ಸುಳ್ಯ | ಮನೆಗೆ ನುಗ್ಗಿ ಕಾಣಿಕೆ ಡಬ್ಬಿ ಕಳವು

ಸುಳ್ಯ, ನ.26: ಮನೆಯೊಂದಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಡಬ್ಬಿ ಕಳವುಗೈದ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಬಿಳಿಯಾರು ಬಸ್ ನಿಲ್ದಾಣ ಬಳಿ ಇರುವ ಅಬ್ದುಲ್ಲ ಮಾವಿನಕಟ್ಟೆ ಅವರ ಮನೆಯ ಹಿಂಬಾಗಿಲು ಮುರಿದು ಒಳನು
ಗ್ಗಿದ ಕಳ್ಳರು ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ ಏನು ಸಿಗದಿದ್ದಾಗ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕದ್ದೊಯ್ದಿದ್ದಾರೆ.
ಮಾಹಿತಿ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





