ಡಿ.11ರಂದು ಸುರತ್ಕಲ್ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ

ಮಂಗಳೂರು, ಡಿ.10: ಸುರತ್ಕಲ್ ಹೋಬಳಿ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಡಿ.11ರಂದು ಬ್ರಹ್ಮಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ವಠಾರದಲ್ಲಿ ನಡೆಯಲಿದೆ.
ಆಡಳಿತ ಅಧಿಕಾರಿ ಗಣೇಪುರ ಶ್ರೀ ಮಹಾಗಣಪತಿ ದೇವಸ್ಥಾನ ಆಡಳಿತ ಅಧಿಕಾರಿ ನವೀನ್ ಕುಮಾರ್ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಹಿರಿಯ ಸಾಹಿತಿ ಗೀತಾ ಸುರತ್ಕಲ್ ಅಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಉದ್ಘಾಟನೆಯನ್ನು ಕಸಾಪ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ನೆರವೇರಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story





