ಸುಳ್ಯ: ನೇಣು ಬಿಗಿದ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ (AI)
ಸುಳ್ಯ: ಆತ್ಮಹತ್ಯೆಗೆ ಪ್ರಯತ್ನಿಸಿ ನೇಣು ಬಿಗಿದು ಜಿಗಿದ ವೇಳೆ ಹಗ್ಗ ತುಂಡಾಗಿ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಲುಗುಂಡಿಯಲ್ಲಿ ನಡೆದಿದೆ.
ಕಲ್ಲುಗುಂಡಿ ಕೂಲಿಶೆಡ್ ಬಳಿ ಕಳೆದ ಹಲವು ವರ್ಷಗಳಿಂದ ಹೋಟೆಲ್ ಕಾರ್ಮಿಕರಾಗಿ ದುಡಿಯುತ್ತಿದ್ದ ಐವರ್ನಾಡು ಗ್ರಾಮದ ಮಾಧವ (60)ಎಂಬವರು ಅವರ ಬಾಡಿಗೆ ರೂಮಿನಲ್ಲಿ ಡಿ. 5ರಂದು ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಬಿಗಿದು ಕೆಳಕ್ಕೆ ಜಿಗಿದ ಸಂದರ್ಭ ಕೇಬಲ್ ತುಂಡಾಗಿ ನೆಲಕ್ಕೆ ಬಿದ್ದು ತಲೆಗೆ ಗಾಯವಾಗಿತ್ತು. ಅವರು ಸುಳ್ಯ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಮೃತಪಟ್ಟರು. ಸುಳ್ಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
Next Story





