ಸುಳ್ಯ | ತಾಲೂಕು ಮಟ್ಟದ 14ರ ವಯೋಮಾನದ ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಸುಳ್ಯ : ತಾಲೂಕು ಮಟ್ಟದ 14 ರ ವಯೋಮಾನದ ಬಾಲಕ -ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಸುಳ್ಯದ ಮಾದರಿ ಪ್ರಾಥಮಿಕ ಶಾಲೆಯ ಆಯೋಜನೆಯಲ್ಲಿ ಅಮೃತಭವನದಲ್ಲಿ ನಡೆಯಿತು.
ಪಂದ್ಯಾಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿರಾಜ ಅಡ್ಕಾರ್ ವಹಿಸಿದ್ದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಫಿ ಪೆರಾಜೆ, ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ, ನಿವೃತ ದೈಹಿಕ ಶಿಕ್ಷಣ ಶಿಕ್ಷಕ ರಘುನಾಥ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಸುನಂದ ಶೆಟ್ಟಿ ಉಪಸ್ಥಿತರಿದ್ದರು.
ಪಂದ್ಯಾಟದಲ್ಲಿ ತಾಲೂಕಿನ ಬಾಲಕ ಬಾಲಕಿಯರ ಸುಮಾರು 25 ತಂಡಗಳು ಭಾಗವಹಿಸಿದ್ದವು. ವಿಜೇತರಿಗೆ ಬಹುಮಾನದ ಪ್ರಾಯೋಜಕರಾಗಿ ಸಿಲ್ವಿನ್ ರಾಜ್ ಮತ್ತು ರಂಗನಾಥ ಸಹಕರಿಸಿದರು.
ಮುಖ್ಯ ಶಿಕ್ಷಕಿ ಸುನಂದಾ ಸ್ವಾಗತಿಸಿ, ಶಿಕ್ಷಕಿ ಹೇಮಲತಾ ವಂದಿಸಿದರು. ಮಲ್ಲಿಕಾ ಕಾರ್ಯಕ್ರಮ ನಿರೂಪಿಸಿದರು.
Next Story





