Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಳ್ಯ | ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ...

ಸುಳ್ಯ | ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ದ್ವಿತೀಯ ಬಿರುದುದಾನ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ31 Jan 2026 11:32 PM IST
share
ಸುಳ್ಯ | ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ದ್ವಿತೀಯ ಬಿರುದುದಾನ ಸಮ್ಮೇಳನ
ನುಸ್ರತುಲ್ ಇಸ್ಲಾಂ ಎಸೋಸಿಯೇಶನ್‌ನ 42ನೇ ವಾರ್ಷಿಕ ಸಮಾರಂಭ

ಸುಳ್ಯ :ಇಕ್ರಾಮುಸ್ಸುನ್ನ ದ್ವಿತೀಯ ಬಿರುದುದಾನ ಸಮ್ಮೇಳನ ಹಾಗೂ ನುಸ್ರತುಲ್ ಇಸ್ಲಾಂ ಎಸೋಸಿಯೇಶನ್‌ನ 42ನೇ ವಾರ್ಷಿಕ ಸಮಾರಂಭವು ಎಲಿಮಲೆ ಮಸೀದಿ ವಠಾರದಲ್ಲಿ ಭವ್ಯ ಹಾಗೂ ವಿಜೃಂಭಣೆಯಿಂದ ಸಮಾಪ್ತಿಗೊಂಡಿತು.

ಸೈಯದ್ ಮುಹ್ಸಿನ್ ತಂಙಳ್ ಅವರು ನಡೆಸಿಕೊಂಡು ಬರುತ್ತಿರುವ ಇಕ್ರಾಮುಸ್ಸುನ್ನ ದರ್ಸ್ ಎಲಿಮಲೆ ಹಾಗೂ ಯುವಕರ ಸಂಘಟನೆಯಾದ ನುಸ್ರತ್ ಇವರ ಸಂಯುಕ್ತ ಆಶ್ರಯದಲ್ಲಿಜ.29ರಂದು ಬೆಳಿಗ್ಗೆ ಧ್ವಜಾರೋಹಣದೊಂದಿಗೆ ಆರಂಭವಾದ ಕಾರ್ಯಕ್ರಮವು, ವಿವಿಧ ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳೊಂದಿಗೆ ಜ.30ರ ಶುಕ್ರವಾರ ಸಂಜೆವರೆಗೆ ನಡೆಯಿತು.

ಕಾರ್ಯಕ್ರಮದ ಅಂಗವಾಗಿ ಎಲಿಮಲೆ ತಂಙಳ್ ಅವರ ಪಿತಾಮಹರ ಆಂಡ್ ನೇರ್ಚೆ, ಮಹಿಳೆಯರಿಗಾಗಿ ವಿಶೇಷ ಧಾರ್ಮಿಕ ತರಗತಿಗಳು, ಬೃಹತ್ ಬುರ್ದಾ ಮಜ್ಲಿಸ್, ನಅತ್ ಶರೀಫ್, ಮೆಡ್ ಲ್ಯಾಂಡ್ ಆಸ್ಪತ್ರೆಯ ಸಹಯೋಗದಲ್ಲಿ ಸಾರ್ವಜನಿಕರಿಗಾಗಿ ಉಚಿತ ವೈದ್ಯಕೀಯ ಶಿಬಿರ, ಗಲ್ಫ್ ಮೀಟ್, ಹಳೆ ವಿದ್ಯಾರ್ಥಿಗಳ ಅಲೂಮ್ನಿ ಮೀಟ್ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದ ಪ್ರಯುಕ್ತ ಎರಡು ದಿನಗಳ ಕಾಲ ಅನ್ನದಾನವೂ ನಡೆಯಿತು.

ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಸೈಯದ್ ಝೈನುಲ್ ಆಬಿದೀನ್ ತಂಙಳ್ ದುಗ್ಗಲಡ್ಕರವರು ಕಾರ್ಯಕ್ರಮವನ್ನು ಉದ್ಗಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನುಸ್ರತ್ ಅಧ್ಯಕ್ಷ ಲತೀಫ್ ಹರ್ಲಡ್ಕ ರವರು ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದ ನೇತೃತ್ವ ಸೈಯದ್ ಮುಹ್ಸಿನ್ ತಂಙಳ್ ಕುಂಜಿಲಂ (ಎಲಿಮಲೆ ತಂಙಳ್) ವಹಿಸಿದರು. ಪ್ರಖ್ಯಾತ ವಾಗ್ಮಿ ಮುಳ್ಳೂರುಕೆರೆ ಮುಹಮ್ಮದಲಿ ಸಖಾಫಿಯವರು ಮುಖ್ಯ ಪ್ರಭಾಷಣವನ್ನು ಮಾಡಿದರು.

ಸೈಯಿದ್ ಕುಂಞಿಕೋಯ ತಂಙಳ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮುಸ್ತಫಾ ಪೂಕೋಯ ತಂಙಳ್ ಮಂಬಾಡ್ ಅತಿಥಿಗಳಾಗಿ ಉಪಸ್ಥಿತರಿದ್ದರು

ಈ ಸಂದರ್ಭದಲ್ಲಿ ಸೈಯಿದ್ ನೂರುಸ್ಸಾದಾತ್ ಬಾಯಾರ್ ತಂಙಳ್ ಅವರು ಬಿರುದುದಾರರಿಗೆ ಬಿರುದು ಪ್ರದಾನ ಮಾಡಿ, ದುಆ ಆಧ್ಯಾತ್ಮಿಕ ಮಜ್ಲಿಸಿಗೆ ನೇತೃತ್ವ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿಯ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಜಮಾಅತ್ ಅಧ್ಯಕ್ಷ ಅಬ್ದುಲ್ ಖಾದರ್ ಪಾಣಾಜೆ, ಸ್ಥಳೀಯ ಮುದರಿಸ್ ಹಾರಿಸ್ ಸಖಾಫಿ ಅಲ್ ಸುರೈಜಿ, ಹಾಫಿಳ್ ಹಾಶಿರ್ ಹಿಮಮಿ ಸಖಾಫಿ, ಜೀರ್ಮುಖಿ ಇಮಾಮ್ ಅಬ್ದುಲ್ ಜಲೀಲ್ ಮುಈನಿ, ಅಬೂಬಕರ್ ಸಿದ್ದಿಕ್ ಹಿಮಮಿ ಹಾಜಿ ಅಬ್ದುಲ್ಲ ಕಟ್ಟೆಕಾರ್,ಸುಳ್ಯದ ಯುವ ಉದ್ಯಮಿ ಫೈಸಲ್ ಕಟ್ಟೆ ಕಾರ್, ಅರಂತೋಡು ಜುಮಾ ಮಸೀದಿಯ ಅಧ್ಯಕ್ಷರಾದ ಅಶ್ರಫ್ ಗುಂಡಿ, ಗುತ್ತಿಗಾರು ಜಮಾತ್ ಅಧ್ಯಕ್ಷ ಅಬ್ದುಲ್ ಖಾದರ್ ವಳಲಂಬೆ, ದುಗ್ಗಲಡ್ಕ ಮಸೀದಿ ಅಧ್ಯಕ್ಷ ಅಬ್ದುಲ್ ರಹಮಾನ್ ಕೊಳಂಜಿ ಕೋಡಿ, ಹಸೈನಾರ್ ವಳಲಂಬೆ, ಪೈಜಾರು ಮಸೀದಿ ಅಧ್ಯಕ್ಷ ಹಾಜಿ ಇಬ್ರಾಹಿಂ, ಇಕ್ರಮುಸ್ಸುನ್ನ ಮಾಜಿ ಮುದರಿಸರಾದ ಅಬೂಬಕರ್ ಸಕಾಫಿ ವಿಟ್ಲ, ಅನಸ್ ಅಝ್ಹರಿ, ಪಂಜ ನೆಕ್ಕಿಲ ಮುದರಿಸ್ ಝಿಯಾದ್ ಸಖಾಫಿ, ಜುನೈದ್ ಸಖಾಫಿ ಜೀರ್ಮುಕ್ಕಿ, ಜಿಸಿಸಿ ಅಧ್ಯಕ್ಷ ಸಿದ್ದೀಕ್ ಅಮ್ಜದಿ, ಅಶ್ರಫ್ ಸಖಾಫಿ ಮುದರ್ರಿಸ್ ಗಾಂಧಿನಗರ ಸುಳ್ಯ, ಜಮಾತ್ ಮಾಜಿ ಅಧ್ಯಕ್ಷರುಗಳಾದ ಮೂಸ ಹಾಜಿ, ಸುಳ್ಯ ತಾಲೂಕು ಮುಸ್ಲಿಂ ಯುವ ಒಕ್ಕೂಟದ ಅಧ್ಯಕ್ಷ ಮಹಮ್ಮದ್ ಇಕ್ಬಾಲ್ ಎಲಿಮಲೆ, ಶಾಫಿ ಕುತ್ತ ಮೊಟ್ಟೆ, ಜೀರ್ಮುಖಿ ಮಸೀದಿ ಅಧ್ಯಕ್ಷರಾದ ಹಸನ್ ಹಲ್ಲಡ್ಕ, ತರಬಿಯತ್ ಅಧ್ಯಕ್ಷ ಲತೀಫ್ ಕ್ವಾಲಿಟಿ, ದ ಟ ಜಿಲ್ಲ ಸಮಿತಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಮೊಗರ್ಪಣೆ, ಜಮಾತ್ ಕಾರ್ಯದರ್ಶಿ ಇಬ್ರಾಹಿಂ ಜೀರ್ಮುಖಿ, ಆಲಿ ಹಾಜಿ ಕಲ್ಲು ಗುಂಡಿ, ಹನೀ ಫ್ ಪೈಚಾರ್, ಹಮೀದ್ ಬಾಕಿಲ, ಹಂಸ ದೊಡ್ಡ ತೋಟ,ಅಶ್ರಫ್ ಹಾಜಿ ಸೂರತ್ಕಲ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಸೂಫಿ ಎಲಿಮಲೆ ಸ್ವಾಗತಿಸಿ, ಅಶ್ರಫ್ ಜಿ.ಎ.ಕೆ. ವಂದಿಸಿದರು.

Tags

Sullia
share
ವಾರ್ತಾಭಾರತಿ
ವಾರ್ತಾಭಾರತಿ
Next Story
X