Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ...

ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಬೆನ್ನತ್ತಿದ್ದ ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳುವ ವೇಳೆ ಅಪಘಾತ: ಆರೋಪ

ವಾರ್ತಾಭಾರತಿವಾರ್ತಾಭಾರತಿ20 Dec 2024 11:19 PM IST
share
ಸುರತ್ಕಲ್: ಬಸ್ ಢಿಕ್ಕಿ; ದ್ವಿಚಕ್ರ ವಾಹನ ಸವಾರ ಮೃತ್ಯು

ಸುರತ್ಕಲ್, ಡಿ.20: ಹೆಲ್ಮೆಟ್ ಧರಿಸದ ದ್ವಿಚಕ್ರ ಸವಾರರೊಬ್ಬರನ್ನು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೆನ್ನು ಹತ್ತಿದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ಕಾನ ಕುಳಾಯಿ ಗುಡ್ಡೆ ಜಂಕ್ಷನ್‌ನಲ್ಲಿ ಶುಕ್ರವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ಕಾನ ನಿವಾಸಿ ರೆಮ್ಮಿ (38) ಎಂದು ಗುರುತಿಸಲಾಗಿದೆ. ಘಟನೆ ಸಂಭವಿಸುತ್ತಿದ್ದಂತೆ ದ್ವಿಚಕ್ರ ವಾಹನ ಬೆನ್ನಟ್ಟಿದ್ದ ಪೊಲೀಸ್ ಸಿಬ್ಬಂದಿ ಬಸ್ ಹತ್ತಿ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಕುಳಾಯಿಯಲ್ಲಿ ಟ್ಯೂಶನ್‌ಗೆ ತೆರಳಿದ್ದ ಮಗಳನ್ನು ಕರೆತರಲೆಂದು ರೆಮ್ಮಿ ತನ್ನ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಸಂಚರಿಸುತ್ತಿದ್ದರೆನ್ನಲಾಗಿದೆ. ಕುಳಾಯಿಗುಡ್ಡೆ ಜಂಕ್ಷನ್ ಬಳಿ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದ ಮಂಗಳೂರು ಉತ್ತರ ಸಂಚಾರ ಪೊಲೀಸರು ರೆಮ್ಮಿಯನ್ನು ಬೆನ್ನಟ್ಟಿ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.

ಇದನ್ನು ಗಮನಿಸಿದ ರೆಮ್ಮಿ ಸುರತ್ಕಲ್ ಕಡೆಗೆ ಅತಿ ವೇಗದಿಂದ ತನ್ನ ದ್ವಿಚಕ್ರ ವಾಹನವನ್ನು ತಿರುಗಿಸಿದಾಗ ಎದರುರಿನಿಂದ ಬರುತ್ತಿದ್ದ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟ ರೆಮ್ಮಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.

ಸಾರ್ವಜನಿಕರಿಂದ ರಸ್ತೆ ತಡೆದು ಪ್ರತಿಭಟನೆ

ಅಪಘಾತ ನಡೆದ ಬೆನ್ನಲ್ಲೇ ಸ್ಥಳದಲ್ಲಿ ಜಮಾಯಿಸಿದ ಸಾರ್ವಜನಿಕರು ಪೊಲೀಸರ ಕ್ರಮವನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.

ಇಂದು ನಡೆದ ಅಪಘಾತಕ್ಕೆ ಪೊಲೀಸರ ಅನಾಗರಿಕ ವರ್ತನೆಯೇ ಕಾರಣ. ತಪ್ಪಿತಸ್ಥ ಪೊಲೀಸ್ ಅಧಿಕಾರಿ, ಸಿಬ್ಬಂದಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ ಸಾರ್ವಜನಿಕರು ಸುರತ್ಕಲ್ - ಕಾನ ಮುಖ್ಯ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ರಾತ್ರಿ 10 ಗಂಟೆಯ ಬಳಿಕವಷ್ಟೇ ಗ್ಯಾಸ್ ಟ್ಯಾಂಕರ್‌ಗಳು, ಘನ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬೇಕು. ಖಾಸಗಿ ಬಸ್‌ಗಳ ಅತಿ ವೇಗಕ್ಕೆ ಕಡಿವಾಣ ಹಾಕಲು ಮುಖ್ಯ ಸ್ಥಳಗಳಲ್ಲಿ ಸ್ಪೀಡ್ ಬ್ರೇಕರ್‌ಗಳನ್ನು ಅಳವಡಿಸಬೇಕು. ಅಪಘಾತ ಪ್ರದೇಶಗಳನ್ನು ಗುರುತಿಸಿ ಬ್ಯಾರಿಕೇಡ್ ಗಳನ್ನು ಅಳವಡಿಸುವ ಕೆಲಸ ಪೊಲೀಸ್ ಇಲಾಖೆಯಿಂದ ಆಗಬೇಕೆಂದು ಮಂಗಳೂರು ಮಹಾನಗರ ಪಾಲಿಕೆಯ ನಾಮ ನಿರ್ದೇಶಿತ ಸದಸ್ಯ ಕಿಶೋರ್ ಕುಮಾರ್ ಸಹಿತ ನಾಗರಿಕರು ಪೊಲೀಸರನ್ನು ಆಗ್ರಹಸಿದರು.

ಸ್ಥಳಕ್ಕೆ ಬಂದ ಮನಪಾ ಸ್ಥಳೀಯ ಕಾರ್ಪೊರೇಟರ್ ವರುಣ್ ಚೌಟರನ್ನು ನಾಗರಿಕರು ತರಾಟೆಗೈದರು.

ಈ ವೇಳೆ ಸ್ಥಳಕ್ಕಾಗಮಿಸಿದ ಸುರತ್ಕಲ್ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯನ್ನು ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬಳಿಕ ʼವಾರ್ತಾಭಾರತಿʼ ಜೊತೆ ಮಾತನಾಡಿದ ಕಾರ್ಪೊರೇಟರ್ ವರಣ್ ಚೌಟ ಅವರು, ಸಾರ್ವಜನಿಕರ ಅಹವಾಲು ಗಳನ್ನು ಆಲಿಸಿದ್ದೇನೆ. ರೈಲ್ವೇ ಮೇಲ್ಸೇತುವೆ ಕಾಮಗಾರಿ ಮುಗಿಯುವ ವರೆಗೆ ಈ ಭಾಗದಲ್ಲಿ ಕೇಸು ಹಾಕುವುದನ್ನು ನಿಲ್ಲಿಸುವಂತೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಗುವುದು. ರಾತ್ರಿ 10 ಗಂಟೆಯ ನಂತರವೇ ಗ್ಯಾಸ್ ಟ್ಯಾಂಕರ್ ಗಳನ್ನು ಬಿಡುವಂತೆ ಎಂಆರ್‌ಪಿಎಲ್ ಗೆ ಪತ್ರ ಬರೆಯಲಾಗುವುದು. ಟ್ರಾಫಿಕ್ ಪೊಲೀಸರ ಜೊತೆ ಚರ್ಚಿಸಿ ಖಾಸಗಿ ಸಿಟಿ ಬಸ್ ಗಳ ವೇಗ ನಿಯಂತ್ರಣಕ್ಕೆ ಸ್ಪೀಡ್ ಬ್ರೇಕರ್ ನಿರ್ಮಾಣದ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X