ಸುಳ್ಯ | ರಸ್ತೆ ಅಪಘಾತದ ಗಾಯಾಳು ಮೃತ್ಯು

ಸಾಂದರ್ಭಿಕ ಚಿತ್ರ
ಸುಳ್ಯ, ನ.22: ಬೈಕ್ ಸ್ಕಿಡ್ಡಾಗಿ ಬಿದ್ದ ಪರಿಣಾಮ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಸುಳ್ಯದ ಹಳೆಗೇಟು ತಮಿಳು ಕಾಲನಿ ನಿವಾಸಿ ರಾಮಕೃಷ್ಣ (52) ಮೃತಪಟ್ಟವರು.
ಇವರು ನ.19ರಂದು ರಾತ್ರಿ ಹಳೆಗೇಟಿನಿಂದ ತಮಿಳು ಕಾಲನಿಯ ಮನೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭ ಸ್ಕಿಡ್ಡಾಗಿ ರಸ್ತೆಯಲ್ಲಿ ಬಿದ್ದಿದ್ದರು. ಪರಿಣಾಮ ಗಂಭೀರ ಗಾಯಗೊಂಡ ಅವರನ್ನು ಸ್ಥಳೀಯರು ಕೂಡಲೇ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮೃತಪಟ್ಟಿದ್ದಾರೆ.
ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
Next Story





