯಾಗಿಸಿ ಮೊಕದ್ದಮೆ ಹೂಡಬೇಕು ಎಂದು ಸಿಪಿಎಂ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X